BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ತುಮಕೂರು

ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್

By News Desk BenkiyabaleUpdated:December 18, 2023 6:15 pm

ತುಮಕೂರು :

ಕೊರಟಗೆರೆ ತಾಲ್ಲೂಕು ಚಿಕ್ಕಪಾಲನಹಳ್ಳಿ, ಧಮಗಲಯ್ಯನಪಾಳ್ಯ ಮತ್ತು ಬೋಳಬಂಡೆನಹಳ್ಳಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಂದು ಭೇಟಿ ನೀಡಿ, ಜಾನುವಾರು ಮೇವು ಬೆಳೆಗಳ ಕ್ಷೇತ್ರ ಪರಿಶೀಲನೆ, ಬರದ ಹಿನ್ನೆಲೆ ಟಾಸ್ಕ್ ಫೋರ್ಸ್ ಸಮಿತಿಯಿಂದ ಕೊರೆಸಿರುವ ಕೊಳವೆಬಾವಿ ಸ್ಥಳ ಪರಿಶೀಲನೆ ಮತ್ತು ಬರಗಾಲ ಪರಿಸ್ಥಿತಿಯಿಂದ ಉಂಟಾದ ಬೆಳೆ ನಷ್ಟವನ್ನು ಪರಿಶೀಲಿಸಿದರು.
ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿ ವಿಟ್ಟಾರಾವುತನಹಳ್ಳಿಗೆ ಮೊದಲಿಗೆ ಭೇಟಿ ನೀಡಿದ ಅವರು, ರೈತ ದೊಡ್ಡಯ್ಯ ಮತ್ತು ದಾಸಪ್ಪ ಎಂಬುವವರ ರಾಗಿ ಹೊಲಕ್ಕೆ ಭೇಟಿ ನೀಡಿ ಹಾನಿಗೊಳಗಾದ ಬೆಳೆಯನ್ನು ವೀಕ್ಷಿಸಿ ರೈತರಿಗೆ ಬೆಳೆ ಪರಿಹಾರವನ್ನು ತ್ವರಿತಗತಿಯಲ್ಲಿ ಒದಗಿಸುವಂತೆ ಸ್ಥಳದಲ್ಲಿ ಹಾಜರಿದ್ದ ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತದ ನಂತರ ಕೋಳಾಲ ಹೋಬಳಿ ಚಿಕ್ಕಪಾಲನಹಳ್ಳಿ ಗ್ರಾಮದಲ್ಲಿ ಪಶುಸಂಗೋಪನೆ ಇಲಾಖೆಯಿಂದ ರಾಸುಗಳನ್ನು ಹೊಂದಿರುವ ರೈತರಿಗೆ ವಿತರಿಸಿದ ಉಚಿತ ಮೇವು ಬೀಜ ಬೆಳೆಗಳ ಕ್ಷೇತ್ರ ಪರಿಶೀಲನೆ ನಡೆಸಿದ ಅವರು, ರೈತರಿಗೆ ಮೇವಿನ ಕಿಟ್‌ಗಳನ್ನು ಕಾಲಮಿತಿಯೊಳಗಾಗಿ ಸಮರ್ಪಕವಾಗಿ ವಿತರಣೆ ಮಾಡುವಂತೆ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಚಿಕ್ಕಪಾಲನಹಳ್ಳಿ ಗ್ರಾಮದ ಕೆರೆಯ ನೀರನ್ನು ಅನಧಿಕೃತವಾಗಿ ಜಮೀನುಗಳಿಗೆ ಹರಿಸಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿದರು.
