BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿ.೨೯ ಮತ್ತು ೩೦ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಇತರೆ ಸುದ್ಧಿಗಳು

ಡಿ.೨೯ ಮತ್ತು ೩೦ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

By News Desk BenkiyabaleUpdated:December 27, 2023 6:23 pm
ತುಮಕೂರು
 
ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ ಹಾಗೂ ರಂಗಭೂಮಿಯ ಸಂಗಮ ಹಾಗೂ ಶೈಕ್ಷಣಿಕವಾಗಿ ಕಲೆ ಸಾಹಿತ್ಯ ಸಂಸ್ಕೃತಿಗಳ ಶ್ರೀಮಂತಿಕೆಯಿAದ ಕೂಡಿರುವ ತುಮಕೂರು ಜಿಲ್ಲೆಯಲ್ಲಿ  ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ ೨೯ ಮತ್ತು ೩೦ರಂದು “ಜಿಲ್ಲಾ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ತಿಳಿಸಿದರು.
ಅವರಿಂದು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನು ್ನದ್ದೇಶಿಸಿ ಮಾತನಾಡಿದರು.
ನಾಡು ನುಡಿ ಜಲಗಳ ಕುರಿತಾದ ಅರ್ಥಪೂರ್ಣ ವಿಚಾರ ವಿನಿಮಯಗಳಿಗೆ ಸಮ್ಮೇಳನ ಒಂದು ವೇದಿಕೆಯಾಗಿದೆ. ನಮ್ಮ ಜಿಲ್ಲೆಯವರೇ ಆದ ಅಂತರ ರಾಷ್ಟಿçÃಯ ಖ್ಯಾತಿಯ ಸಾಹಿತಿಗಳಾದ ಡಾ. ಹೆಚ್.ಎಸ್.ಶಿವಪ್ರಕಾಶ್‌ರವರು ಸಮ್ಮೇಳನಾಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದರು.
ಡಿಸೆಂಬರ್ ೨೯ರಂದು ಶುಕ್ರವಾರ ಬೆಳಿಗ್ಗೆ ೭.೩೦ ಗಂಟೆಗೆ ಧ್ವಜಾರೋಹಣದ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ.ಕರಾಳೆ ರಾಷ್ಟçಧ್ವಜಾರೋಹಣ ಮಾಡುವರು. ಮಹಾನಗರಪಾಲಿಕೆಯ ಉಪ ಮಹಾಪೌರರಾದ ಟಿ.ಕೆ.ನರಸಿಂಹಮೂರ್ತಿ ನಾಡ ಧ್ವಜಾರೋಹಣ ನೆರವೇರಿಸುವರು, ಅಂದು ಬೆಳಿಗ್ಗೆ ೮ ಗಂಟೆಗೆ ಮಹಾನಗರಪಾಲಿಕೆಯ ಆವರಣದಿಂದ ಸಮ್ಮೇಳನಾಧ್ಯಕ್ಷರ ವೈಭವಯುತ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಜಾನಪದ ಹಾಗೂ ಸಾಂಸ್ಕೃತಿಕ ಪ್ರಕಾರಗಳಾದ ಕೋಲಾಟ, ವೀರಗಾಸೆ, ನಂದೀಧ್ವಜ, ಸೋಮನಕುಣಿತ, ನಾಸಿಕ್ ಡೋಲು, ನಾದಸ್ವರ, ಗಾರುಡಿ ಗೊಂಬೆ, ಕೋಳಿನೃತ್ಯಗಳ ಜೊತೆಗೆ ಶಾಲಾ ಕಾಲೇಜುಗಳ ಸಾಂಸ್ಕೃತಿಕ ತಂಡಗಳು ಭಾಗವಹಿಸಲಿವೆ. ಪಾಲಿಕೆಯ ಆವರಣದಿಂದ ಬಿ.ಜಿ.ಎಸ್. ವೃತ್ತ, ಎಂ.ಜಿ.ರಸ್ತೆ ಮಾರ್ಗವಾಗಿ ಗುಂಚಿಚೌಕದಲ್ಲಿರುವ ಬಿ.ಶಿವಮೂರ್ತಿ ಶಾಸ್ತಿçಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಮಾರ್ಗವಾಗಿ ಪ್ರದಾನ ವೇದಿಕೆ ತಲುಪುವುದು.
