BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಮಾದರಿ
ಕಲೆ-ಸಾಹಿತ್ಯ

ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಮಾದರಿ

ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ವಾಂಸ ಆಶುತೋಷ್ ಅದೋನಿ ಅಭಿಪ್ರಾಯ
By News Desk BenkiyabaleUpdated:March 25, 2025 4:08 pm

ತುಮಕೂರು: ಹದಿನೆಂಟನೆಯ ಶತಮಾನದಲ್ಲೇ ಕಲ್ಯಾಣರಾಜ್ಯದ ಪರಿಕಲ್ಪನೆಯನ್ನು ನನಸಾಗಿಸಿದ ದಿಟ್ಟ ಆಡಳಿತಗಾರ್ತಿ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಅತ್ಯುತ್ತಮ ಮಾದರಿ ಎಂದು ಲೇಖಕ, ವಿದ್ವಾಂಸ ಆಶುತೋಷ್ ಅದೋ ನಿ ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವಶಾಸ್ತç, ರಾಜ್ಯಶಾಸ್ತç, ಸಾರ್ವಜನಿಕ ಆಡಳಿತ, ಕನ್ನಡ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳು ಜಂಟಿಯಾಗಿ ಸೋಮವಾರ ಆಯೋಜಿಸಿದ್ದ ‘ಅಹಲ್ಯಾಬಾಯಿ ಹೋಳ್ಕರ್ ಅವರ ಜೀವನ ಮತ್ತು ಸಾಧನೆಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಹಲ್ಯಾಬಾಯಿ ಕಾಲದಲ್ಲಿ ಮಾಳ್ವ ಪ್ರದೇಶವು ಭಾರತದ ಅತ್ಯಂತ ಶ್ರೀಮಂತ ರಾಜ್ಯವೆಂದು ಗುರು ತಿಸಿಕೊಂಡಿತ್ತು. ತನ್ನ ಪತಿ ಹಾಗೂ ಮಗನನ್ನು ಅಕಾಲದಲ್ಲಿ ಕಳೆದುಕೊಂಡ ಆಕೆ ಅನೇಕ ತೊಂದರೆ ಗಳನ್ನು ಮೆಟ್ಟಿನಿಂತು ದಕ್ಷ ಆಡಳಿತ ನೀಡಿದಳು. ಏಕಾಂಗಿ ಹೋರಾಟ ಮಾಡಿ ಸುಖೀರಾಜ್ಯವನ್ನು ಸ್ಥಾಪಿಸಿದಳು ಎಂದು ವಿವರಿಸಿದರು.
ಅಸಚ್ಚಾರಿತ್ರö್ಯವಿಲ್ಲದೆ ಯಾವುದೇ ರಾಷ್ಟç ಎದ್ದುನಿ ಲ್ಲದು. ಯಾರೇ ಆಡಳಿತಗಾರರು ಶ್ರೇಷ್ಠರು ಎನಿಸಿಕೊ ಳ್ಳಲಾರರು. ಆದರೆ ಅಹಲ್ಯಾಬಾಯಿ ನೈತಿಕವಾಗಿ ಅದ್ಭುತ ವ್ಯಕ್ತಿತ್ವ ಬೆಳೆಸಿಕೊಂಡಿದ್ದರು. ಅವರ ವೈಯಕ್ತಿಕ ಬದುಕು ಪಾರದರ್ಶಕವಾಗಿತ್ತು. ಚಾರಿತ್ರö್ಯಕ್ಕೂ ರಾಜಕೀಯಕ್ಕೂ ಸಂಬAಧವಿದೆ ಎಂಬುದನ್ನು ಆಕೆ ತೋರಿಸಿಕೊಟ್ಟರು ಎಂದರು.
