BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ’
ತುಮಕೂರು

‘ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ’

By News Desk BenkiyabaleUpdated:November 19, 2024 6:48 pm

ತುಮಕೂರು: ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಾಗಲಿದೆ. ಪುರುಷ ಸಮಾಜವು ಮಹಿಳೆಯ ಜೊತೆ ನಿಂತು ಸರ್ವರೀತಿಯಲ್ಲೂ ಶಕ್ತಿ ತುಂಬಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷೀ ಚೌಧರಿ ಹೇಳಿದರು.
ತುಮಕೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರವು ಪೊಲೀಸ್ ಬೇಟೆ ಕನ್ನಡ ವಾರ ಪತ್ರಿಕೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಹಿಳಾ ಸಬಲೀಕರಣ ಎತ್ತ ಸಾಗಿದೆ?’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಶೇ.27 ಮಹಿಳೆಯರು ಮಾತ್ರ ಉನ್ನತ ಶಿಕ್ಷಣದ ಮೆಟ್ಟಿಲೇರಿ ಬದುಕನ್ನು ರೂಪಿಸಿಕೊಳ್ಳುತ್ತಿದ್ದಾರೆ. ಶಾಲಾ, ಕಾಲೇಜು, ಪದವಿ ಹಂತದಲ್ಲೇ ಬಹುತೇಕ ಹೆಣ್ಣುಮಕ್ಕಳು ವಿದ್ಯಾಭ್ಯಾಸ ನಿಲ್ಲಿಸಿ ಸಾಂಸಾರಿಕ ಜೀವನಕ್ಕೆ ಧುಮುಕುತ್ತಿರುವುದು ವಿಪರ್ಯಾಸ ಎಂದರು.
ಹರೆಯದ ವಯಸ್ಸಿನಲ್ಲಿ ಪ್ರೀತಿ-ಪ್ರೇಮದ ಬಲೆಯಲ್ಲಿ ಬಿದ್ದು ವಿದ್ಯಾರ್ಥಿಗಳು ಬದುಕನ್ನು ನಾಶಮಾಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳೇ ಬದುಕೆಂದು ನಿರ್ಧರಿಸಿ ನಡೆಯುತ್ತಿದ್ದಾರೆ. ಮೊಬೈಲ್ ಬಳಕೆ ಉಸಿರಾಟಕ್ಕಿಂತಲೂ ಮುಖ್ಯವೆಂದು ಭಾವಿಸಿರುವವರನ್ನು ಸಬಲೀಕರಣದತ್ತ ಕೊಂಡೊಯ್ಯುವುದಾದರೂ ಹೇಗೆಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು.
ಕುಲಸಚಿವೆ ನಾಹಿದಾ ಜûಮ್ ಜûಮ್ ಮಾತನಾಡಿ, ಬದುಕಿನ ಶೇ.16.6 ಭಾಗವನ್ನು ಋತುಸ್ರಾವದ ನೋವಿನಲ್ಲೇ ಕಳೆಯುವ ಹೆಣ್ಣನ್ನು, ಪುರುಷ ಸಾಮ್ರಾಜ್ಯದಲ್ಲಿ ತನ್ನ ವೃತ್ತಿ ಜೀವನವನ್ನು, ಆಸೆಗಳನ್ನು ಕೊಂದು ಬದುಕನ್ನು ಕುಟುಂಬಕ್ಕಾಗಿ ತ್ಯಜಿಸುವ ಹೆಣ್ಣನ್ನು ಶೋಷಿಸುವುದು ಯಾವ ನ್ಯಾಯ? ಮಹಿಳೆಯರನ್ನು ಸಮಾನವಾಗಿ ಕಂಡಾಗ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಮಾತನಾಡಿ, 12ನೆಯ ಶತಮಾನದಲ್ಲಿ ಬಸವಣ್ಣನವರ ಅಕ್ಕನ ಧಾರ್ಮಿಕ ಸ್ವಾತಂತ್ರö್ಯಕ್ಕಾಗಿ ಶುರುವಾದ ಮಹಿಳಾ ಸಬಲೀಕರಣವೂ ಇಂದು ಕೇವಲ ಬಾಯಿಮಾತಾಗಿ ಭಾಷಣಗಳಲ್ಲಿ ಉಳಿದಿದೆ. ಉಚಿತ ಶಿಕ್ಷಣ, ಉಚಿತ ಚಿಕಿತ್ಸೆ, ಹೆಣ್ಣುಮಕ್ಕಳಿಗೆ ಉನ್ನತ ಸ್ಥಾನಮಾನ ನೀಡುವ ದೇಶ ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿದೇರ್ಶಕ ಡಾ. ಎಸ್. ಸಿದ್ದರಾಮಣ್ಣ, ತುಮಕೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ಜ್ಯೋತಿ, ಪೊಲೀಸ್ ಬೇಟೆ ಕನ್ನಡ ವಾರ ಪತ್ರಿಕೆ ಸಂಪಾದಕ ಪ್ರಸನ್ನ ಉಪಸ್ಥಿತರಿದ್ದರು.

(Visited 1 times, 1 visits today)
ಕರ್ನಾಟಕ ರಾಜ್ಯ ಮಹಿಳಾ ಆಯೋಗ ತುಮಕೂರು ವಿವಿ ಮಹಿಳಾ ಸಬಲೀಕರಣ
Previous Articleಶೋಷಿತರ ಪರವಾಗಿ ಸದಾ ಮಿಡಿಯುತಿದ್ದ ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿ
Next Article ವಕೀಲರು ಎಲ್ಲಾ ರಂಗಗಳಲ್ಲಿ ಯಶಸ್ಸು ಸಾಧಿಸಲಿ-ಹೆಚ್.ಕೆಂಪರಾಜಯ್ಯ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.