BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಸಮಾಜ ಸರಿದಾರಿಯಲ್ಲಿ ಸಾಗಲು ಮಠಾಧೀಶರ ಮಾರ್ಗದರ್ಶನ ಅಗತ್ಯ’
news

‘ಸಮಾಜ ಸರಿದಾರಿಯಲ್ಲಿ ಸಾಗಲು ಮಠಾಧೀಶರ ಮಾರ್ಗದರ್ಶನ ಅಗತ್ಯ’

By News Desk BenkiyabaleUpdated:November 11, 2024 5:04 pm

ತುಮಕೂರು: ತಾಲ್ಲೂಕಿನ ಚಿಕ್ಕತೊಟ್ಲುಕೆರೆಯ ಅಟವಿ ಜಂಗಮ ಸುಕ್ಷೇತ್ರದಲ್ಲಿ ಅಟವಿ ಮಹಾಸ್ವಾಮಿಗಳ 124ನೇ ಪುಣ್ಯಸ್ಮರಣೋತ್ಸವ, ಮಠಾಧ್ಯಕ್ಷರಾದ ಅಟವೀ ಶಿವಲಿಂಗ ಸ್ವಾಮೀಜಿಗಳ ಪೀಠಾರೋಹಣ ರಜತ ಮಹೋತ್ಸವ ಹಾಗೂ ಅಟವಿ ಮಲ್ಲಿಕಾರ್ಜುನ ದೇವರ ನಿರಂಜನ ನಿರಾಭಾರಿ ಚರಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಭಾನುವಾರ ಧರ್ಮಸಭಾ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಶ್ರೀ ಮಠದ ಅಟವಿ ಶಿವಲಿಂಗ ಸ್ವಾಮೀಜಿ ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸಿದರು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳು ಹಾಗೂ ಸಾಸನೂರು ಮಠದ ಮಹಾಂತಲಿAಗ ಶಿವಾಚಾರ್ಯ ಸ್ವಾಮೀಜಿಗಳು ನೇತೃತ್ವ ವಹಿಸಿದ್ದರು. ನಂತರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾ ಪೂಜೆ ಹಮ್ಮಿಕೊಳ್ಳಲಾಗಿತ್ತು.

ನಂತರ ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ನಡೆದ ಧರ್ಮಸಭಾ ಕಾರ್ಯಕ್ರಮವನ್ನು ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಹಿರೇಮಠ ಶ್ರೀಗಳು, ಅಟವಿ ಶಿವಲಿಂಗ ಸ್ವಾಮೀಜಿಗಳು ಕಳೆದ 25 ವರ್ಷಗಳಿಂದ ಮಠದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದರು.

ಈ ಭಾಗದಲ್ಲಿ ಮರೆಯಾಗಿರುವ ಪುರಾಣ, ಪ್ರವಚನ ಪರಂಪರೆಯನ್ನು ಸೃಷ್ಟಿಸಿದ ಕೀರ್ತಿ ಸ್ವಾಮೀಜಿಗಳಿಗೆ ಸಲ್ಲಬೇಕು. 79ನೇ ವಯಸ್ಸು ಸಂದಿರುವ ಸಂದರ್ಭದಲ್ಲಿ ಸ್ವಾಮೀಜಿಗಳು ಮಠಕ್ಕೆ ಸಮರ್ಥ ಉತ್ತರಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ನಾಳೆ ಅಟವಿ ಶಿವಲಿಂಗ ಸ್ವಾಮೀಜಿಗಳು ಮಲ್ಲಿಕಾರ್ಜುನ ದೇವರಿಗೆ ತಮ್ಮ ಗುರುತ್ವವನ್ನು ಧಾರೆ ಎರೆಯಲಿದ್ದಾರೆ ಎಂದು ಹೇಳಿದರು.

ಇಂದು ನಾವು ಧಾರ್ಮಿಕ ಸಂಕಷ್ಟ ಕಾಲದಲ್ಲಿದ್ದೇವೆ. ಸಮಾಜವನ್ನು ಸರಿಯಾದ ದಿಕ್ಕಿನಲ್ಲಿ ನಡೆಸಿಕೊಂಡು ಹೋಗುವ ನಿಟ್ಟಿನಲ್ಲಿ ಸ್ವಾಮೀಜಿಗಳ ಪಾತ್ರ ಪ್ರಮುಖವಾಗಿದೆ. ಜನಗಣತಿಯಂತೆ ಮನೆಮೆನೆಯಲ್ಲೂ ದೀಕ್ಷಾ ಗಣತಿ ಮಾಡಬೇಕಾದ ಅಗತ್ಯವಿದೆ. ಲಿಂಗ ದೀಕ್ಷೆ ಕಡ್ಡಾಯ ಮಾಡಬೇಕಾಗಿದೆ. ಸ್ವಾಮೀಜಿಗಳು ಭಕ್ತರ ಮನೆ ಹೊಕ್ಕು ಲಿಂಗ ದೀಕ್ಷೆ ಮಾಡಿಸಬೇಕು ಎಂದು ಸಲಹೆ ಮಾಡಿದರು.

