
ತುಮಕೂರು: ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೀಲಕ್ಷಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೫೯೬ ಅಂಕ ಪಡೆದು ರಾಜ್ಯಕ್ಕೆ ೪ನೇ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ.
ಅಕ್ಕಿ ವ್ಯಾಪಾರಿ ರಾಜು ಹಾಗೂ ಪ್ರಭಾವತಿ ದಂಪತಿಗಳ ಪುತ್ರಿಯಾಗಿರುವ ವಿದ್ಯಾರ್ಥಿನಿ ಶ್ರೀಲಕ್ಷಿ÷್ಮÃರವರು ವಾಣಿಜ್ಯ ವಿಭಾಗದಲ್ಲಿ ೫೯೬ ಅಂಕ ಪಡೆದು ರಾಜ್ಯದಲ್ಲೇ ೪ ಸ್ಥಾನ ಪಡೆಯುವ ಮೂಲಕ ಕಾಲೇಜು ಹಾಗೂ ತುಮಕೂರು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾನಿಧಿ ಹಾಗೂ ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎನ್.ಬಿ. ಪ್ರದೀಪ್ ಕುಮಾರ್ ಅವರು ವಿದ್ಯಾರ್ಥಿನಿ ಶ್ರೀಲಕ್ಷಿ÷್ಮÃರವರಿಗೆ ಪುಷ್ಪಗುಚ್ಛ ನೀಡಿ ಸಿಹಿ ತಿನಿಸುವ ಮೂಲಕ ಅಭಿನಂದಿಸಿದರು.
ನಂತರ ಮಾತನಾಡಿದ ಪ್ರದೀಪ್‌ಕುಮಾರ್ ಅವರು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶ್ರೀಲಕ್ಷಿ÷್ಮÃ ಆರ್. ೫೯೬ ಅಂಕ ಪಡೆದು ರಾಜ್ಯಕ್ಕೆ ೪ ಸ್ಥಾನ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಒತ್ತು ನೀಡಿ ವ್ಯಾಸಂಗ ಮಾಡಿದ್ದಾರೆ. ಹಾಗೆಯೇ ಉಳಿದ ವಿಭಾಗಗಳ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿದ್ದಾರೆ ಎಂದರು.
ಈ ಬಾರಿ ಮೌಲ್ಯ ಮಾಪನ ಕಠಿಣವಾಗಿದ್ದು, ಶೇ. ೯೦, ೯೫ ಫಲಿತಾಂಶದ ನಿರೀಕ್ಷೆಯಲ್ಲಿದ್ದವರಿಗೆ ಶೇ. ೫ ರಷ್ಟು ಅಂಕ ಕಡಿಮೆಯಾಗಿರಬಹುದು. ಆದರೆ ಉತ್ತಮ ಫಲಿತಾಂಶ ಬಂದಿದೆ ಎಂದು ಅವರು ಹೇಳಿದರು.ಫಲಿತಾಂಶ ಯಾವುದೇ ರೀತಿ ಬಂದಿರಲಿ, ಅದನ್ನು ಸಾಕಾರತ್ಮಕವಾಗಿ ಸ್ವೀಕರಿಸಿ ವಿದ್ಯಾರ್ಥಿ ಗಳು ಹಾಗೂ ಪೋಷಕರು ಸಂತಸ ಪಡಬೇಕು ಎಂದರು. ವಿದ್ಯಾರ್ಥಿನಿ ಶ್ರೀಲಕ್ಷಿ÷್ಮÃ ರವರನ್ನು ಕಾಲೇಜಿನ ಪ್ರಾಂಶುಪಾಲರಾದ ಸಿದ್ದೇಶ್ವರಸ್ವಾಮಿ ಸೇರಿದಂತೆ ಉಪನ್ಯಾಸಕರ ವೃಂದ ಹಾಗೂ ಆಡಳಿತ ಮಂಡಳಿ ಅಭಿನಂದಿಸಿ ಶುಭ ಕೋರಿದರು.



