BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾ.ರಾಜ್ ನಡೆ ನುಡಿಯಲ್ಲಿ ನೈತಿಕತೆಯನ್ನು ಉಳಿಸಿಕೊಂಡವರು
ತುಮಕೂರು

ಡಾ.ರಾಜ್ ನಡೆ ನುಡಿಯಲ್ಲಿ ನೈತಿಕತೆಯನ್ನು ಉಳಿಸಿಕೊಂಡವರು

ಡಾ.ರಾಜರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಪ್ರಾಯ
By News Desk BenkiyabaleUpdated:May 05, 2025 2:35 pm

ತುಮಕೂರು: ಕಲಾವಿದರು, ಸಾಹಿತಿಗಳು ,ರಾಜಕಾರಣಿಗಳ ನುಡಿ, ನಡೆಗಳಲ್ಲಿ ನೈತಿಕತೆ ಕಾಣೆಯಾಗುತ್ತಿರುವ ಈ ಕಾಲದಲ್ಲಿ, ಡಾ.ರಾಜ್‌ಕುಮಾರ್ ತಾವು ಬದುಕಿರುವಷ್ಟು ಕಾಲವೂ ನುಡಿ, ನಡೆಯಲ್ಲಿ ನೈತಿಕತೆಯನ್ನು ಉಳಿಸಿಕೊಂಡು, ಜನರ ಅಭಿರುಚಿ ಕೆಡಿಸದೆ ಕಲಾಸೇವೆ ಮಾಡಿದ ಮಹಾನ್ ಕಲಾವಿದರು ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ನಗರದ ಕನ್ನಡ ಭವನದಲ್ಲಿ ಅಮರಜೋತಿ ಸಾಂಸ್ಕೃತಿಕ ಟ್ರಸ್ಟ್ ದಿಬ್ಬೂರು ಆಯೋಜಿಸಿದ್ದ ಡಾ.ರಾಜ್‌ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪತ್ರಕರ್ತರಾದ ಗಂಗಾಧರ ಮೊದಲಿಯಾರ್ ಮತ್ತು ಸಂಗೀತ ನಿರ್ದೇಶಕ ಐ.ಎಲ್.ರಂಗಸ್ವಾಮಯ್ಯ ಅವರಿಗೆ ೨೦೨೫ನೇ ಸಾಲಿನ ಡಾ.ರಾಜರತ್ನ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತಿದ್ದ ಅವರು,ಚಮ್ಮಾರನಿಂದ ಹಿಡಿದು, ಚಕ್ರವರ್ತಿಯವರೆಗೆ ಎಲ್ಲಾ ರೀತಿಯ ಪಾತ್ರಗಳನ್ನು ಮಾಡುವ ಮೂಲಕ ಎಲ್ಲಾ ವರ್ಗದ ಜನರನ್ನು ಪ್ರತಿನಿಧಿಸಿದ ಏಕೈಕ ಕಲಾವಿದ ಡಾ.ರಾಜ್ ಎಂದರು.
ಕನ್ನಡ ಕಲಾವಿದರಲ್ಲಿ ಜಾತಿ ಮೀರಿ ಕಲಿತವರು ಇದ್ದಾರೆ, ಕಲಿಸಿದವರು ಇದ್ದಾರೆ. ಇದೇ ನಿಜವಾದ ಅಂತಃಸತ್ವ.ಆದರೆ ರಾಜಕುಮಾರ್ ಎಂದಿಗೂ ತನ್ನ ತಾರಮೌಲ್ಯವನ್ನು ತಲೆಗೆ ಏರಿಸಿಕೊಳ್ಳದೆ ಅದನ್ನು ಪ್ರೇಕ್ಷಕರ ಹೃದಯಕ್ಕೆ ತಲುಪಿಸಿದವರು ಡಾ.ರಾಜ್‌ಕುಮಾರ್.ಹಾಗಾಗಿಯೇ ಅವರು ಚಲನಚಿತ್ರರಂಗದಲ್ಲಿ ಡಾ.ರಾಜಕುಮಾರ್ ಆಗಿದ್ದರೂ, ಪ್ರೇಕ್ಷಕರ ಪಾಲಿಗೆ ಮುತ್ತುರಾಜ್ ಆಗಿಯೇ ಉಳಿದರು.೧೯೬೮ಕ್ಕೆ ಡಾ.ರಾಜ್ ಕನ್ನಡ ಚಿತ್ರರಂಗ ಪ್ರವೇಶಿಸಿದ ನಂತರ ಚಲನಚಿತ್ರ ತಯಾರಿಕಾ ವೇಗ ಹೆಚ್ಚಳವಾಯಿತು.ಕನ್ನಡ ಚಲನಚಿತ್ರವನ್ನು ಏಕಾಂಗಿಯೇ ಹೆಗಲ ಮೇಲೆ ಹೊತ್ತು ಬೆಳೆಸಿದ ಕೀರ್ತಿ ಡಾ.ರಾಜಕುಮಾರ್ ಅವರಿಗೆ ಸಲ್ಲುತ್ತದೆ.ಜನರಿಗೆ ಕೆಟ್ಟ ಸಿನಿಮಾಗಳನ್ನು ನೀಡಿ ಮೋಸ ಮಾಡಲಿಲ್ಲ.ಜನರ ಸದಭಿರುಚಿಯನ್ನು ಬೆಳೆಸಿದವರು ಡಾ.ರಾಜ್, ಅವರ ಹೆಸರಿನಲ್ಲಿ ಡಾ.ರಾಜಕುಮಾರ್ ಅವರ ದ್ವನಿಯನ್ನೇ ಹೊಂದಿರುವ ದಿಬ್ಬೂರು ಮಂಜು ಅವರು ಅಮರಜೋತಿ ಸಾಂಸ್ಕೃತಿಕ ಟ್ರಸ್ಟ್ ಹೆಸರಿನಲ್ಲಿ ನೀಡಿರುವುದು ಸಂತೋಷದ ವಿಚಾರವಾಗಿದೆ ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ನುಡಿದರು.