ಅಹಲ್ಯಾಬಾಯಿಗೆ ಸಾಮಾಜಿಕ ಜವಾಬ್ದಾರಿಯ ಸ್ಪಷ್ಟ ಕಲ್ಪನೆಯಿತ್ತು. ನೀರಿನ ರಕ್ಷಣೆ, ಪ್ರಕೃತಿಯ ಪರಿಪಾಲನೆ, ಪರಿಸರ ಸಂರಕ್ಷಣೆ, ಉದ್ಯೋಗ ವೃದ್ಧಿ ಮುಂತಾದ ಆಧುನಿಕ ಅಗತ್ಯಗಳನ್ನು ಆಕೆ ಮನಗಂ ಡಿದ್ದಳು. ಇಂದಿನ ಯುವ ಜನತೆ ಅವರನ್ನು ಪ್ರೇರಣೆ ಯಾಗಿ ತೆಗೆದುಕೊಳ್ಳಬೇಕು. ಎಂತಹ ಸಮಸ್ಯೆಗಳು ಇದ್ದರೂ ಸಹ ಖಿನ್ನತೆಗೆ ಒಳಪಡದೆ ಧೈರ್ಯವಾಗಿ ಜೀವನವನ್ನು ಸಾಗಿಸಬೇಕು ಎಂಬುದನ್ನು ಅಹಲ್ಯಾ ಬಾಯಿಯ ಬದುಕನ್ನು ನೋಡಿ ಕಲಿಯಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ. ಮಾತನಾಡಿ, ಕಟ್ಟುಪಾಡುಗಳ ಮಧ್ಯೆಯೂ ಮನಸ್ಸು ಮಾಡಿದರೆ ಮಹಿಳೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಹೋಳ್ಕರ್ ಉತ್ತಮ ಮಾದರಿಯಾಗಿ ನಿಲ್ಲುತ್ತಾರೆ ಎಂದು ಅಭಿಪ್ರಾಯಪಟ್ಟರು.
ಮುನ್ನೂರು ವರ್ಷಗಳ ಹಿಂದೆ ಭಾರತದ ಪರಿಸ್ಥಿತಿ ಹೇಗಿತ್ತೆಂದು ಊಹಿಸಬಹುದು. ಅಷ್ಟು ಅಡೆತಡೆಗಳ ನಡುವೆ ಆಕೆ ಹೊಂದಿದ್ದ ಕಲ್ಯಾಣರಾಜ್ಯದ ಕಲ್ಪನೆ ಶ್ರೇಷ್ಠವಾದದ್ದು. ಅಹಲ್ಯಾಬಾಯಿ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕು ಎಂದರು. ಸಿಂಡಿಕೇಟ್ ಸದಸ್ಯ ಡಾ. ಕೆ. ರಾಜೀವಲೋಚನ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸಿಬಂತಿ ಪದ್ಮನಾಭ ಕೆ. ವಿ. ಸ್ವಾಗತಿಸಿದರು. ಡಾ. ಜಿ. ಗಿರಿಜಮ್ಮ ವಂದಿಸಿದರು. ಅಖಿಲಾಂಡೇಶ್ವರಿ ಕಲಾಸಂಪದ ಸಂಸ್ಥೆಯ ವಿದುಷಿ ವೀಣಾ ಸಿ. ಶೇಷಾದ್ರಿಯವರ ತಂಡವು ‘ಚಿನ್ಮಾತೆ ಅಹಲ್ಯಾ- ತ್ರಿಶತಿ ಅತುಲ್ಯ’ ಎಂಬ ನೃತ್ಯರೂಪಕವನ್ನು ಪ್ರಸ್ತುತಪಡಿಸಿತು.

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿಶ್ವವಿದ್ಯಾನಿಲಯ
Previous Articleಏ ೬ ರಿಂದ ೧೫ರವರೆಗೆ ಹೊನ್ನಮರಡಿ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ
Next Article ‘ಶೋಷಿತ ಸಮುದಾಯದ ಆಶಾಕಿರಣ ಎಲ್.ಜಿ.ಹಾವನೂರು’
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.