BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
  • ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆ.ಎಸ್.ಎಫ್.ಸಿ.ಯಿಂದ ನೆರವು ಪಡೆದು ಬೃಹತ್ ಉದ್ದಿಮೆದಾರರಾಗಲು ಕರೆ
ತುಮಕೂರು ಜಿಲ್ಲಾ ಸುದ್ಧಿಗಳು

ಕೆ.ಎಸ್.ಎಫ್.ಸಿ.ಯಿಂದ ನೆರವು ಪಡೆದು ಬೃಹತ್ ಉದ್ದಿಮೆದಾರರಾಗಲು ಕರೆ

By News Desk BenkiyabaleUpdated:December 28, 2018 4:36 pm

 ತುಮಕೂರು :

      ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ಸಾಲ ಸೌಲಭ್ಯದ ನೆರವು ಪಡೆದು ಬೃಹತ್ ಉದ್ದಿಮೆದಾರರಾಗಬೇಕೆಂದು ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಹೆಚ್.ಜಿ.ಚಂದ್ರಶೇಖರ್ ಕರೆ ನೀಡಿದರು.

      ರಾಜ್ಯ ಹಣಕಾಸು ಸಂಸ್ಥೆ ಜಿಲ್ಲಾ ಕಚೇರಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಇತ್ತೀಚೆಗೆ ಡಿಐಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ “ಉದ್ದಿಮೆದಾರರ ಸಮಾವೇಶ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಸ್ಥೆಯಿಂದ ತಾವು ಪಡೆದ ಸಾಲ ಸೌಲಭ್ಯದ ನೆರವಿನ ಬಗ್ಗೆ ಅನುಭವವನ್ನು ಹಂಚಿಕೊಂಡರು. ಉದ್ದಿಮೆದಾರರು ಕಡಿಮೆ ಬಡ್ಡಿ ದರದಲ್ಲಿ ದೊರೆಯುವ ಸಾಲ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಕಾರಣೀಭೂತರಾಗಬೇಕೆಂದು ಸಲಹೆ ನೀಡಿದರು.

      ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಲ್. ನಾಗರಾಜು ಮಾತನಾಡಿ, ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಕೈಗಾರಿಕೋದ್ಯಮಿಗಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

       ಕೆಎಸ್‍ಎಫ್‍ಸಿ ಪ್ರಧಾನ ವ್ಯವಸ್ಥಾಪಕ ಜಿ.ವಿ.ಚಂದ್ರಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಹಣಕಾಸು ಸಂಸ್ಥೆಯ ಚಟುವಟಿಕೆ ಹಾಗೂ ಹಣಕಾಸು ವಹಿವಾಟುಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆ, ಸೇವಾ ಕ್ಷೇತ್ರಗಳ ಸ್ಥಾಪನೆ, ವಿಸ್ತರಣೆ, ಆಧುನೀಕರಣಕ್ಕೆ ಲಭ್ಯವಿರುವ ವಿವಿಧ ಯೋಜನೆಗಳ ಕುರಿತು ವಿವರಿಸಿದರು. ವಿಶೇಷವಾಗಿ ಪ.ಜಾತಿ ಮತ್ತು ಪಂಗಡಗಳ ಉದ್ದಿಮೆದಾರರು, ಮಹಿಳಾ ಉದ್ದಿಮೆದಾರರು, ಹೊಸ ಕೈಗಾರಿಕಾ ಘಟಕಗಳಿಗೆ ಉಪಯೋಗಿಸುವ ಕಟ್ಟಡ ಮತ್ತು ಯಂತ್ರೋಪಕರಣಗಳ ಅಳವಡಿಕೆಗಾಗಿ ಲಭ್ಯವಿರುವ ಶೇ. 4ರ ನಿವ್ವಳ ಬಡ್ಡಿ ದರ ಯೋಜನೆ ಕುರಿತು ತಿಳಿಸಿದರು.

      ವಸಂತ ನರಸಾಪುರ ಕೈಗಾರಿಕಾ ಪ್ರದೇಶ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಶಿವಶಂಕರ್ ಹಾಗೂ ಬೆಂಗಳೂರಿನ ಎಫ್.ಕೆ.ಸಿ.ಸಿ.ಐ. ನಿರ್ದೇಶಕ ಸುಜ್ಞಾನ ಹಿರೇಮಠ್ ಮಾತನಾಡಿ, ಕೈಗಾರಿಕೆಗಳು ಎದುರಿಸುತ್ತಿರುವ ಕಷ್ಟ ನಷ್ಟಗಳ ಬಗ್ಗೆ ವಿವರಿಸಿದರಲ್ಲದೆ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೈಗಾರಿಕೆಗಳ ಅಭಿವೃದ್ಧಿಗಾಗಿ ನೀಡುತ್ತಿರುವ ವಿಶೇಷ ಸವಲತ್ತುಗಳನ್ನು ಬಳಸಿಕೊಂಡು ಕೈಗಾರಿಕೆಗಳನ್ನು ಲಾಭದಾಯಕವಾಗಿ ನಡೆಸಿಕೊಂಡು ಹೋಗಬೇಕೆಂದು ತಿಳಿಸಿದರು.

      ಕುಣಿಗಲ್ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಜಯರಾಮಯ್ಯ, ಕೆಎಸ್‍ಎಫ್‍ಸಿ ಪ್ರಧಾನ ವ್ಯವಸ್ಥಾಪಕ ಜಿ.ವಿ. ಚಂದ್ರಕುಮಾರ್, ಉಪ ಪ್ರಧಾನ ವ್ಯವಸ್ಥಾಪಕ ಅಶೋಕ್ ಹೆಚ್. ಕುರಣಿ, ಸಹಾಯಕ ವ್ಯವಸ್ಥಾಪಕ ವೆಂಕಟೇಶ್ ಜೋಯಿಸ್, ಉಪ ವ್ಯವಸ್ಥಾಪಕ ಸಂಪತ್ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು. ಸುಮಾರು 100 ಹಾಲಿ ಹಾಗೂ ಭಾವಿ ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.

(Visited 30 times, 1 visits today)
Previous Article ವಿಕಲಚೇತನರ ಯೋಜನೆಗಳ ಬಗ್ಗೆ ಪೋಷಕರಲ್ಲಿ ಹೆಚ್ಚಿನ ಅರಿವು ಅಗತ್ಯ
Next Article ಪ್ರಾದೇಶಿಕ ಭಾಷೆಗಳು ಸಂಕಷ್ಟ ಎದುರಿಸುತ್ತಿವೆ-ಜಿ.ಬಿ.ಜೋತಿಗಣೇಶ
News Desk Benkiyabale

Related Posts

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm news
ತಾಜಾ ಸುದ್ಧಿಗಳು
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
news

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm
news

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm
news

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
news

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
Our Youtube Channel
Our Picks

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಆಕ್ರೋಶ

August 12, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

By News Desk BenkiyabaleAugust 12, 2026 5:37 pm

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ…

ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ

August 12, 2026 5:35 pm

ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ

August 12, 2026 5:33 pm

ಒಂದೇ ನಲ್ಲಿಯಲ್ಲಿ ೧೦೦ ಮನೆಯವರು ನೀರು ಹಿಡಿಯುವ ದುಸ್ಥಿತಿ

August 12, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.