ಡಾ.ರಾಜರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಗಂಗಾಧರ ಮೊದಲಿಯಾರ್ ಮಾತನಾಡಿ, ಕನ್ನಡ ಸಿನಿ ಪ್ರೇಕ್ಷಕರಿಂದ ಮರೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ಅಮರಜೋತಿ ಸಾಂಸ್ಕೃತಿಕ ಟ್ರಸ್ಟ್ ಡಾ.ರಾಜ್‌ರತ್ನ ಹೆಸರಿನಲ್ಲಿ ಪ್ರಶಸ್ತಿ ನೀಡುವ ಮೂಲಕ ಅವರನ್ನು ನೆನಪಿಸುವ ಕೆಲಸ ಮಾಡುತ್ತಿದೆ. ಇದೊಂದು ಒಳ್ಳೆಯ ಕೆಲಸ. ಈ ಪ್ರಶಸ್ತಿ ಮತ್ತಷ್ಟು ಅರ್ಹರಿಗೆ ತಲುಪವಂತಾಗಲಿ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಅಮರಜೋತಿ ಸಾಂಸ್ಕೃತಿಕ ಟ್ರಸ್ಟ್ನ ದಿಬ್ಬೂರು ಮಂಜು ಮಾತನಾಡಿ,ಡಾ.ರಾಜ್‌ಕುಮಾರ್ ಅವರ ಸಿನಿಮಾ ಹಾಡುಗಳನ್ನು ಕೇಳುತ್ತಾ ಬೆಳೆದ ನನಗೆ, ಅವರಂತೆಯೇ ಹಾಡಬೇಕೆಂಬ ಬಯಕೆ ಇತ್ತು. ಶಿಕ್ಷಣ ಹೈಸ್ಕೂಲ್ ಹಂತಕ್ಕೆ ಮೊಟಕುಗೊಂಡಾಗ,ಸಮಯ ಕಳೆಯಲು ಹಾಡುವುದನ್ನು ಕಲಿತು, ಅದನ್ನೇ ರೂಢಿಸಿಕೊಂಡೇ, ೨೦೦೪ ರಿಂದಲೂ ಹಾಡುಗಾರಿಕೆಯಿಂದ ಬಂದ ಹಣವನ್ನು ಕ್ರೂಢಿಕರಿಸಿ, ಡಾ.ರಾಜ್ ಹುಟ್ಟು ಹಬ್ಬದ ನೆನಪಿನಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸುವುದು, ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಾ ಬಂದಿದ್ದೇನೆ. ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಲಹೆಯಂತೆ ಕಳೆದ ಎರಡು ವರ್ಷಗಳಿಂದ ಡಾ.ರಾಜರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ರಂಗಭೂಮಿ, ಚಲನಚಿತ್ರ ರಂಗದಲ್ಲಿ ಕೆಲಸ ಮಾಡಿದವರನ್ನು ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಬಾ.ಹ.ರಮಾಕುಮಾರಿ, ಹಾರೋನ್ಮಿಯಂ ವಾದಕರಾದ ಬಿ.ಎಸ್.ಶ್ರೀನಿವಾಸಮೂರ್ತಿ,ತಬಲವಾದಕರಾದ ಎಂ.ಪಿ.ಪುಟ್ಟಶಾಮಯ್ಯ, ನಾಗಾರ್ಜುನ ಕಲಾ ಸಂಘದ ಸಂಸ್ಥಾಪಕರಾದ ಕೆ.ಸಿ.ನರಸಿಂಹಮೂರ್ತಿ,ಹಿರಿಯ ಗಾಯಕರಾದ ಎ.ಎನ್.ನಾರಾಯಣಪ್ರಸಾದ್,ಸಂಗೀತ ನಿರ್ದೇಶಕ ಸಂಗೀತ್ ಶ್ರೀನಿವಾಸ್,ಈಶ್ವರಿ ಮಹಿಳಾ ಸಮಾಜದ ಆಧ್ಯಕ್ಷರಾದ ಎಂ.ಆರ್.ರAಗಮ್ಮ, ಇವರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಚಲನಚಿತ್ರ ನಿರ್ಮಾಪಕ ಚಿಂದೋಡಿ ಬಂಗಾರೇಶ್,ಕಲಾಶ್ರೀ ಡಾ.ಲಕ್ಷö್ಮಣದಾಸ್,ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿದರು. ಅಮರಜೋತಿ ಸಾಂಸ್ಕೃತಿಕ ಟ್ರಸ್ಟ್ನ ದಿಬ್ಬೂರು ಮಂಜು ಮತ್ತಿತರರು ಉಪಸ್ತಿತರಿದ್ದರು.

 

(Visited 1 times, 1 visits today)
tumkur
Previous Articleಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ
Next Article ಸರಗಳತನ ಪ್ರಕರಣ: ಅಂತರ್ ಜಿಲ್ಲಾ ಆರೋಪಿ ಬಂಧನ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.