BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿಂಥಟಿಕ್ ಟ್ರಾಕ್ ನಿರ್ಮಾಣದ ಮೂಲಕ ಕ್ರೀಡಾನಗರಕ್ಕೆ ಮುನ್ನುಡಿ
ತುಮಕೂರು ಜಿಲ್ಲಾ ಸುದ್ಧಿಗಳು

ಸಿಂಥಟಿಕ್ ಟ್ರಾಕ್ ನಿರ್ಮಾಣದ ಮೂಲಕ ಕ್ರೀಡಾನಗರಕ್ಕೆ ಮುನ್ನುಡಿ

By News Desk BenkiyabaleUpdated:December 26, 2018 4:11 pm

 ತುಮಕೂರು:

      ತುಮಕೂರು ನಗರವನ್ನು ಕ್ರೀಡಾ ನಗರಿಯನ್ನಾಗಿ ರೂಪಿಸಬೇಕೆನ್ನುವ ನಾಗರಿಕರ ಒತ್ತಾಸೆಗೆ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸುಮಾರು 8 ಕೋಟಿ ವೆಚ್ಚದಲ್ಲಿ ಸಿಂಥಟಿಕ್ ಟ್ರಾಕ್ ನಿರ್ಮಾಣಕ್ಕೆ ಮುಂದಾಗಿರುವುದು ಪುಷ್ಠಿ ನೀಡಿದಂತಿದೆ ಎಂದು ಜಿಲ್ಲಾ ವಕ್ಪ್ ಬೋರ್ಡನ ಮಾಜಿ ಆಡಳಿತಾಧಿಕಾರಿ ನವೀದ್ ಬೇಗ್ ತಿಳಿಸಿದ್ದಾರೆ.

      ನಗರದ ಹೊಯ್ಸಳ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು,ಜಿಲ್ಲಾ ಉಸ್ತುವಾರಿ ಸಚಿವರು,ಕ್ರೀಡಾ ಹಾಗೂ ಯುವಸಬಲೀಕರಣ ಸಚಿವರೂ ಆದ ಡಾ.ಜಿ.ಪರಮೇಶ್ವರ್ ಅವರು, ಮಹಾತ್ಮಗಾಂಧಿ ಕ್ರೀಡಾಂಗಣ ದಲ್ಲಿ ಅಂದಾಜು 8 ಕೋಟಿ ರೂ ವೆಚ್ಚದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಸಿಂಥಟಿಕ್ ಅಥ್ಲೇಟಿಕ್ ಟ್ರಾಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನರವೇರಿಸಿರುವುದು ಜಿಲ್ಲೆಯ ಎಲ್ಲಾ ನಾಗರಿಕರು, ಕ್ರೀಡಾಪ್ರೇಮಿಗಳು ಸಂತಸ ಪಡುವ ವಿಚಾರವಾಗಿದೆ.ಇದಕ್ಕಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರುಗಳಿಗೆ ಜಿಲ್ಲೆಯ ನಾಗರಿಕರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

      ಕೆಲ ಸಮಾನ ಮನಸ್ಕರು ಸೇರಿ ತುಮಕೂರು ಜಿಲ್ಲೆಯನ್ನು ಕ್ರೀಡಾ ಜಿಲ್ಲೆಯಾಗಿ ರೂಪಿಸಬೇಕು ಹಾಗೂ ತುಮಕೂರು ನಗರವನ್ನು ಕ್ರೀಡಾನಗರವನ್ನಾಗಿ ಮಾಡಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಹಿಂದಿನ ಸಿದ್ದರಾಮಯ್ಯ ಸರಕಾರದಲ್ಲಿ ಎಲ್ಲಾ ಸಚಿವರು,ತುಮಕೂರು ಜಿಲ್ಲೆಯ ಶಾಸಕರಿಗೆ ಮನವಿ ಮಾಡಿ ಒತ್ತಾಯಿಸಿದ ಪರಿಣಾಮ 2017-18ನೇ ಸಾಲಿನ ಬಜೆಟ್‍ನಲ್ಲಿ ಅಂದಿನ ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ತುಮಕೂರು ಜಿಲ್ಲೆಯಲ್ಲಿ ಕ್ರೀಡಾ ಸಾಮಗ್ರಿಗಳ ಕಾರ್ಖಾನೆಯ ಜೊತೆಗೆ,ಅಂತರರಾಷ್ಟ್ರೀಯ ಕ್ರೀಡಾ ನಗರಿಯಾಗಿ ರೂಪಿಸಲು ಸುಮಾರು 2000 ಕೋಟಿ ರೂ ಖರ್ಚು ಮಾಡುವ ಭರವಸೆ ನೀಡಿತ್ತು.ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಾಧೀಶರು,ಸ್ಥಳೀಯ ಶಾಸಕರು,ಕ್ರೀಡಾಪುಟಗಳನ್ನು ಒಳಗೊಂಡಂತೆ ಸಮಿತಿ ರಚಿಸಿಕೊಂಡು ಸರಕಾರಕ್ಕೆ ಬಜೆಟ್‍ನ ಘೋಷಣೆಯನ್ನು ಜಾರಿಗೆ ತರುವಂತೆ ಒತ್ತಡ ಹೇರಲಾಗಿತ್ತು.

