BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ
ಕರ್ನಾಟಕ ಸುದ್ಧಿಗಳು

ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ

By News Desk BenkiyabaleUpdated:February 12, 2025 6:29 pm

ತುಮಕೂರು : ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು.
ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರö್ಯ ದೊರೆತು 75 ವರ್ಷಗಳು ಕಳೆದರೂ ಜೀತ ಪದ್ಧತಿ ಇನ್ನೂ ಜೀವಂತವಾಗಿರುವುದು ಶೋಚನೀಯ ಸಂಗತಿ. ಆರ್ಥಿಕವಾಗಿ ಹಿಂದುಳಿದವರು ಜೀತ ಪದ್ಧತಿಗೆ ಒಳಗಾಗುತ್ತಾರೆ. ಜೀತ ಪದ್ಧತಿಯಿಂದ ಮಾನವ ಹಕ್ಕುಗಳಿಗೆ ಚ್ಯುತಿಯುಂಟಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಜೀತ ಪದ್ಧತಿ, ಸತಿ ಸಹಗಮನ, ಅಸ್ಪೃಶ್ಯತೆ, ಮಾನವ ಕಳ್ಳಸಾಗಾಣಿಕೆ, ಮ್ಯಾನ್ಯುಯಲ್ ಸ್ಕಾö್ಯವೆಂಜಿAಗ್‌ಗಳAತಹ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವಲ್ಲಿ ಯಶಸ್ವಿ ಹೆಜ್ಜೆಗಳನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು.
ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯು 1976ರಲ್ಲಿ ಜಾರಿಗೆ ತರಲಾಗಿದ್ದು, ಕಾಯ್ದೆಯ ಅನುಷ್ಟಾನದ ಜವಾಬ್ದಾರಿಯನ್ನು ಎಲ್ಲ ಅಧಿಕಾರಿಗಳಿಗೆ ನೀಡಲಾಗಿದೆ. ಜೀತ ಪದ್ಧತಿಗೆ ಬಡತನವೇ ಮುಖ್ಯ ಕಾರಣ. ಜೀತ ಕಾರ್ಮಿಕರನ್ನು ಮುಖ್ಯ ವಾಹಿನಿಗೆ ತರುವ ಹೊಣೆಗಾರಿಕೆ ಎಲ್ಲ ಅಧಿಕಾರಿಗಳ ಮೇಲಿದೆ. ಜೀತ ವಿಮುಕ್ತರಿಗೆ ಕಾಯ್ದೆಗಳ ಮೂಲಕ ಭದ್ರತೆ ಒದಗಿಸಿ ಪುನರ್ವಸತಿ ಕಲ್ಪಿಸಬೇಕು. ಜೀತ ನಿರ್ಮೂಲನಾ ಕಾಯ್ದೆಯಿಂದ ಜೀತ ಪದ್ಧತಿಯನ್ನು ತಡೆಯುವುದಷ್ಟೇ ಅಲ್ಲದೆ ಜೀತ ವಿಮುಕ್ತ ವ್ಯಕ್ತಿಗೆ ಜೀವನ ನಿರ್ವಹಣೆಗಾಗಿ ಉದ್ಯೋಗ ನೀಡಿ ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಹೇಳಿದರು.
ಜೀತಗಾರ ಬಿಡುಗಡೆಯಾಗಬೇಕು-ಆಳುವ ವ್ಯಕ್ತಿಯಾಗಬೇಕು: ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಮನುಷ್ಯನ ಹುಟ್ಟು-ಸಾವಿನ ನಡುವೆ ದುಡಿಮೆ ಅನಿವಾರ್ಯ. ಮನುಷ್ಯನು ಹೇಗೆ ದುಡಿಯಬೇಕು? ಯಾವಾಗ ದುಡಿಯಬೇಕು? ಎಷ್ಟು ದುಡಿಯಬೇಕು? ಎನ್ನುವುದು ಬಹಳ ಮುಖ್ಯವಾಗಿರುತ್ತದೆ. ಯಾವುದೇ ಚಲನ-ವಲನಕ್ಕೆ ಸ್ವತಂತ್ರವಿಲ್ಲದೆ ಒಬ್ಬ ವ್ಯಕ್ತಿಯನ್ನು ಹಿಡಿತದಲ್ಲಿಟ್ಟುಕೊಂಡು ಬದುಕಿಗೆ ನಿರ್ಬಂಧ ಹೇರುವುದೇ ಜೀತ ಪದ್ಧತಿ. ಮನುಷ್ಯನ ದುಡಿಮೆಯಲ್ಲಿ ಇತಿಮಿತಿ ಇರಬೇಕು. ನಿರಂತರ ಸೇವೆಯ ನಡುವೆ ವಿಶ್ರಾಂತಿ ನೀಡುವುದು ಅವಶ್ಯ. ಸಾಯುವವರೆಗೆ ಯಜಮಾನನ ಕಪಿಮುಷ್ಠಿಯಲ್ಲಿ ದುಡಿಯುವ ಜೀತ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಹಾಗೂ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸರ್ಕಾರದೊಂದಿಗೆ ಹಲವಾರು ಸಂಘಟನೆಗಳು ಕೈಜೋಡಿಸುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.
