
ಕೊರಟಗೆರೆ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಕಳೆದರೂ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ, ೫ ಗ್ಯಾರಂಟಿ ಯೋಜನೆಯ ಅನುಷ್ಠಾನ ಮಾಡುವುದರಲ್ಲೆ ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರದಿಂದ ಅಭಿವೃದ್ದಿ ಶೂನ್ಯವಾಗುವುದರೊಂದಿಗೆ ದಿನಬಳಕೆಯ ಹಾಲಿ ನಿಂದ ಆಲ್ಕೋಹಾಲ್ ದಿನದಿಂದ ದಿನಕ್ಕೆ ಬೆಲೆ ಏರಿಕೆ ಮಾಡಿ ಸಾರ್ವಜನಿಕರ ಮೇಲೆ ಬರೆ ಎಳೆದಿದ್ದು
ಬೆಲೆ ಏರಿಕೆ ವಿರೋದಿಸಿ ಇಂದು ತುಮಕೂರಿನಲ್ಲಿ ಜನಾಕ್ರೋಶ ಯಾತ್ರೆ ನಡೆಯುತ್ತಿದ್ದು ಪಕ್ಷದ ಕಾರ್ಯಕರ್ತರೊಂದಿಗೆ ಸಾರ್ವ ಜನಿಕರು ಭಾಗವಹಿಸುವಂತೆ ಬಿಜೆಪಿ ಮುಖಂಡ ಹಾಗೂ ಐಎಎಸ್ ನಿವೃತ್ತ ಅಧಿಕಾರಿ ಅನಿಲ್ ಕುಮಾರ್ ತಿಳಿಸಿದರು.
ಅವರು ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರು ಆತಂಕ ಗೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯದ ಹರಿಕಾರರು ಎನ್ನುವ ಹೆಸರಿನಲ್ಲಿ ಅಧಿಕಾರ ಪಡೆದು ಬಡವರು, ದಲಿತರು, ಹಿಂದುಳಿದವರನ್ನು ಸಂಪೂರ್ಣ ಕಡೆಗಣಿಸಿದ್ದು ಕಾಂಗ್ರೆಸ್ ಸರ್ಕಾರದಿಂದ ಬಡಜನರು ಜೀವನ ನಿರ್ವಹಣೆ ಕಷ್ಟ ಸಾಧ್ಯವಾಗಿದೆ, ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸವಾಗಿಲ್ಲ ಹಾಗೂ ಜಾತಿ ಗಣತಿ ಅವೈಜ್ಞಾನಿಕವಾಗಿದ್ದು ಹಲವು ಜಾತಿಗಳ ವಿರೋಧವಿದ್ದರೂ ಅದರ ಬಗ್ಗೆ ಒಲವು ತೋರುತ್ತಿದ್ದಾರೆ ಎಂದ ಅವರು ಏ.೨೫ ರಂದು ತುಮಕೂರಿನಲ್ಲಿ ನಡೆಯುವ ಜನಾ ಕ್ರೋಶ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.
ಪ್ರತಿಕಾ ಗೋಷ್ಠಿಯಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಶಿವಕುಮಾರಸ್ವಾಮಿ, ದಾಡಿವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ಅರುಣ್‌ಕುಮಾರ್, ರಂಗರಾಜು, ಪ್ರವೀಣ್, ಚೇತನ್ ಕುಮಾರ್, ದಯಾನಂದ್, ನಾಗರಾಜು, ರಂಗರಾಜು, ಸಿದ್ದಗಂಗಪ್ಪ, ಮೋಹ ನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.