      ಸರಕಾರದ ಮೇಲೆ ನಿರಂತರ ಒತ್ತಡ ತಂದ ಹಿನ್ನೆಲೆಯಲ್ಲಿ ಸರಕಾರ ಮಹಾತ್ಮಗಾಂಧಿ ಕ್ರೀಡಾಂಗಣದ ಅಭಿವೃದ್ದಿಯ ಜೊತೆಗೆ, ಸಿಂಥಟಿಕ್ ಟ್ರಾಕ್ ನಿರ್ಮಾಣಕ್ಕೆ ಮುಂದಾಗಿದೆ.ಅಲ್ಲದೆ 100 ಎಕರೆ ಜಮೀನು ನೀಡಿದರೆ ಕ್ರೀಡಾ ವಿವಿ ತೆರೆಯುವ ಭರವಸೆ ಯನ್ನು ಸಚಿವರು ನೀಡಿದ್ದು,ಈ ಎಲ್ಲಾ ಅಂಶಗಳು ತುಮಕೂರು ಜಿಲ್ಲೆ ಕ್ರೀಡಾ ಜಿಲ್ಲೆಯಾಗಿ ಗುರುತಿಸಿಕೊಳ್ಳಲು ಸಹಕಾರಿ ಯಾಗಲಿವೆ ಎಂದು ನವೀದ್‍ಬೇಗ್ ಸಂತಸ ವ್ಯಕ್ತಪಡಿಸಿದರು.

      ಜಿಲ್ಲೆಯಲ್ಲಿ ಕೇವಲ ಕ್ರೀಡೆ ಬೆಳೆವಣಿಗೆಯಿಂದ ಯಾವುದೇ ಉಪಯೋಗವಿಲ್ಲ.ಒಂದೇ ಸೂರಿನ ಅಡಿಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಎಲ್ಲಾ ಕ್ರೀಡೆಗಳ ಅಂಕಣಗಳು, ಅದಕ್ಕೆ ಪೂರಕವಾದ ವಾತಾವರಣ ದೊರೆಯುವಂತೆ ಮಾಡುವುದು ಅತಿ ಮುಖ್ಯ.ಮೊದಲು ಅಗತ್ಯವಿರುವ 100 ಎಕರೆ ಭೂಮಿ ಮಂಜೂರಾತಿಗೆ ನಾವೆಲ್ಲರೂ ಹೋರಾಡಬೇಕಿದೆ.ತುಮಕೂರು ನಗರ ಕ್ರೀಡಾ ನಗರಿಯಾಗಿ ರೂಪಿತವಾದರೆ ಜಿಲ್ಲೆಗೆ ಹಾಗೂ ಸಮ್ಮಿಶ್ರ ಸರಕಾರ ಕೀರ್ತಿಯನ್ನು ತರಲಿದೆ ಎಂದು ನವೀದ್ ಬೇಗ್ ತಿಳಿಸಿದರು.

      ಈ ವೇಳೆ ವಕೀಲರಾದ ಇಂತಿಯಾಜ್ ಅಹಮದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎನ್.ನಜೀವುಲ್ಲಾ ಖಾನ್, ತಾ.ಪಂ.ಮಾಜಿ ಸದಸ್ಯ ಫಯಾಜ್ ಅಹಮದ್, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಚಂದ್ರು, ಸಾಫ್ಟವೇರ ಇಂಜಿನಿಯರ್ ಅಯ್ಯೂಬ್‍ಖಾನ್ ಮತ್ತಿತರರು ಉಪಸ್ಥಿತರಿದ್ದರು.

(Visited 36 times, 1 visits today)
Previous Articleಮಕ್ಕಳಿಗೆ ವಿವಿಧ ಕಲಾ ಪ್ರಕಾರಗಳ ಪರಿಚಯ ಅಗತ್ಯ
Next Article ಶೇ 10ರ ರಿಯಾಯಿತಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.