ಅಂದು ಬೆಳಿಗ್ಗೆ ೧೦ ಗಂಟೆಗೆ ಶಿಕ್ಷಣ ಭೀಷ್ಮ ಡಾ. ಹೆಚ್.ಎಂ.ಗAಗಾಧರಯ್ಯ ಪ್ರದಾನ ವೇದಿಕೆಯಲ್ಲಿ ಶ್ರೀ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಶ್ರೀ ಸಿದ್ಧಲಿಂಗಸ್ವಾಮಿಗಳವರು, ಹಿರೇಮಠಾಧ್ಯಕ್ಷರಾದ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು, ಪಾವಗಡ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಶ್ರೀಜಪಾನಂದಜೀ ಮಹಾರಾಜ್‌ರವರ ದಿವ್ಯ ಸಾನ್ನಿಧ್ಯದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಖ್ಯಾತ ಕವಿಗಳು, ಸಂಸ್ಕೃತಿ ಚಿಂತಕರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯನವರು ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸುವರು.  ಅಂದು ಕುವೆಂಪು ಜನ್ಮದಿನಾಚರಣೆಯ ಅಂಗವಾಗಿ ರಾಷ್ಟçಕವಿ ಕುವೆಂಪುರವರ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪಾರ್ಚನೆ ಮಾಡುವರು.
ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸಮ್ಮೇಳನದ ಸ್ಮರಣ ಸಂಚಿಕೆ “ಕಲ್ಪಸೌರಭ’’ ಬಿಡುಗಡೆ ಮಾಡುವರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾದ ಎಂ.ವಿ.ನಾಗರಾಜರಾವ್‌ರವರು ಪ್ರಸ್ತುತ ಸಮ್ಮೇಳನಾಧ್ಯಕ್ಷರಾದ ಡಾ. ಹೆಚ್.ಎಸ್.ಶಿವಪ್ರಕಾಶ್ ಅವರಿಗೆ ಧ್ವಜ ಹಸ್ತಾಂತರ ಮಾಡುವರು. ಖ್ಯಾತ ವಿಮರ್ಶಕರಾದ ಎಂ.ಎಸ್.ಆಶಾದೇವಿ ಸಮ್ಮೇಳನಾಧ್ಯಕ್ಷರ ಕೃತಿ “ಮುಗಿಲ ಜಹಜು’’ ಬಿಡುಗಡೆ ಮಾಡುವರು. ಸಿಹಿಜೀವಿ ವೆಂಕಟೇಶ್ ಅವರ ಕರ್ನಾಟಕದ ಏಳು ಅದ್ಬುತಗಳು ಕೃತಿಯನ್ನು ಶಾಸಕ ವೈ.ಎ.ನಾರಾಯಣ ಸ್ವಾಮಿ ಬಿಡುಗಡೆಗೊಳಿಸುವರು.
ವಿಶ್ವಮಾನವ ದಿನಾಚರಣೆಯ ಅಂಗವಾಗಿ ಅಂದು ಮಧ್ಯಾಹ್ನ ನಡೆಯಲಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊಕೆ.ಚಂದ್ರಣ್ಣ ವಹಿಸಲಿದ್ದು, ಸಾಹಿತಿ ಹೆಚ್.ಕೆ.ನರಸಿಂಹಮೂರ್ತಿ ಕುವೆಂಪು ಸಾಹಿತ್ಯದಲ್ಲಿ ವಿಶ್ವಮಾನವ ಸಂದೇಶ ಕುರಿತು ಉಪನ್ಯಾಸ ನೀಡುವರು. ಸಂಜೆ ವಚನ ವಾಙ್ಮಯಕ್ಕೆ ಜಿಲ್ಲೆಯ ಕೊಡುಗೆ ಕುರಿತು ವಿಚಾರಗೋಷ್ಠಿ, ಸಮ್ಮೇಳನಾಧ್ಯಕ್ಷರೊಂದಿಗೆ ನಡೆಯುವ ಸಂವಾದ ಗೋಷ್ಠಿಯಲ್ಲಿ ಹತ್ತು ಜನ ಕವಿಗಳು ಅಧ್ಯಕ್ಷರೊಂದಿಗೆ ಸಂವಾದ ನಡೆಸುವರು, ಜಿಲ್ಲೆಯ ಸಾಮಾಜಿಕ ಚಳುವಳಿಗಳ ಬಗ್ಗೆ ಸಾಹಿತಿಗಳಾದ ಡಾ.ಶಿವಣ್ಣ ತಿಮ್ಲಾಪುರ ವಿಶೇಷ ಉಪನ್ಯಾಸ ನೀಡುವರು. ಅನಂತರ ನಡೆಯುವ ಕವಿಗೋಷ್ಠಿಯನ್ನು ಹೆಸರಾಂತ ಕವಿ ಹಾಗೂ ವಿಮರ್ಶಕರಾದ ಡಾ.