BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನವೆಂಬರ್ 17; ನಿಜ ನುಲಿಚಂದಯ್ಯ ಅವರ 917 ನೇ ಜನ್ಮ ಜಯಂತಿ
ಕರ್ನಾಟಕ ಸುದ್ಧಿಗಳು

ನವೆಂಬರ್ 17; ನಿಜ ನುಲಿಚಂದಯ್ಯ ಅವರ 917 ನೇ ಜನ್ಮ ಜಯಂತಿ

By News Desk BenkiyabaleUpdated:November 13, 2024 4:45 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಹಾಗೂ ತುಮಕೂರು ಜಿಲ್ಲಾ ಕುಳುವ ಮಹಾಸಂಘ (ರಿ.)ವತಿಯಿಂದ ನವೆಂಬರ್ 17 ರ ಭಾನುವಾರ ಬೆಳಗ್ಗೆ 10:30 ಗಂಟೆಗೆ ಕನ್ನಡ ಭವನದಲ್ಲಿ ನಿಜ ನುಲಿಚಂದಯ್ಯ ಅವರ 917 ನೇ ಜನ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಕುಳುವ ಮಹಾ ಸಂಘದ ಜಿಲ್ಲಾಧ್ಯಕ್ಷ ಲೋಕೇಶ್ ಸ್ವಾಮಿ ತಿಳಿಸಿದ್ದಾರೆ.

ಕರ್ನಾಟದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿರುವ ಸಾಮಾಜಿಕ ಪರಿವರ್ತನಾ ಕ್ರಾಂತಿಯು 12ನೇ ಶತಮಾನದಲ್ಲಿ ಬಸವಾದಿ ಪ್ರಮಥರಿಂದ ಕಾಯಕತ್ವದ ಆಧಾರದಲ್ಲಿ ಜಾತಿ, ಲಿಂಗ, ಧರ್ಮವೆಂಬ ಬೇಧಭಾವವಿಲ್ಲದೆ ಶರಣರ ದಾಸೋಹದ ಮೂಲಕ ಕಾಯಕಗೈದವರುಶರಣ ಶ್ರೀ ನುಲಿಯ ಚಂದಯ್ಯ. ಇವರು ಬಸವಣ್ಣನವರ ಸಮಕಾಲೀನರಾಗಿದ್ದು, ಅವರ ಜೊತೆ ಕೈಜೋಡಿಸಿದ ಪ್ರಮುಖ ಶರಣರಲ್ಲಿ ಇವರು ಒಬ್ಬರಾಗಿರುತ್ತಾರೆ. ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿರುವ ಇವರು ಹುಟ್ಟಿದ್ದು ವಿಜಾಪುರ ಜಿಲ್ಲೆ ಶವಣಗಿ, ಮುಂದೆ ಕಲ್ಯಾಣಕ್ಕೆ ಬಂದು, ಕಾಯಕ ದಾಸೋಹಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಇಷ್ಟಲಿಂಗದಲ್ಲಿ ಅತ್ಯುನ್ನತಿ ಕಂಡುಕೊAಡರು. ಮೆದೆ ಹುಲ್ಲಿನ ಹಗ್ಗ ಹೊಸೆಯುವ ಕಾಯಕ ಮಾಡಿ, ಅದರ ಮಾರಾಟದಿಂದ ಬಂದ ಆದಾಯದಿಂದ ಗುರು ಲಿಂಗ ಜಂಗಮ ಸೇವೆಗೆ ಬಳಸುತ್ತಿದ್ದರು. ಚಂದೇಶ್ವರಲಿAಗ ಎಂಬ ಅಂಕಿತನಾಮದಲ್ಲಿ ಅವರು ರಚಿಸಿದ 46 ವಚನಗಳು ಲಭ್ಯವಾಗಿವೆ. ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವವಾಗಿದ್ದು, ಇವರ ನಡೆ ನುಡಿ ಕಾಯಕನಿಷ್ಠೆ ಪುರಾಣ ಕಥೆಗಳನ್ನು ವರ್ಣಿತವಾಗಿವೆ.ಇಂತಹ ನಿಜಶರಣರು ಕುಳುವ ಸಮುದಾಯಕ್ಕೆ ಸೇರಿದವರೆಂಬುದು ಹೆಮ್ಮೆಯ ವಿಚಾರವಾಗಿದೆ. ಇವರ ಜಯಂತಿಯನ್ನು ಸರಕಾರವೇ ಪ್ರತಿವರ್ಷದ ನೂಲು ಹುಣ್ಣಿಮೆ ದಿನದಂದು ಸರಕಾರಿ ಕಾರ್ಯಕ್ರಮವಾಗಿ ಆಚರಿಸಲು ಅವಕಾಶ ಕಲ್ಪಿಸಿದೆ.ಇದಕ್ಕಾಗಿ ಸರಕಾರಕ್ಕೆ ಕುಳುವ ಮಹಾಸಭಾ ಆಭಿನಂದನೆ ಸಲ್ಲಿಸುತ್ತದೆ.ಜಯಂತಿ ಅಂಗವಾಗಿ ನಗರದ ಬಿ.ಜಿ.ಎಸ್.ವೃತ್ತದಿಂದ ಎಂ.ಜಿ.ರಸ್ತೆ,ಹೊರಪೇಟೆ ಮುಖ್ಯರಸ್ತೆಯ ಮೂಲಕ ಕನ್ಬಡಭವನದವರೆಗೆ ಬೆಳಗ್ಗೆ 9 ಗಂಟೆಗೆ ನುಲಿಚಂದಯ್ಯ ಅವರ ಭಾವಚಿತ್ರದ ಮೆರವಣಿಗೆಯನ್ನು ಹಮ್ಮಿಕೊಳ್ಳ ಲಾಗಿದೆ.ಕುಳುವ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಜಿಲ್ಲಾ ಅಧ್ಯಕ್ಷ ಲೋಕೇಶ್ ಸ್ವಾಮಿ ಮನವಿ ಮಾಡಿದ್ದಾರೆ.

