BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮಾಜದಲ್ಲಿ ಸಮಾನತೆಯನ್ನು ಸಾಧಿಸಿದವರು ಬಸವಣ್ಣ
ತುಮಕೂರು

ಸಮಾಜದಲ್ಲಿ ಸಮಾನತೆಯನ್ನು ಸಾಧಿಸಿದವರು ಬಸವಣ್ಣ

೮೮೯ನೇ ಬಸವೇಶ್ವರ ಜಯಂತಿಯಲ್ಲಿ ಎನ್.ಕೆ.ನಿಧಿಕುಮಾರ್ ಹೇಳಿಕೆ
By News Desk BenkiyabaleUpdated:May 01, 2025 12:43 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ೮೮೯ನೇ ಬಸವೇಶ್ವರ ಜಯಂತಿಯನ್ನು ನಗರದ ಅಮಾನಿಕೆರೆಯ ಪಾರ್ಕ್ನಲ್ಲಿ ಆಚರಿಸಲಾಯಿತು.
ಬಸವ ಜಯಂತಿ ಪ್ರಯುಕ್ತ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್‌ರವರು ಮಾತನಾಡುತ್ತಾ ೧೨ನೇ ಶತಮಾನದಲ್ಲಿ ವಚನ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಸಾಧಿಸಿದ, ದಾರ್ಶನಿಕ, ಸಾಂಸ್ಕೃತಿಕ ನಾಯಕ ವೀರ ಶರಣ ಜಗಜ್ಯೋತಿ ಬಸವಣ್ಣನವರ ಚಿಂತನೆಗಳು, ತತ್ವ ಆ ದರ್ಶಗಳು, ಇಂದಿಗೂ ಪ್ರಸ್ತುತ. ಸಾಮಾಜಿಕ ಸುಧಾರಣೆಗೆ ಅವರು ನೀಡಿರುವ ಕೊಡುಗೆಗಳು ಅಪಾರ, ಶಿವಶರಣರ ಒಗ್ಗೂಡುವಿಕೆಗೆ ರಚಿಸಿದ ಅನುಭವ ಮಂಟಪವು, ದೇಶದ ಸಂಸತ್ ಭವನ ನಿರ್ಮಾಣಕ್ಕೂ ಪ್ರೇರಣೆಯಾಗಿದೆ. ದಯೆ ಇಲ್ಲದ ಧರ್ಮ ಯಾವುದಯ್ಯ ಎಂದು ಪ್ರಶ್ನಿಸಿದ ಬಸವಣ್ಣನವರ ಅನೇಕ ವಚನಗಳು ಸಾಮಾಜಿಕ, ಧಾರ್ಮಿಕ ಕ್ರಾಂತಿಗೆ ಕಾರಣವಾಗಿದೆ.
ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಸ್ಥಾನ ಪಡೆದು ಸರ್ವ ಧರ್ಮದ ಸಮಾನತೆಯನ್ನು ಸಾರಿ, ಬಡ ಜನತೆಗೆ ವಚನ ಸಾಹಿತ್ಯವನ್ನು ಪರಿಚಯಿಸುವಲ್ಲಿ ಬಸವಣ್ಣನವರು ಮೊದಲಿಗರು. ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವಾರು ಅನಿಷ್ಠ ಪದ್ಧತಿಗಳನ್ನು ವಚನ ಸಾಹಿತ್ಯದ ಮೂಲಕ ಖಂಡಿಸಿ ಜನರಲ್ಲಿ ವೈಚಾರಿಕತೆ ಮತ್ತು ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿದರು. ಅಂತರ್ಜಾತಿ ವಿವಾಹ, ಸರಳ ಜೀವನ, ಕಾಯತತ್ವವನ್ನು ಪ್ರತಿಪಾದಿಸಿ ಸಮ ಸಮಾಜ ನಿರ್ಮಿಸಲು ಅಡಿಪಾಯ ಹಾಕಿದವರು ಬಸವಣ್ಣನವರು. ಅವರ ಸಾಮಾಜಿಕ ತತ್ವ ಆದರ್ಶಗಳು ಸಮಾನತೆಯ ಚಿಂತನೆಗಳು ಇಂದಿಗೂ ಪ್ರಸ್ತುತ ಜೀವನದ ಪಾಠವೂ ಹೌದು ಎಂದರು.
ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆಸ್ತೂರು ನರಸಿಂಹಮೂರ್ತಿರವರು ಮಾತನಾಡುತ್ತಾ ಅಂದಿನ ಕಾಲದಲ್ಲಿ ನಮ್ಮ ದೇಶದಲ್ಲಿ ಅಸ್ತಿತ್ವದಲ್ಲಿದ್ದ ಅಸ್ಪೃಶ್ಯತೆಯೆಂಬ ಮೌಢ್ಯವನ್ನು ತೊರೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಹಲವಾರು ವಚನಗಳನ್ನು ರಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ, ಇಂದಿಗೂ ಬಸವಣ್ಣನವರ ವಚನಗಳು ಪ್ರತಿಯೊಂದು ಕಾಲಘಟ್ಟಕ್ಕೂ ಅನ್ವಯಿಸುತ್ತಿವೆ ಎಂದರೇ ಅವರ ವಚನಾಮೃತದಲ್ಲಿನ ಮಹತ್ವ ಎಂತಹದ್ದು ಎಂದು ಪ್ರತಿಯೊಬ್ಬರು ಅರಿಯಬೇಕಾಗಿದೆಂದರು. ಬಸವಣ್ಣನವರನ್ನು ಇಂದು ನಾವು ಪೂಜನೀಯ ಮಹತ್ವವನ್ನು ನೀಡಿರುವುದಲ್ಲದೇ, ಅವರ ವಚನದಲ್ಲಿನ ಸಾರವನ್ನು ನಮ್ಮ ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರದ ಕಡತಗಳಲ್ಲಿ ಅಂದರೆ ಸರ್ಕಾರ ಹೊರಡಿಸುವ ಆದೇಶ, ಸುತ್ತೋಲೆ ಸೇರಿದಂತೆ ರಾಜ್ಯಾಂಗದ ಕಾರ್ಯಕಾಲಪಗಳಲ್ಲಿಯೂ ಸಹ ಉಲ್ಲೇಖವಾಗುತ್ತಿರುವುದು ಇಂದಿಗೂ ಶ್ಲಾಘನೀಯ ಸಂಗತಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಲಕ್ಷಿö್ಮÃನಾರಾಯಣ ಎಸ್, ಜಿಲ್ಲಾ ಗೌರವಾಧ್ಯಕ್ಷರಾದ ರಾಜಣ್ಣ ಗೂಳೂರು, ಜಿಲ್ಲಾ ಅಟ್ರಾಸಿಟಿ ಕಮಿಟಿ ಸದಸ್ಯರಾದ ಗೋವಿಂದರಾಜು, ಅಲ್ಪ ಸಂಖ್ಯಾತರ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷರಾದ ಅಜೀಜ್, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾದ ವೈ.ಎಸ್.ಕಿರಣ್ ಕುಮಾರ್, ನಗರಾಧ್ಯಕ್ಷರಾದ ಟಿ.ಎಲ್.ಮನು, ಭಾಷಾ, ಜಬಿನೇಷನ್, ಜಗದೀಶ್ (ಟೈಲರ್), ಹನುಮನರಸಯ್ಯ, ವಿಜಯ್ ಕುಮಾರ್, ರವಿಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಗುರುವನ್ನು ಆದರ್ಶವಾಗಿಟ್ಟುಕೊಂಡಾಗ ಯಶಸ್ಸು ಸಾಧ್ಯ
Next Article ಅದ್ದೂರಿಯಾಗಿ ನಡೆದ ಚನ್ನಬಸವೇಶ್ವರ ಸ್ವಾಮಿಯ ರಥೋತ್ಸವ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.