ಜೀತ ಕಾರ್ಮಿಕ ಪದ್ಧತಿಯು ಮಾನವ ಕಳ್ಳಸಾಗಣೆಯ ಒಂದು ಬಲವಂತದ ರೂಪವಾಗಿದ್ದು, ಈ ಪದ್ಧತಿಯಲ್ಲಿ ಕಾರ್ಮಿಕರು ಭಾರತೀಯ ಸಂವಿಧಾನವು ಖಾತರಿಪಡಿಸಿರುವ ಸ್ವಾತಂತ್ರö್ಯ ಮತ್ತು ಹಕ್ಕುಗಳನ್ನು ಕಳೆದುಕೊಳ್ಳುವಂತೆ ಒತ್ತಾಯಿಸಲಾಗುತ್ತದೆ. ಜೀತ ಪದ್ಧತಿ ಕಂಡು ಬಂದವರು ಕಾರ್ಮಿಕ ಸಹಾಯವಾಣಿ 155214ಕ್ಕೆ ಮಾಹಿತಿ ನೀಡುವ ಮೂಲಕ ಈ ಅನಿಷ್ಠ ಪದ್ಧತಿಯನ್ನು ರದ್ದುಗೊಳಿಸುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು. 1206 ರಿಂದ 1296ರ ಅವಧಿಯಲ್ಲಿ ಗುಲಾಮಿ ಸಂತತಿ ಆಡಳಿತ ನಡೆಸಿದ ನಿದರ್ಶನವಿದೆ. ಈ ನಿಟ್ಟಿನಲ್ಲಿ ಜೀತಗಾರ ಜೀತದಿಂದ ಬಿಡುಗಡೆಯಾಗಿ ಆಳುವ >> ಪುಟ 2ಕ್ಕೆ
ವ್ಯಕ್ತಿಯಾದಾಗ ಮಾತ್ರ ಜೀತ ಪದ್ಧತಿ ನಿರ್ಮೂಲನೆ ಸಾಧ್ಯವೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮುಕ್ತಿ ಅಲೆಯನ್ಸ್ನ ಸಂಚಾಲಕಿ ಬೃಂದ ಆಡಿಗೆ ಅವರು ಮಾತನಾಡುತ್ತಾ, ಜೀತ ಪದ್ಧತಿ ರಾಜ್ಯದಲ್ಲಿ ಇನ್ನು ಚಾಲ್ತಿಯಲ್ಲಿರುವುದು ನೋವಿನ ಸಂಗತಿಯಾಗಿದೆ. ಸಾಲದಾತ ಸಾಲಗಾರನನ್ನು ಜೀತಕ್ಕಿಟ್ಟುಕೊಳ್ಳುವುದು ಕಾನೂನು ಅಪರಾಧವಾಗುತ್ತದೆ. ನಮ್ಮ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಗೌರವಯುತವಾಗಿ ಬದುಕಲು ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ. ಮಾನವ ಹಕ್ಕುಗಳು ಉಲ್ಲಂಘನೆಯಾದರೆ ಕಾನೂನು ನೆರವು ಪಡೆಯಬೇಕು ಎಂದು ಸಲಹೆ ನೀಡಿದರು. ಜೀತ ವಿಮುಕ್ತ ಕರ್ನಾಟಕ(ಜೀವಿಕ) ಸಂಘಟನೆಯ ಜಿಲ್ಲಾ ಸದಸ್ಯೆ ಚಿಕ್ಕಮ್ಮ ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಜೀತ ವಿಮುಕ್ತ ಕಾರ್ಮಿಕರಿಗೆ ಗೌರವಿಸುವ ಕೆಲಸವಾಗಬೇಕು ಎಂದು ಮನವಿ ಮಾಡಿದ ಅವರು, “ಅಮರ ವೀರ ಅಂಬೇಡ್ಕರ ಸಮರಗೈದೆ ಅಂದು-ಸ್ವಾತAತ್ರö್ಯ, ಸ್ವಾಭಿಮಾನ, ಸಮಾನತೆ ಎಂದು” ಎಂಬ ಜಾಗೃತಿ ಗೀತೆಯನ್ನು ಹಾಡಿದರು.ಜೀತ ಪದ್ಧತಿ ಕುರಿತು ಕಾರ್ಯಕ್ರಮದಲ್ಲಿ ಜೀತ ಪದ್ಧತಿಯಲ್ಲಿ ತೊಡಗಿಕೊಂಡಿದ್ದ ಕುಟುಂಬದವರು ಅಭಿನಯಿಸಿದ ಸಾಕ್ಷö್ಯಚಿತ್ರವನ್ನು ಪ್ರದರ್ಶಿಸಲಾಯಿತು.
ಇದಕ್ಕೂ ಮುನ್ನ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಡಾ: ಬಾಬು ಜಗಜೀವನರಾಮ್ ಅವರ ಭಾವಚಿತ್ರಗಳಿಗೆ ಗಣ್ಯರಿಂದ ಪುಷ್ಪ ನಮನ ಸಲ್ಲಿಸಲಾಯಿತು. ಉಪ ವಿಭಾಗಾಧಿಕಾರಿ, ಗೌರವ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ವಂದಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ ಹಾಗೂ ಸಂಜೀವಪ್ಪ ಉಪಸ್ಥಿತರಿದ್ದರು.

(Visited 1 times, 1 visits today)
ಜಿ.ಪ್ರಭು ಜೀತ ಪದ್ಧತಿ
Previous Articleಶಟಲ್ ಟೂರ್ನಿಯಲ್ಲಿ ದ್ವಿತೀಯ ಬಹುಮಾನ
Next Article ಪ್ರೊ.ಪರಶುರಾಮಗೆ ಕನಕದಾಸ ಜಯಂತಿಯ ಗೌರವ
News Desk Benkiyabale

Related Posts

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.