BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
  • ೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ
  • ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ
ಕರ್ನಾಟಕ ಸುದ್ಧಿಗಳು

ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ

By News Desk BenkiyabaleUpdated:December 13, 2024 6:43 pm

ತುಮಕೂರು: ಮೋಡ ಕವಿದ ವಾತಾವರಣದ, ಶೀತಗಾಳಿ ನಡುವೆಯೂ ಕಲ್ಪತರುನಾಡಿನ ವಿವಿಧೆಡೆ ಮುಂಜಾನೆಯಿAದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯ, ಬಿ.ಹೆಚ್. ರಸ್ತೆಯ ಆರ್‌ಟಿಓ ಕಚೇರಿ ಮುಂಭಾಗದಲ್ಲಿರುವ ವರಪ್ರಸಾದ ವೀರಾಂಜನೇಯ ಸ್ವಾಮಿ ದೇಗುಲ, ಶ್ರೀರಾಮನಗರದ ಕಿಕ್ಕೇರಿ ಆಂಜನೇಯಸ್ವಾಮಿ ದೇವಾಲಯ, ಬಟವಾಡಿ ಸಮೀಪದ ಭಕ್ತಾಂಜನೇಯಸ್ವಾಮಿ ದೇವಾಲಯ, ವಿದ್ಯಾನಗರದ ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನ, ಹನುಂತಪುರದ ಬಯಲಾಂಜನೇಯಸ್ವಾಮಿ ದೇವಾಲಯ, ಬನಶಂಕರಿಯ ಮಾರುತಿ ದೇವಾಲಯ, ಮೆಳೇಕೋಟೆಯ ಅಭಯ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಹನುಮ ನಾಮ ಸ್ಮರಣೆ, ವೇದ ಘೋಷಗಳು, ಭಜನೆಗಳು ಮೊಳಗಿದವು.
ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ, ಟೌನ್ ಹಾಲ್ ವೃತ್ತ, ಕಾಲ್ಟ್ಟ್ಯಾಕ್ಸ್, ಎಂ.ಜಿ. ರಸ್ತೆ, ಬಾರ್‌ಲೈನ್ ರಸ್ತೆ, ಎಸ್.ಎಸ್.ಪುರಂ ರಸ್ತೆ ಸೇರಿದಂತೆ ಜಿಲ್ಲೆಯಾದ್ಯಂತ ಪಟ್ಟಣಗಳು, ಹೋಬಳಿ ಕೇಂದ್ರಗಳು ಕೇಸರಿ ಧ್ವಜಗಳಿಂದ ಕಂಗೊಳಿಸುತ್ತಿದ್ದು, ಕೋಟೆ ಶ್ರೀ ಆಂಜನೇಯಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ದೇವಾಲಯಕ್ಕೆ ಬರುವ ಭಕ್ತರಿಗೆ ಹೆಸರು ಬೇಳೆ, ಪಾನಕ, ಮಜ್ಜಿಗೆಯನ್ನು ಪ್ರಸಾದವಾಗಿ ವಿನಿಯೋಗಿಸಿತು. ಹನುಮ ಜಯಂತಿ ಅಂಗವಾಗಿ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಮುಂಜಾನೆಯಿAದಲೇ ಅಭಿಷೇಕ, ಹೋಮ ಹವನ, ಭಜನಾ ಕಾರ್ಯಕ್ರಮಗಳು ನಡೆದಿದ್ದು, ಆಂಜನೇಯಸ್ವಾಮಿ ವಿಗ್ರಹ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷತೆ ಎಂದರೆ ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ. ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ. ಬೆಳಿಗ್ಗೆಯಿಂದಲೇ ಭಕ್ತಾದಿಗಳು ಆಂಜನೇಯಸ್ವಾಮಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ಪಂಚಾಮೃತ ಅಭಿಷೇಕ, ಮಂಗಳಾರತಿ, ಪ್ರಾಕಾರೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ ವಿಶೇಷವಾಗಿ ಸಿದ್ದಪಡಿಸಿ ಬಗೆ ಬಗೆಯ ಹೂವುಗಳಿಂದ ಅಲಂಕರಿಸಿದ್ದ ಮಂಟರದಲ್ಲಿ ಕೋಟೆ ಆಂಜನೇಯಸ್ವಾಮಿಯ ಉತ್ಸವ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ವೈಭವದಿಂದ ನಡೆಯಿತು. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹನುಮನ ದೇವಾಲಯಗಳಲ್ಲಿ ಶ್ರೀರಾಮ ನಾಮ ಜಪ ಹಾಗೂ ಹನುಮ ನಾಮ ಸ್ಮರಣೆಗಳು ಭಕ್ತರಿಂದ ಮೊಳಗಿದವು.
ಮೆಳೇಕೋಟೆಯ ಶ್ರೀ ಅಭಯಾಂಜನೇಯ ಸ್ವಾಮಿಗೆ ಸುಪ್ರಭಾತ ಸೇವೆಯೊಂದಿಗೆ ಆರಂಭವಾದ ಧಾರ್ಮಿಕ ಕೈಂಕರ್ಯಗಳಲ್ಲಿ ಮಹಾಸಂಕಲ್ಪ, ಪಂಚಾಮೃತ ಅಭಿಷೇಕ, ಅಲಂಕಾರದೊAದಿಗೆ ಮಹಾಮಂಗಳಾರತಿ ನಡೆಯಿತು. ನಗರದ ವಿವಿಧೆಡೆ ಹನುಮನ ದೇವಾಲಯಗಳಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿ ವಿಧಾನಗಳು ನೆರವೇರಿದ್ದು, ಭಕ್ತಾದಿಗಳು ಆಂಜನೇಯಸ್ವಾಮಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾದರು.

(Visited 1 times, 1 visits today)
ತುಮಕೂರು: ಹನುಮ ಜಯಂತಿ
Previous Articleಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲ
Next Article ಸಾಹಿತಿ ಡಾ.ಅಬ್ದುಲ್ ಹಮೀದ್ ನಿಧನ
News Desk Benkiyabale

Related Posts

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm news
ತಾಜಾ ಸುದ್ಧಿಗಳು
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm
news

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm
news

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
news

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
Our Youtube Channel
Our Picks

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm

ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!

August 27, 2026 5:48 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

By News Desk BenkiyabaleAugust 27, 2026 5:55 pm

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೋಡಿ ಹಚ್ಚಮ್ಮನಹಳ್ಳಿ ಸರ್ವೆ ನಂಬರ್ ೮/೧ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮದ ಸಮೀಪ, ಆಂಜನೇಯ ದೇವಸ್ಥಾನದ…

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm

ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ

August 27, 2026 5:52 pm

೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ

August 27, 2026 5:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.