
ತುಮಕೂರು: ಎಂಜಿನಿಯರಿAಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಇಂದಿನಿAದ ಆರಂಭವಾದ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಯು ನಗರ ಸೇರಿದಂತೆ ಜಿಲ್ಲೆಯಾದ್ಯಂತ ೨೫ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ನಡೆಯಿತು.
ತುಮಕೂರು ನಗರ ೧೮, ತಿಪಟೂರಿನ ೪ ಹಾಗೂ ಸಿರಾ ನಗರದ ೩ ಪರೀಕ್ಷಾ ಕೇಂದ್ರ ಸೇರಿ ಒಟ್ಟು ೨೫ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಜಿಲ್ಲೆಯ ೨೫ ಪರೀಕ್ಷಾ ಕೇಂದ್ರಗಳಲ್ಲಿ ೧೧೭೫೦ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ.
ನಗರದ ಸಿದ್ದಗಂಗಾ ಮಹಿಳಾ ಪ.ಪೂ. ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ ೮ ಗಂಟೆಯಿAದಲೇ ವಿದ್ಯಾರ್ಥಿಗಳು ಆಗಮಿಸಿ, ತಮ್ಮ ಪ್ರವೇಶ ಪತ್ರಗಳಲ್ಲಿದ್ದ ಕ್ಯೂ ಆರ್ ಕೋಡ್ ಮೂಲಕ ತಮ್ಮ ಮುಖ ಚಹರೆಯನ್ನು ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದ ದೃಶ್ಯಗಳು ಕಂಡು ಬಂದವು.
ಇAದು ಮತ್ತ ನಾಳೆ ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ ೧೦.೩೦ ರಿಂದ ೧೧.೫೦ ರವರೆಗೆ ಭೌತಶಾಸ್ತç, ಮಧ್ಯಾಹ್ನ ೧೨.೩೦ ರಿಂದ ೩.೫೦ರ ವರೆಗೆ ರಾಸಾಯನ ಶಾಸ್ತç ಪರೀಕ್ಷೆಗಳು ನಡೆದವು.
ನಾಳೆ ಬೆಳಿಗ್ಗೆ ೧೦.೩೦ ರಿಂದ ೧೧.೫೦ರ ವರೆಗೆ ಗಣಿತ, ಮಧ್ಯಾಹ್ನ ೧೨.೩೦ ರಿಂದ ೩.೫೦ ರ ವರೆಗೆ ಜೀವಶಾಸ್ತç ಪರೀಕ್ಷೆಗಳು ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಪರೀಕ್ಷೆಯಲ್ಲಿ ನಕಲು ತಡೆಯುವ ಸಲುವಾಗಿ ವಸ್ತç ಸಂಹಿತೆ ಜಾರಿಗೊಳಿಸಲಾಗಿದ್ದು, ತುಂಬು ತೋಳಿನ ಶರ್ಟ್, ಜೇಬುಗಳಿರುವ ಪ್ಯಾಂಟ್, ಶೂ, ಮೊಬೈಲ್, ಪೆನ್‌ಡ್ರೆöÊವ್ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಸಹ ಮಾಡಲಾಗಿದ್ದು, ಸಿಸಿ ಕ್ಯಾಮೆರಾಗಳ ಕಣ್ಗಾವಲು ಇರುವುದು ಕಂಡು ಬಂದಿತು.



