BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್ ಪಾಲಾದ ತುಮುಲ್ ಅಧ್ಯಕ್ಷ ಸ್ಥಾನ
ಕರ್ನಾಟಕ ಸುದ್ಧಿಗಳು

ಕಾಂಗ್ರೆಸ್ ಪಾಲಾದ ತುಮುಲ್ ಅಧ್ಯಕ್ಷ ಸ್ಥಾನ

By News Desk BenkiyabaleUpdated:January 22, 2025 6:44 pm

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್‌ಡಿಎ ಅಭ್ಯರ್ಥಿಯಾಗಿ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12 ಗಂಟೆಯಾದರೂ
ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆ ಮುಂದುವರೆಸಿದರು. ನಂತರ ಗೌಪ್ಯ ಮತದಾನ ನಡೆಯಿತು.
ಶಾಸಕ ಹೆಚ್.ವಿ.ವೆಂಕಟೇಶ್ ಅವರ ಪರವಾಗಿ 9 ಮತಗಳು, ಎಸ್.ಆರ್.ಗೌಡ ಪರವಾಗಿ 5 ಮತಗಳು ಚಲಾವಣೆಗೊಂಡ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.
ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿಯೇ ನಡೆದಿತ್ತು. ಆದರೆ ಇತ್ತೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರನ್ನು ಸರ್ಕಾರ ನಾಮ ನಿರ್ದೇಶನ ಸದಸ್ಯರಾಗಿ ನೇಮಕ ಮಾಡಿತ್ತು.
ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ನಾಮ ನಿರ್ದೇಶನ ಸದಸ್ಯರಾದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಎರಡು ನಾಮಪತ್ರ ಹಾಗೂ ಎನ್‌ಡಿಎ ಅಭ್ಯರ್ಥಿಯಾಗಿ ಸಿರಾ ತಾಲ್ಲೂಕು ನಿರ್ದೇಶಕ ಎಸ್.ಆರ್.ಗೌಡ ಅವರು ನಾಮಪತ್ರ ಸಲ್ಲಿಸಿದ್ದರು.
ಇಂದು ಬೆಳಿಗ್ಗೆಯಿಂದ ನಡೆದ ಚುನಾವಣೆಯಲ್ಲಿ ಪಾವಗಡ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಹೆಚ್.ವಿ. ವೆಂಕಟೇಶ್ ಅವರಿಗೆ 9 ಮತ ಹಾಗೂ ಎನ್‌ಡಿಎ ಅಭ್ಯರ್ಥಿ ಎಸ್.ಆರ್. ಗೌಡ ಅವರಿಗೆ 5 ಮತ ಚಲಾವಣೆಯಾಗಿವೆ.
ಇದೇ ಮೊದಲ ಬಾರಿಗೆ ತುಮುಲ್ ಇತಿಹಾಸದಲ್ಲಿ ನಾಮನಿರ್ದೇಶಿತ ಸದಸ್ಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತುಮುಲ್‌ನಲ್ಲಿ 10 ಮಂದಿ ಚುನಾಯಿತ ನಿರ್ದೇಶಕರು, ನಾಮ ನಿರ್ದೇಶಿತರು ಹಾಗೂ ಅಧಿಕಾರಿಗಳು ಸೇರಿ ಒಟ್ಟು 15 ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದರು. ಈ ಪೈಕಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಐವರು, ಒಬ್ಬರು ಕೆಎಂಎಫ್ ಪ್ರತಿನಿಧಿ, ಒಬ್ಬರು ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರು , ಜಿಲ್ಲಾ ಸಹಕಾರ ಸಂಘಗಳ ಜಂಟಿ ನಿಬಂಧಕರು, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರು, ಎನ್‌ಡಿಡಿಬಿಯ ಒಬ್ಬರು ಮತ ಚಲಾಯಿಸುವ ಹಕ್ಕು ಹೊಂದಿದ್ದರು. ಈ ಬಾರಿ ತುಮುಲ್ ಅಧ್ಯಕ್ಷ ಸ್ಥಾನದ ಗದ್ದುಗೆಗೇರಲು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರವರ ಪತ್ನಿ ಭಾರತಿದೇವಿ, ಮಧುಗಿರಿಯ ನಿರ್ದೇಶಕ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗೇಶ್‌ಬಾಬು, ಸಿರಾ ನಿರ್ದೇಶಕ ಎಸ್.ಆರ್. ಗೌಡ, ತಿಪಟೂರು ತಾಲ್ಲೂಕು ಮಾದಿಹಳ್ಳಿ ಪ್ರಕಾಶ್ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ನಿನ್ನೆಯಿಂದೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ಚುನಾಯಿತ ಸದಸ್ಯರ ಎಲ್ಲ ಕಸರತ್ತುಗಳಿಗೆ ತೆರೆ ಬಿದ್ದಂತಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹೆಚ್.ವಿ. ವೆಂಕಟೇಶ್ ಅವರು, ತುಮಕೂರು ಹಾಲು ಒಕ್ಕೂಟದಲ್ಲಿ ಎಲ್ಲ ನಿರ್ದೇಶಕರ ಸಹಕಾರ ಪಡೆದು ಉತ್ತಮವಾಗಿ ಆಡಳಿತ ನಡೆಸುತ್ತೇನೆ ಎಂದರು. ತುಮಕೂರು ಹಾಲು ಒಕ್ಕೂಟದ ಎಲ್ಲ ನಿರ್ದೇಶಕರನ್ನು ಒಗ್ಗೂಡಿಸಿಕೊಂಡು ಉತ್ತಮವಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಒಕ್ಕೂಟದಲ್ಲಿ ಅಗತ್ಯ ಇರುವ ಬದಲಾವಣೆ ತರಲು ಸಹ ಶ್ರಮಿಸುತ್ತೇನೆ ಎಂದು ಅವರು ತಿಳಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಪಕ್ಷದ ಎಲ್ಲ ನಾಯಕರ ಆಶೀರ್ವಾದದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನನ್ನ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು. ವಿಜಯೋತ್ಸವ. ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ವೆಂಕಟೇಶ್ ಅವರು ಗೆಲುವು ಸಾಧಿಸಿದ್ದರಿಂದ ಪಾವಗಡ ತಾಲ್ಲೂಕಿನಿಂದ ಆಗಮಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ತುಮುಲ್ ಆಡಳಿತ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಪಾವಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಇದ್ದರು.

(Visited 1 times, 1 visits today)
ಕಾಂಗ್ರೆಸ್ ತುಮುಲ್ ಹೆಚ್.ವಿ. ವೆಂಕಟೇಶ್
Previous Articleಸ್ವಾತಿಗೆ ಪಿಹೆಚ್‌ಡಿ ಪದವಿ
Next Article ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.