ಕೊರಟಗೆರೆ ತಾಲ್ಲೂಕಿಗೆ ಮೊದಲ ಹಂತದಲ್ಲಿ ೬೫೦೦ ಮೇವಿನ ಕಿಟ್‌ಗಳು ಬಂದಿದ್ದು, ಅವುಗಳನ್ನು ಅರ್ಹ ರೈತರಿಗೆ ಸಮರ್ಪಕವಾಗಿ ವಿತರಣೆ ಮಾಡಲಾಗಿದೆ. ಎರಡನೇ ಹಂತದಲ್ಲಿ ೧೦೦೦ ಮೇವಿನ ಕಿಟ್‌ಗಳು ಕಚೇರಿಗೆ ಬಂದಿದ್ದು, ಅವುಗಳನ್ನು ಇಂದಿನಿAದಲೇ ವಿಲೇವಾರಿ ಮಾಡಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರು ಈ ಸಂದರ್ಭ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಚನ್ನರಾಯನದುರ್ಗ ಹೋಬಳಿ ಧಮಗಲಯ್ಯನಪಾಳ್ಯ ಗ್ರಾಮಕ್ಕೆ ಭೇಟಿ ನೀಡಿ ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಅವಲೋಕಿಸಿ ಟಾಸ್ಕ್ ಫೋರ್ಸ್ ವತಿಯಿಂದ ಕೊಳವೆಬಾವಿ ಕೊರೆಸಿರುವ ಸ್ಥಳ ಪರಿಶೀಲನೆ ಮಾಡಿದರು. ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಕೊಳವೆ ಬಾವಿಗಳಲ್ಲಿ ಯಾವ ಪ್ರಮಾಣದಲ್ಲಿ ನೀರು ಇದೆ, ವಿದ್ಯುತ್ ಸಂಪರ್ಕ ವ್ಯವಸ್ಥೆ ಮತ್ತು ಪೈಪ್‌ಲೈನ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ ಗ್ರಾಮವಾರು ವರದಿ ನೀಡುವಂತೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದಲ್ಲಿ ಖಾಸಗಿ ಒಡೆತನದ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ತೆಗೆದುಕೊಂಡು ನೀರನ್ನು ಪೂರೈಕೆ ಮಾಡಬೇಕು, ನಂತರ ಕೊಳವೆ ಬಾವಿಗಳನ್ನು ಕೊರೆಸಬೇಕೆಂದು ಸೂಚಿಸಿದರು.
ಕಸಬಾ ಹೋಬಳಿ ಬೋಳಬಂಡೆನಹಳ್ಳಿ ಗ್ರಾಮದಲ್ಲಿ ಬರಗಾಲ ಪರಿಸ್ಥಿತಿಯಿಂದ ಉಂಟಾದ ಬೆಳೆ ನಷ್ಟವಾಗಿರುವ ಜಮೀನನ್ನು ಪರಿಶೀಲನೆ ನಡೆಸಿದರು. ತಾಲ್ಲೂಕಿನಲ್ಲಿ ಶೇಕಡಾ ೨೩ರಷ್ಟು ಮಳೆ ಕೊರತೆಯಾಗಿದೆ ಹಾಗೂ ಶೇಕಡಾ ೯೦ರಷ್ಟು ಬೆಳೆ ನಷ್ಟವಾಗಿದೆ ಎಂದು ರೈತರೊಬ್ಬರು ತಿಳಿಸಿದರು.
ಈ ಸಂದರ್ಭದಲ್ಲಿ ಪಶುಸಂಗೋಪನೆ ಉಪನಿರ್ದೇಶಕ ಡಾ: ಗಿರೀಶ್‌ಬಾಬು ರೆಡ್ಡಿ, ತಹಶೀಲ್ದಾರ್ ಮಂಜುನಾಥ್, ಕೃಷಿ ಇಲಾಖೆ ಉಪನಿರ್ದೇಶಕಿ ದೀಪಶ್ರೀ ಮುಂತಾದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಬೆಸ್ಕಾಂ ನಿಂದ ವಿದ್ಯುತ್ ಸುರಕ್ಷತಾ ಜಾಥಾ
Next Article ೬.೫೦ಲಕ್ಷ ಸಾಲದ ಆದೇಶ ಪತ್ರ ನೀಡಿದ ಕೆಎನ್‌ಆರ್
News Desk Benkiyabale

Related Posts

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.