BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗಂಗಸ0ದ್ರದಲ್ಲಿ ವೀರಶೈವ ಸಮಾಜದ ಸುಸಜ್ಜಿತ ರುದ್ರವನ ಸಿದ್ಧ
ಕರ್ನಾಟಕ ಸುದ್ಧಿಗಳು

ಗಂಗಸ0ದ್ರದಲ್ಲಿ ವೀರಶೈವ ಸಮಾಜದ ಸುಸಜ್ಜಿತ ರುದ್ರವನ ಸಿದ್ಧ

By News Desk BenkiyabaleUpdated:December 19, 2024 6:48 pm

ತುಮಕೂರು: ನಗರದ ಗಂಗಸAದ್ರದಲ್ಲಿ 6 ಎಕರೆ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾಗಿ ರುದ್ರವನವನ್ನು ವೀರಶೈವ ಸಮಾಜದಿಂದ ನಿರ್ಮಾಣ ಮಾಡಿದ್ದು, ಅಲ್ಲಿ ಸಿದ್ದೇಶ್ವರ ದೇವಾಲಯ ಸ್ಥಾಪನೆ ಮಾಡಿ, ಎಂಟು ದಿಕ್ಕುಗಳಲ್ಲಿ ಲಿಂಗಮುದ್ರೆ ಕಲ್ಲುಗಳನ್ನು ನೆಟ್ಟು ಲೋಕಾರ್ಪಣೆ ಮಾಡಲಾಗಿದೆ. ಶವಸಂಸ್ಕಾರಕ್ಕಾಗಿ ಸಮಾಜದವರು ಈ ರುದ್ರಭೂಮಿಯನ್ನು ಬಳಸಿಕೊಳ್ಳಬಹುದು ಎಂದು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ಹೇಳಿದರು.
ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಗುರುವಾರ ನಡೆದ ಸಮಾಜ ಸೇವಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಬನಶಂಕರಿಯ ರುದ್ರಭೂಮಿಯಲ್ಲಿ 1960ರಿಂದ ಶವಸಂಸ್ಕಾರ ಮಾಡಿಕೊಂಡು ಬರಲಾಗುತ್ತಿದೆ. ಇಲ್ಲಿ ಜಾಗದ ಕೊರತೆ ಎದುರಾಗಿದೆ. ಹೀಗಾಗಿ ಗಂಗಸAದ್ರದ ರುದ್ರವನ ನಿರ್ಮಾಣ ಮಾಡಿ ಅಂತ್ಯಸAಸ್ಕಾರ ಕಾರ್ಯಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಇದೂವರೆಗೆ ಸಮಾಜದಿಂದ ಶವಸಂಸ್ಕಾರಕ್ಕೆ ಯಾವುದೇ ಶುಲ್ಕ ಪಡೆಯದೆ ಉಚಿತವಾಗಿ ಮಾಡಲಾಗುತ್ತಿತ್ತು, ಅದರ ಖರ್ಚನ್ನು ಸಮಾಜ ಭರಿಸುತ್ತಿತ್ತು. ಸಭೆಯ ಸರ್ವಸದಸ್ಯರ ಒಪ್ಪಿಗೆ ಮೇರೆಗೆ ಉಚಿತ ಸೇವೆ ಮುಂದುವರೆಸುವುದಾಗಿ ಹೇಳಿದ ಅಧ್ಯಕ್ಷ ಟಿ.ಬಿ.ಶೇಖರ್, ಶಕ್ತಿ ಇರುವವರು ರುದ್ರಭೂಮಿಯ ಅಭಿವೃದ್ಧಿ ದೇಣಿಗೆ ನೀಡಿ ರಶೀತಿ ಪಡೆಯಬಹುದು ಎಂದರು.
ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿಯು ಕಳೆದ ಐದು ದಶಕಗಳಿಂದ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದೆ. ಹಿಂದಿನ ಹಲವು ಮಹನೀಯರು ಈ ಕಾರ್ಯದಲ್ಲಿ ತೊಡಗಿ ಪ್ರೇರಣೆಯಾಗಿದ್ದಾರೆ. ಅದೇ ದಾರಿಯಲ್ಲಿ ಸಾಗುತ್ತಿದ್ದೇವೆ ಎಂದು ಹೇಳಿ ತಮ್ಮ ಆಡಳಿತ ಅವಧಿಯಲ್ಲಿ ಮಾಡಿರುವ ಸೇವಾ ಕಾರ್ಯಗಳನ್ನು ಸಭೆಗೆ ವಿವರಿಸಿದರು.
ಸಮಿತಿಯ ಗೌರವ ಕಾರ್ಯದರ್ಶಿ ಅತ್ತಿ ರೇಣುಕಾನಂದ ಮಾತನಾಡಿ, ದಾಸೋಹಕ್ಕೆ ಹೆಸರಾದ ವೀರಶೈವ ಸಮಾಜ ಕೊರೊನಾ ಲಾಕ್‌ಡೌನ್ ಕಾಲದಲ್ಲಿ ನಗರದಲ್ಲಿ ವಾಸಿಸುವ ಕಡುಬಡವರಿಗೆ, ಕೂಲಿಕಾರ್ಮಿಕರಿಗೆ, ನಿರ್ಗತಿಕರಿಗೆ, ಹೊರ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಎಸ್.ಜಿ.ಚಂದ್ರಮೌಳಿ ಹಾಗೂ ನಿರ್ದೇಶಕರು ದಾಸೋಹ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಿ ಜಿಲ್ಲಾಡಳಿತ ಹಾಗೂ ಸರ್ಕಾರದ ಪ್ರಶಂಸೆಗೆ ಪಾತ್ರರಾಗಿದ್ದರು.ವೀರಶೈವ ಸಮಾಜ ಸೇವಾ ಸಮಿತಿಯ ಉಪಾಧ್ಯಕ್ಷ ಎಸ್.ಜಿ.ಚಂದ್ರಮೌಳಿ, ಜಂಟಿ ಕಾರ್ಯದರ್ಶಿ ಟಿ.ಎನ್.ರುದ್ರೇಶ್, ಖಜಾಂಚಿ ಶಿವಲಿಂಗಮ್ಮ, ಆಡಳಿತಾಧಿಕಾರಿ ಎ.ಎಸ್.ರುದ್ರಕುಮಾರ್ ಆರಾಧ್ಯ, ನಿರ್ದೇಶಕರಾದ ಪಿ.ರವಿಶಂಕರ್, ಮೋಹನ್‌ಕುಮಾರ್ ಪಟೇಲ್, ಡಿ.ಆರ್.ಮಲ್ಲೇಶಯ್ಯ, ಕೆ.ಜಿ.ಶಿವಕುಮಾರ್, ಟಿ.ಸಿ.ತಾಂಡವಮೂರ್ತಿ, ಬಿ.ಉಮೇಶ್, ಟಿ.ಆರ್.ನಟರಾಜು, ಭಾಗವಹಿಸಿದ್ದರು.

(Visited 1 times, 1 visits today)
ರುದ್ರವನ ವೀರಶೈವ ಸಮಾಜ ಸೇವಾ ಸಮಿತಿ
Previous Articleಸಹಾಯ ಮಾಡುವುದು ಸರ್ಕಾರದ ಉದ್ದೇಶ
Next Article ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳಿ0ದ ಪ್ರತಿಭಟನೆ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.