ನವೆಂಬರ್ 17ರ ಭಾನುವಾರ ನಡೆಯುವ ನುಲಿಚಂದಯ್ಯ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಿರೇಮಠಾಧ್ಯಕ್ಷರಾದ ಡಾ.ಶ್ರೀಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ.ಕೇಂದ್ರ ಸರಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ಯುವಾರಿ ಸಚಿವರಾದ ಕೆ.ಎನ್.ರಾಜಣ್ಣ,ಕರ್ನಾಟಕ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗು ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ,ಕೆಎಸ್‌ಆರ್‌ಟಿಸಿ ಅಧ್ಯಕರು ಹಾಗು ಗುಬ್ಬಿ ಶಾಸಕರಾದ ಎಸ.ಆರ್.ಶ್ರೀನಿವಾಸ ಅವರುಗಳು ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ನಗರ ಶಾಸಕರಾದ ಜಿ.ಬಿ.ಜೋತಿಗಣೇಶ್ ವಹಿಸುವರು.ವಿಶೇಷ ಆಹ್ವಾನಿತರಾಗಿ ಜಿಲ್ಲೆಯ ಎಲ್ಲಾಸಂಸದರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಲಿದ್ದಾರೆ.ಅಲ್ಲದೆ ವಿವಿಧ ಪಕ್ಷಗಳ ಮುಖಂಡರುಗಳು, ಕುಳುವ ಮಹಾಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಅಖಿಲ ಕರ್ನಾಟಕ ಕುಳುವ ಮಹಾಸಂಘ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ಅವರು ನುಲಿಚಂದಯ್ಯ ಅವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕುಳುವ ಸಮಾಜದ ಏಳಿಗೆಗಾಗಿ ದುಡಿದ ಐವರು ಹಿರಿಯರಿಗೆ ನುಲಿಚಂದಯ್ಯ ಜಿಲ್ಲಾ ಮಟ್ಟದ ಗೌರವ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂಧುಗಳು ಸಾರ್ವಜನಿಕರು ಆಗಮಿಸಿ ಯಶಸ್ವಿಗೊಳಿಸುವಂತೆ ತುಮಕೂರು ಜಿಲ್ಲಾ ಕುಳುವ ಮಹಾಸಂಘ ಅಧ್ಯಕ್ಷ ಲೋಕೇಶ್ ಸ್ವಾಮಿ ಮನವಿ ಮಾಡಿದ್ದಾರೆ.

(Visited 1 times, 1 visits today)
ಜಿಲ್ಲಾ ಕುಳುವ ಮಹಾ ಸಂಘದ ಜಿಲ್ಲಾಧ್ಯಕ್ಷ ಲೋಕೇಶ್ ಸ್ವಾಮಿ ತುಮಕೂರು: ನಿಜ ನುಲಿಚಂದಯ್ಯ
Previous Articleಊರಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿ: ಮುರುಳೀಧರ ಹಾಲಪ್ಪ
Next Article ನೆಹರು ಅಧುನಿಕ ಭಾರತದ ನಿರ್ಮಾತೃ: ಚಂದ್ರಶೇಖರಗೌಡ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.