ಹೆಚ್.ಎಸ್.ಸತ್ಯನಾರಾಯಣ ಉದ್ಘಾಟಿ ಸಲಿದ್ದು, ಖ್ಯಾತ ಕವಯತ್ರಿ ಲಲಿತ ಸಿದ್ದಬಸವಯ್ಯನವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ೨೦ ಕವಿಗಳು ಕವನ ವಾಚನ ಮಾಡುವರು. ನಂತರ ಜಾನಪದ ಝೇಂಕಾರ ಸಾಂಸ್ಕೃತಿಕ ಕಾರ್ಯಕ್ರಮದ ನಂತರ, ಸೀತಾಪಹರಣ ಪೌರಾಣಿಕ ನಾಟಕ ಪ್ರದರ್ಶನವಿರುತ್ತದೆ. ಡಿಸೆಂಬರ್ ೩೦, ೨೦೨೩ರ ಶನಿವಾರ ಬೆಳಿಗ್ಗೆ ಜಿಲ್ಲೆಯ ಜಾನಪದ ತಜ್ಞ ಡಾ.ಚಿಕ್ಕಣ್ಣಯಣ್ಣೆಕಟ್ಟೆಯವರ ನೇತೃತ್ವದಲ್ಲಿ ಜಿಲ್ಲೆಯ ಜಾನಪದ ಸಿರಿ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಜಾನಪದ ಪ್ರಕಾರಗಳ ಕುರಿತು ವಿವಿಧ ಸಾಹಿತಿಗಳು ಪ್ರಬಂಧ ಮಂಡಿಸಲಿದ್ದಾರೆ. ನಂತರ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ೨ನೇ ವರ್ಷದ ಕಾರ್ಯ ಚಟುವಟಿಕೆಗಳ ಕುರಿತ ನುಡಿಹೆಜ್ಜೆ-೨ ಕೃತಿ ಬಿಡುಗಡೆ ಹಾಗೂ ಜಿಲ್ಲೆಯ ೧೨ ಜನ ಸಾಧಕ ಹಿರಿಯ ಕಲಾವಿದರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಸನ್ಮಾನಿಸಿ ಕೃತಿ ಬಿಡುಗಡೆ ಮಾಡುವರು. ನಂತರ ಮಕ್ಕಳ ಸಾಹಿತ್ಯ ಕುರಿತು ಗೋಷ್ಠಿಯು ನಡೆಯಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ೨೦ ಜನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ವರಚಿತ ಕವನ ವಾಚನ ಅಥವಾ ಸಾಹಿತ್ಯ ಸಂವಾದದಲ್ಲಿ ಭಾಗವಹಿಸುವರು.
ಜಿಲ್ಲೆಯ ಸಾಧಕ ಸಾಹಿತಿ ಕಲಾವಿದರುಗಳನ್ನು ಕುರಿತು ಚಿಂತನಾ ಗೋಷ್ಠಿಯು ಹಿರಿಯ ಸಾಹಿತಿಗಳಾದ ಡಾ.ಸಂಪಿಗೆ ತೋಂಟದಾರ್ಯ ಅಧ್ಯಕ್ಷತೆಯಲ್ಲಿ ಜರುಗಲಿದೆ. ಜಿಲ್ಲೆಯ ಸಾಹಿತಿಗಳಾದ ವೀ.ಚಿಕ್ಕವೀರಯ್ಯ,  ಡಾ.ಸಾ.ಶಿ.ಮರುಳಯ್ಯ, ಹೆಚ್.ಜಿ.ಸಣ್ಣಗುಡ್ಡಯ್ಯ, ಟಿ.ಎಸ್.ಲೋಹಿತಾಶ್ವ ಮತ್ತು ಪ್ರೊ. ಕೆ.ಬಿ.ಸಿದ್ದಯ್ಯನವರ ಸಾಹಿತ್ಯ ಕೃತಿಗಳ ಕುರಿತು ವಿವಿಧ ಸಾಹಿತಿಗಳು ಮಾತನಾಡುವರು. ನಂತರ ಕನ್ನಡ ಭಾಷೆ ಮತ್ತು ಶಿಕ್ಷಣ-ಆತಂಕಗಳು ಮತ್ತು ಸವಾಲುಗಳನ್ನು ಕುರಿತ ಗೋಷ್ಠಿಯು ಸಾಮಾಜಿಕ ಚಿಂತಕರಾದ ಪ್ರೊ.ಕೆ.ದೊರೈರಾಜ್ ಅವರ ಅಧ್ಯಕ್ಷತೆಯಲ್ಲಿ, ತುಮಕೂರು ವಿ.ವಿ. ಉಪಕುಲಪತಿಗಳಾದ ಎಂ.ವೆAಕಟೇಶ್ವರಲು ಉದ್ಘಾಟಿಸುವರು. ಶಿಕ್ಷಣದ ವಿವಿಧ ವಿಷಯಗಳನ್ನು ಕುರಿತು ಮೂವರು ವಿಷಯತಜ್ಞರು ಪ್ರಬಂಧ ಮಂಡಿಸುವರು. ನಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಿರ್ಣಯಗಳ ಮಂಡನೆಯಾಗಲಿದೆ.
