BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್‌ಗೆ ಸ್ಮಾರ್ಟ್ ಸಿಟೀಸ್ ಇಂಡಿಯಾ ಪ್ರಶಸ್ತಿ
ತುಮಕೂರು

ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್‌ಗೆ ಸ್ಮಾರ್ಟ್ ಸಿಟೀಸ್ ಇಂಡಿಯಾ ಪ್ರಶಸ್ತಿ

By News Desk BenkiyabaleUpdated:March 22, 2025 2:44 pm

ತುಮಕೂರು:  ಸ್ಮಾರ್ಟ್ಸಿಟಿ ಲಿಮಿಟೆಡ್‌ನ ಪ್ರಮುಖ ಯೋಜನೆಯಾದ ಸಮಗ್ರ ನಗರ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ICMCCC-Integrated City Management Command and Control Centre))ಗೆ ಪ್ರಥಮ ಪ್ರಶಸ್ತಿ ಲಭಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ ಸ್ಮಾರ್ಟ್ ಸಿಟಿ ಮಿಷನ್ ಯೋಜನೆಯಡಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗಿದೆ.
ಕೇಂದ್ರದ ನಗರಾಭಿವೃದ್ಧಿ ಸಚಿವಾಲಯದಿಂದ ಆಯೋಜಿತ ಮಾರ್ಚ್ ೧೯ ರಿಂದ ೨೧ರವದರೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ದೇಶದ ೧೦೦ ಸ್ಮಾರ್ಟ್ ಸಿಟಿ ಭಾಗವಹಿಸಿದ್ದ ೧೦ನೇ ಸ್ಮಾರ್ಟ್ ಸಿಟೀಸ್ ಇಂಡಿಯಾ-೨೦೨೫ ಮತ್ತು ೩೨ನೇ ಕನ್ವರ್‌ಜೆನ್ಸ್ ಇಂಡಿಯಾ ೨೦೨೫ ಎಕ್ಸೊ÷್ಪÃ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಐಸಿಎಂಸಿಸಿ ಕೇಂದ್ರವು ತುರ್ತು ಪ್ರತಿಕ್ರಿಯೆ ವ್ಯವಸ್ಥೆ, ಚುರುಕು ಸಂದೇಶ ರವಾನೆ, ವ್ಯತ್ಯಯಗೊ ಳಿಸಬಹುದಾದ ಸಂದೇಶ ರವಾನೆ ವ್ಯವಸ್ಥೆ, ಸಾರ್ವಜನಿಕ ಪ್ರಕಟಣೆಗಳು, ಪರಿಸರ ಮೇಲ್ವಿಚಾರಣಾ ವ್ಯವಸ್ಥೆಯನ್ನು ತುಮಕೂರು ಒನ್ ವ್ಯವಸ್ಥೆಯೊಂದಿಗೆ ಪೂರೈಸುತ್ತದೆ. ಅಲ್ಲದೆ ನಗರದ ಆಡಳಿತ ಕಚೇರಿ/ಪ್ರಾಧಿಕಾರಗಳಿಗೆ ಅವುಗಳ ದೈನಂದಿನ ಕಾರ್ಯ ಚಟುವಟಿಕೆಗಳ ಸಮಯದಲ್ಲಿ ಹಾಗೂ ತುರ್ತು ಸಂದರ್ಭಗಳಲ್ಲಿ ಬೆಂಬಲ ವ್ಯವಸ್ಥೆಯಾಗಿ ಈ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಐಸಿಎಂಸಿಸಿ ವ್ಯವಸ್ಥೆಯಡಿ ವಿಶೇಷವಾಗಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಗರದಾದ್ಯಂತ ನಿಗಾವಹಿಸಲಾಗುತ್ತಿದೆ.

