BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿವಿಧ ರೈಲ್ವೆ ಕಾಮಗಾರಿಗಳಿಗೆ ಶಂಕು ಸ್ಥಾಪನೆ
ಇತರೆ ಸುದ್ಧಿಗಳು

ವಿವಿಧ ರೈಲ್ವೆ ಕಾಮಗಾರಿಗಳಿಗೆ ಶಂಕು ಸ್ಥಾಪನೆ

೧೨೭.೪೩ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ನಿರ್ಮಾಣ: ಸಚಿವ
By News Desk BenkiyabaleUpdated:April 10, 2025 4:13 pm

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಬುಧವಾರ ನಗರದ ಬಟವಾಡಿ, ಬಡ್ಡಿಹಳ್ಳಿ ಹಾಗೂ ಮೈದಾಳ ರೈಲ್ವೆ ಗೇಟ್ ಬಳಿ ರೋಡ್ ಓವರ್ ಬ್ರಿಡ್ಜ್(ಆರ್‌ಓಬಿ) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಮೈದಾಳದಲ್ಲಿ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು ನಗರದಲ್ಲಿ ೧೨೭.೪೩ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ನಿರ್ಮಾಣ ಮಾಡುವುದರಿಂದ ದ್ವಿಚಕ್ರ ವಾಹನ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ರೋಡ್ ಓವರ್ ಬ್ರಿಡ್ಜ್ ನಿರ್ಮಾಣಕ್ಕಾಗಿ ಬಟವಾಡಿ ರೈಲ್ವೆ ಗೇಟ್(ಎಲ್.ಸಿ ೩೯) ಬಳಿ ೪೩.೩೭ ಕೋಟಿ ರೂ., ಬಡ್ಡಿಹಳ್ಳಿ ಗೇಟ್(ಎಲ್.ಸಿ ೩೮)ಬಳಿ ೨೬.೭೫ ಕೋಟಿ ರೂ. ಹಾಗೂ ಮೈದಾಳ ಗೇಟ್ ಬಳಿ(ಎಲ್.ಸಿ ೩೫) ೫೭.೩೧ ಕೋಟಿ ರೂ. ಸೇರಿ ಒಟ್ಟು ೧೨೭.೪೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ ೧೮ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.


ಕರ್ನಾಟಕ ರಾಜ್ಯದಲ್ಲಿ ೧೯೦೦ ಕೋಟಿ ರೂ. ವೆಚ್ಚದಲ್ಲಿ ೬೧ ಅಮೃತ್ ಭಾರತ್ ರೈಲ್ವೆ ಸ್ಟೇಷನ್‌ಗಳ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ೧೬ ಕೋಟಿ ರೂ. ವೆಚ್ಚದಲ್ಲಿ ಗುಬ್ಬಿ ಹಾಗೂ ೨೪ ಕೋಟಿ ರೂ. ವೆಚ್ಚದಲ್ಲಿ ತಿಪಟೂರು ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲಾಗುವುದು. ಅಲ್ಲದೆ ೮೯ ಕೋಟಿ ರೂ. ವೆಚ್ಚದಲ್ಲಿ ನಗರದ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಡಾ: ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಗರದ ರೈಲ್ವೆ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು.
ಭಾರತದ ರೈಲ್ವೆ ವ್ಯವಸ್ಥೆಯನ್ನು ಮತ್ತಷ್ಟು ಆಧುನೀಕರಿಸುವ ಹಾಗೂ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆ ಮತ್ತು ಸುರಕ್ಷತೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ ವಿ. ಸೋಮಣ್ಣ ತುಮಕೂರಿನ ಲೋಕಸಭಾ ಸದಸ್ಯ ಮತ್ತು ಕೇಂದ್ರದ ಸಚಿವರಾಗಿ ಅಧಿಕಾರ ವಹಿಸಿಕೊಂಡ ೬ ತಿಂಗಳೊಳಗಾಗಿ ನೂರಾರು ಕೋಟಿ ರೂ. ಗಳ ಅನುದಾನವನ್ನು ನಗರದ ಅಭಿವೃದ್ಧಿಗೆ ತಂದುಕೊಟ್ಟಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮಾಂತರ ಶಾಸಕ ಸುರೇಶ್ ಗೌಡ, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ ಅಶ್ವಿಜ, ತುಮಕೂರು ತಹಶೀಲ್ದಾರ್ ರಾಜೇಶ್ವರಿ, ನೈರುತ್ಯ ರೈಲ್ವೆ ನಿರ್ಮಾಣದ ಮುಖ್ಯ ಆಡಳಿತ ಅಧಿಕಾರಿ ಅಜಯ್ ಶರ್ಮ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಮಿತೇಶ್ ಕುಮಾರ್ ಸಿನ್ಹಾ, ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ ಪುರಿಯ, ಮುಖ್ಯ ಇಂಜಿನಿಯರ್ ನೈರುತ್ಯ ರೈಲ್ವೆ ನಿರ್ಮಾಣ ಅಧಿಕಾರಿ ಪ್ರದೀಪ್ ಪೂರಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

(Visited 1 times, 1 visits today)
BJP Congress Mla jyothiganesh tumkur ಜಿಲ್ಲಾಡಳಿತ
Previous Articleಏ. ೧೬: ಬೆಲೆ ಏರಿಕೆ ಖಂಡಿಸಿ ಸ್ಲಂ ಸಂಘಟನೆ ಪ್ರತಿಭಟನೆ
Next Article ಕುಡಿಯುವ ನೀರು ಪೂರೈಕೆಯಲ್ಲಿ ಲೋಪ ಸಲ್ಲ
News Desk Benkiyabale

Related Posts

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm news
ತಾಜಾ ಸುದ್ಧಿಗಳು
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
Our Youtube Channel
Our Picks

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

By News Desk BenkiyabaleOctober 16, 2026 5:16 pm

ತುಮಕೂರು: ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಅಸ್ಮಿತೆಗಳು ಅಳಿಸಿಹೋಗುವ ಆತಂಕ ಎದುರಾಗಿರುವ ಇಂದಿನ ಸಂದರ್ಭದಲ್ಲಿ ನಾಟಕಗಳು, ವಿವಿಧ ರಂಗರೂಪಗಳು ನಮ್ಮ ಮೂಲ…

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.