ಅAದು ಸಂಜೆ ೪.೧೫ ಗಂಟೆಗೆ ನಡೆಯಲಿರುವ ಸನ್ಮಾನ ಮತ್ತು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಹಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಜಿಲ್ಲೆಯ ವಿವಿಧ ಕ್ಷೇತ್ರಗಳ ೨೩ ಜನ ಸಾಧಕರನ್ನು ಸನ್ಮಾನಿಸುವರು. ಹಿರಿಯ ಸಾಹಿತಿಗಳಾದ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಸಮಾರೋಪ ಭಾಷಣ ಮಾಡುವರು. ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜ್ ಸಮ್ಮೇಳನಾಧ್ಯಕ್ಷರಾದ ಡಾ. ಹೆಚ್.ಎಸ್.ಶಿವಪ್ರಕಾಶ್‌ರವರನ್ನು ಸನ್ಮಾನಿಸುವರು. ಶಾಸಕರುಗಳಾದ ಬಿ.ಸುರೇಶ್‌ಗೌಡ, ಎಂ.ಚಿದಾನAದ ಗೌಡ ಅವರು ಪ್ರಶಂಸನಾ ಪತ್ರ ವಿತರಣೆ ಮಾಡುವರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು.
ಸಂಜೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸುವರು ಎಂದು ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ತಿಳಿಸಿದರು.  ಈ ಸಂದರ್ಭದಲ್ಲಿ ತುಮಕೂರು ತಾಲ್ಲೂಕು ಕಸಾಪ ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್, ಕಸಾಪ ನಗರ ಕಾರ್ಯದರ್ಶಿ ಸಿಹಿಜೀವಿ ವೆಂಕಟೇಶ್, ಸಾಂಸ್ಕೃತಿಕ ಸಂಚಾಲಕ ಕೆಂಕೆರೆ ಮಲ್ಲಿಕಾರ್ಜುನ್, ಸಂಘಟನಾ ಕಾರ್ಯದರ್ಶಿ ತೇಜಸ್ವಿ, ಮಹಿಳಾ ಪ್ರತಿನಿಧಿ ರಾಣಿ ಚಂದ್ರಶೇಖರ್ ಉಪಸ್ಥಿತರಿದ್ದರು.
(Visited 1 times, 1 visits today)
Previous Articleಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆಗೆ ಸೂಚನೆ
Next Article ವಿದ್ಯಾರ್ಥಿನಿಯ ಮೊಬೈಲ್ ಕಸಿದು ಲೈಂಗಿಕ ಕಿರುಕುಳ : ಆರೋಪಿಗಳ ಬಂಧನ
News Desk Benkiyabale

Related Posts

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm ಇತರೆ ಸುದ್ಧಿಗಳು

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm ಇತರೆ ಸುದ್ಧಿಗಳು

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
Our Youtube Channel
Our Picks

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

By News Desk BenkiyabaleJune 09, 2026 3:14 pm

ಹುಳಿಯಾರು: ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಅಡಚಣೆಯಿಲ್ಲದೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಬೆಸ್ಕಾಂ…

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.