ತುಮಕೂರು ನಗರವು ಕರ್ನಾಟಕದ ಸ್ಮಾರ್ಟ್ ಸಿಟಿಗಳಲ್ಲಿ ಐಸಿಎಂಸಿಸಿಯನ್ನು ಸ್ಥಾಪಿಸಿ ಕಾರ್ಯಾರಂಭ ಮಾಡಿದ ಪ್ರಥಮ ಸ್ಮಾರ್ಟ್ ನಗರವಾಗಿದ್ದು, ಇ-ಆಡಳಿತದ ಗುರಿಯೊಂದಿಗೆ ನಗರದ ಕಾರ್ಯಾಚರಣೆಗಳು, ಸಂಚಾರ ನಿಯಮ ಉಲ್ಲಂಘನೆಗಾಗಿ ಇ-ಚಲನಿಂಗ್ ವ್ಯವಸ್ಥೆ, ಘನ ತ್ಯಾಜ್ಯ ಸಂಗ್ರಹಣಾ ವಾಹನಗಳ ಸಮರ್ಥ ಸ್ಥಳ ಟ್ರಾö್ಯಕಿಂಗ್ ವ್ಯವಸ್ಥೆಯಿಂದ ಪರಿಣಾಮಕಾರಿ ಕಸ ಸಂಗ್ರಹಣೆ, ದಿನದ ೨೪ ಗಂಟೆಗಳಲ್ಲಿ ನಗರದ ನಿಗಾವಣೆಗಾಗಿ ಮೊಬೈಲ್ ಕಣ್ಗಾವಲು ವಾಹನಗಳು, ಸಾರ್ವಜನಿಕ ಪ್ರಕಟಣೆಗಳು/ಎಚ್ಚರಿಕೆಗಳಿಗಾಗಿ ಸಾರ್ವಜನಿಕ ವಿಳಾಸ ವ್ಯವಸ್ಥೆ ಜೊತೆಗೆ ಡ್ಯಾಶ್ ಬೋರ್ಡ್ ಕ್ಯಾಮೆರಾಗಳು ಮತ್ತು Pಚಿಟಿ ಖಿiಟಣ Zoom  ಕ್ಯಾಮೆರಾಗಳು ತ್ವರಿತ ಸೇವೆಗಳನ್ನು ಹತೋಟಿಗೆ ತಂದಿವೆ.
ಐಸಿಎಂಸಿಸಿ ವ್ಯವಸ್ಥೆಯಿಂದ ಇತ್ತೀಚೆಗೆ ನಗರದ ಪ್ರಮುಖ ವೃತ್ತದಲ್ಲಿ ರಾತ್ರಿ ವೇಳೆಯಲ್ಲಿ ಬಸ್‌ಗಾಗಿ ಕಾಯ್ದು ಕುಳಿತಿದ್ದ ದಂಪತಿಗಳೊAದಿಗೆ ಮತ್ತೊಬ್ಬ ವ್ಯಕ್ತಿಯನ್ನು ಅನುಚಿತವಾಗಿ ವರ್ತಿಸುತ್ತಿರುವುದನ್ನು ಸಿಸಿಟಿವಿ ಮೂಲಕ ಗಮನಿಸಿದ ಕೂಡಲೇ ಅವರಿಗೆ ಸಾರ್ವಜನಿಕ ಪ್ರಕಟಣೆ ಮೂಲಕ ಯಾವುದೇ ತುರ್ತು ಸಂದರ್ಭ ಎದುರಾಗಿದ್ದಲ್ಲಿ ಎಸ್‌ಓಎಸ್ ಬಟನ್ ಒತ್ತುವಂತೆ ಸೂಚನೆ ನೀಡಿ ಅವರಿಗೆ ನಗರವು ಸರಕ್ಷಿತವಾಗಿದೆ ಎಂದು ಮನದಟ್ಟು ಮಾಡಿದ ಘಟನೆಯನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಇತ್ತೀಚೆಗೆ ನಗರದ ಶಿರಾಗೇಟ್ ರಸ್ತೆಯಲ್ಲಿ ಅನಾರೋಗ್ಯ ಪೀಡಿತ ದಾರಿಹೋಕರೊಬ್ಬರು ಅಸ್ವ ಸ್ಥರಾಗಿ ನರಳಾಡುತ್ತಿರುವುದನ್ನು ಸಿಸಿಟಿವಿ ಸರ್ವೆಲೆನ್ಸ್ ಮೂಲಕ ಗಮನಿಸಿದ ಐಸಿಎಂಸಿಸಿ ಸಿಬ್ಬಂದಿ ಆರೋಗ್ಯ ಇಲಾಖೆಯ ೧೦೮ ಆಂಬುಲೆನ್ಸ್ಗೆ ಮಾಹಿ ತಿ ನೀಡಿ ಕೂಡಲೇ ಸ್ಥಳಕ್ಕೆ ಕಳುಹಿಸುವ ಮೂಲಕ ಅಗತ್ಯ ತುರ್ತು ಚಿಕಿತ್ಸೆಗೆ ನೆರವಾಗಿರುವುದು, ಮರ ಳೂರು ದಿಣ್ಣೆಯಲ್ಲಿ ಕೌಟುಂಬಿಕ ಕಲಹದಿಂದ ಗೃಹಿಣಿಯೊಬ್ಬರು ಎಸ್‌ಓಎಸ್ ಪ್ಯಾನಿಕ್ ಬಟನ್ ಮೂಲಕ ಐಸಿಎಂಸಿಸಿಯನ್ನು ಸಂಪರ್ಕಿಸಿ ಸೂಕ್ತ ರಕ್ಷಣೆ ಕೋರಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಪೋಲೀಸ್ ಇಲಾಖೆಗೆ ಮಾಹಿತಿ ನೀಡು ವ ಮೂಲಕ ಸುರಕ್ಷತೆಗೆ ಧಾವಿಸಿರುವುದನ್ನು ಉದಾ ಹರಿಸಬಹುದು.
ಪ್ರಶಸ್ತಿ ಸ್ವೀಕಾರ: ನಗರದಲ್ಲಿ ತನ್ನ ಕಾರ್ಯಾ ಚರಣೆಗಳೊಂದಿಗೆ ವಾಸ್ತವಿಕವಾಗಿ ನಗರವನ್ನು ‘ಸ್ಮಾರ್ಟ್” ಆಗುವಂತೆ ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್ ವತಿ ಯಿಂದ ಅನುಷ್ಟಾನಗೊಳಿಸಿರುವ ನಗರದ ಸುರಕ್ಷತೆ ಮತ್ತು ಭದ್ರತೆಗೆ ವಿವಿಧ ರೀತಿಯಲ್ಲಿ ಕಾರ್ಯಾಚರಣೆಗೊಳಿಸುತ್ತಿರುವ ಐಸಿಎಂಸಿಸಿಗೆ ಪ್ರಥಮ ಪ್ರಶಸ್ತಿ ಲಭಿಸಿದ್ದು ಮಾರ್ಚ್ ೨೧ರಂದು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ. ಪ್ರಶಸ್ತಿ ಸ್ವೀಕರಿಸಿದ್ದಾರೆ. ಪ್ರಶಸ್ತಿ ಪಡೆದ ಬಿ.ವಿ.ಅಶ್ವಿಜ ಅವರು ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್‌ನ ಅಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು, ನಗರದ ನಾಗರೀಕರು, ಸಿಬ್ಬಂದಿ ವರ್ಗದವರಿಗೆ ಮತ್ತು ನಗರದ ಸುವ್ಯವಸ್ಥೆಗೆ ಸಹಕರಿಸುತ್ತಿರುವ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

(Visited 1 times, 1 visits today)
BJP Congress Mla jyothiganesh tumkur Tumkur mahanagara palike ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಕಲ್ಪತರುನಾಡಲ್ಲಿ ಪ್ರತಿಭಟನೆಗಷ್ಟೇ ಸೀಮಿತವಾದ ಬಂದ್
Next Article ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.