ಈಗ ತ್ರಿಕಾಲ ಪೂಜೆ ಮಾಡುವವರಿಲ್ಲ, ಕನಿಷ್ಟ ವಾರಕ್ಕೊಮ್ಮೆ ಸಾಮೂಹಿಕ ಶಿವಪೂಜೆ ಮಾಡುವಂತಹ ಪದ್ದತಿ ಅನುಸರಿಸಬೇಕು. ಮಠಗಳಲ್ಲಿ ಇಂತಹ ಪೂಜೆಗೆ ವ್ಯವಸ್ಥೆಯಾಗಬೇಕು. ಈ ಮೂಲಕ ನಮ್ಮ ಆಚಾರ, ವಿಚಾರ ಸಂಪ್ರದಾಯ, ಪರಂಪರೆಯನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಹಸಿದವರಿಗೆ ಅನ್ನ ಇಕ್ಕುವುದು, ಜ್ಞಾನ ನೀಡುವುದು ನಮ್ಮ ಮಠಗಳ ಪರಂಪರೆ. ಜಗತ್ತಿನಲ್ಲಿ ವಿಶೇಷ ಸ್ಥಾನ ಪಡೆದಿರುವ ಭರತ ಖಂಡ ಧಾರ್ಮಿಕ ಬೀಡು. ಹಲವಾರು ಧರ್ಮಗಳು ತಮ್ಮ ಧರ್ಮ ಪ್ರಚಾರಕ್ಕಾಗಿ ಶ್ರದ್ಧಾಕೇಂದ್ರ ಸ್ಥಾಪಿಸಿ ನಾಡಿನುದ್ದಕ್ಕೂ ಪ್ರಚಾರ ಮಾಡುತ್ತಿವೆ. ನಮ್ಮ ರಾಜ್ಯದಲ್ಲಿ ಅನೇಕ ಮಠಗಳು ಸಮಾಜದ ಜೀವನಾಡಿಯಾಗಿರುವ ವಿಶೇಷ ಪರಂಪರೆ ಹೊಂದಿವೆ. ಮಠಗಳು ತಾಯಿಯ ಅಂತ:ಕರಣದ ಮಡಿಲು, ಹಂಬಲಿಸಿ ಬಂದವರಿಗೆ ಆಶ್ರಯ ನೀಡಿ, ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುವಂತಹವು. ಈ ಮೂಲಕ ಮಠಗಳು ಕೇವಲ ಧಾರ್ಮಿಕ ಕೇಂದ್ರವಾಗಿಲ್ಲ, ಸಮಾಜ ಸೇವಾ ಕೇಂದ್ರಗಳಾಗಿಯೂ ಇವೆ. ನಮ್ಮ ಮಠಗಳ ದಾಸೋಹ ಸೇವೆ ಆಧುನಿಕ ಕರ್ನಾಟಕದಲ್ಲಿ ಪ್ರಮುಖ ಪಾತ್ರ ವಹಿಸಿದೆ. ನಾಡಿನ ಅಂತರAಗ-ಬಹಿರAಗ ಕಟ್ಟುವಲ್ಲಿ ಕ್ರಿಯಾಶೀಲವಾಗಿದೆ ಎಂದು ಹೇಳಿದರು.

ಅಟವಿ ಶಿವಲಿಂಗ ಸ್ವಾಮೀಜಿ ಮಾತನಾಡಿ, ಈಗಿನವರಿಗೆ ಧರ್ಮ ಶ್ರದ್ಧೆ ಕಡಿಮೆಯಾಗಿದೆ. ನಮ್ಮ ಆಚಾರವಿಚಾರಗಳನ್ನು ಮರೆಯುತ್ತಿದ್ದಾರೆ. ನಮ್ಮ ಆಚಾರ, ಪದ್ದತಿ, ಸಂಸ್ಕಾರ, ಪರಂಪರೆಯ ಮಹತ್ವವನ್ನು ಹಿರಿಯರು ಮಕ್ಕಳಿಗೆ ತಿಳಿಸಬೇಕು. ಸ್ವಾಮೀಜಿಗಳು ಭಕ್ತರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು. ಅಟವೀ ಮಠಕ್ಕೆ ಉತ್ತರಾಧಿಕಾರಿಯಾಗಿ ಮಲ್ಲಿಕಾರ್ಜುನ ದೇವರನ್ನು ನೇಮಿಸಲಾಗಿದೆ. ಇವರನ್ನು ಭಕ್ತರ ಮಡಿಲಿಗೆ ಹಾಕುತ್ತಿದ್ದೇವೆ ಭಕ್ತಿಯ ಹಾಲು ಕುಡಿಸಿ ಶಕ್ತಿ ತುಂಬಿರಿ ಎಂದರು.

ಸಾಸನೂರು ಮಠದ ಮಹಾಂತಲಿAಗ ಶಿವಾಚಾರ್ಯ ಸ್ವಾಮೀಜಿ, ಅರಕೆರೆ ಮಠದ ಶಿವಲಿಂಗ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಗುಡ್ಡದಾನ್ವೇರಿ ಮಠದ ಶಿವಯೋಗೀಶ್ವರ ಸ್ವಾಮೀಜಿ, ಅಟವಿ ಮಲ್ಲಿಕಾರ್ಜುನ ದೇವರು, ತುಮಕೂರು ನಗರ ವೀರಶೈವ ಸಮಾಜ ಅಧ್ಯಕ್ಷ, ಮಠದ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಟಿ.ಬಿ.ಶೇಖರ್, ಮಠದ ಆಡಳಿತ ಮಂಡಳಿ ಟ್ರಸ್ಟಿಗಳಾದ ಸಿ.ಮಹದೇವಪ್ಪ, ಬೆಟ್ಟಯ್ಯ, ಜಗದೀಶ್ಚಂದ್ರ, ರವಿಶಂಕರ್, ಮಂಜುನಾಥ್ ಬದ್ನಾಳ್, ಮುಖಂಡರಾದ ಕೋರಿ ಮಂಜುನಾಥ್, ಟಿ.ಸಿ.ಓಹಿಲೇಶ್ವರ್, ಅತ್ತಿರೇಣುಕಾನಂದ, ಶಿವಕುಮಾರ್, ಶಿವಲಿಂಗಮ್ಮ, ಹೆಬ್ಬಾಕ ಮಲ್ಲಿಕಾರ್ಜುನ್, ನಂಜಯ್ಯ, ರಾಜೇಂದ್ರಕುಮಾರ್, ವಿಶ್ವನಾಥ್ ಅಪ್ಪಾಜಪ್ಪ, ಚಂದ್ರಶೇಖರ್, ಟಿ.ಆರ್.ಅನುಸೂಯಮ್ಮ, ಬಾಲಚಂದ್ರ, ಶ್ರೀಧರ್ ಮೊದಲಾದವರು ಭಾಗವಹಿಸಿದ್ದರು.

ಸೋಮವಾರ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ನಿರಾಭಾರಿ ನಿರಂಜನ ಜಂಗಮ ದೀಕ್ಷೆ ಚಿನ್ಮಯಿ ಅನುಗ್ರಹ ಕಾರ್ಯಕ್ರಮ ನಡೆಯಲಿದೆ. ಅಟವಿ ಶಿವಲಿಂಗ ಸ್ವಾಮೀಜಿಗಳ ಅಧ್ಯಕ್ಷತೆಯ ಈ ಕಾರ್ಯಕ್ರಮದಲ್ಲಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಬೆಟ್ಟದಹಳ್ಳಿ ಗವಿಮಠದ ಚಂದ್ರಶೇಖರ ಸ್ವಾಮೀಜಿ, ತಾಳಗುಪ್ಪ ಮಠದ ಸಿದ್ಧವೀರ ಸ್ವಾಮೀಜಿ, ಅರಕೆರೆಮಠದ ಶಿವಲಿಂಗಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರಭದÀ್ರ ಶಿವಾಚಾರ್ಯ ಸ್ವಾಮೀಜಿ, ಗುಡ್ಡದ ಆನ್ವೇರಿ ಮಠದ ಶಿವಯೋಗೀಶ್ವರ ಸ್ವಾಮೀಜಿಗಳ ಪೌರೋಹಿತ್ಯದಲ್ಲಿ ಮಲ್ಲಿಕಾರ್ಜುನ ದೇವರಿಗೆ ಚಿನ್ಮಯ ಅನುಗ್ರಹ ನೀಡಲಾಗುವುದು.

(Visited 1 times, 1 visits today)
ಅಟವಿ ಜಂಗಮ ಸುಕ್ಷೇತ್ರ ತುಮಕೂರು: ಲಿಂಗ ದೀಕ್ಷೆ ಷಟ್‌ಸ್ಥಲ ಧ್ವಜಾರೋಹಣ
Previous Articleಹುರುಳಿಕಾಳು, ನುಗ್ಗೆಸೊಪ್ಪಿನ ಸಾರು ತಿನ್ನುವುದರಿಂದ ಆರೋಗ್ಯ
Next Article ಗುಡ್ಡಗಾಡು ಓಟದ ಸ್ಫರ್ಧೆಯಲ್ಲಿ ವಿವಿ ವಿಜ್ಞಾನ ಕಾಲೇಜು ಸಮಗ್ರ ಚಾಂಪಿಯನ್
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.