BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಳಪೆ ಪಂಪ್​ ಮೋಟರ್‌ಗಳನ್ನು ವಿತರಿಸಿದರೆ ಕ್ರಮ ಕೈಗೊಳ್ಳಲಾಗುವುದು
ತುಮಕೂರು

ಕಳಪೆ ಪಂಪ್​ ಮೋಟರ್‌ಗಳನ್ನು ವಿತರಿಸಿದರೆ ಕ್ರಮ ಕೈಗೊಳ್ಳಲಾಗುವುದು

ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಶಾಸಕ ಬಿ. ಸುರೇಶ್ ಗೌಡರು ಆಕ್ರೋಶ
By News Desk BenkiyabaleUpdated:May 05, 2025 2:46 pm

ತುಮಕೂರು: ಕೊಳವೆಬಾವಿ ಕೊರೆದು ವರ್ಷಗಳೇ ಕಳೆದರೂ ಪಂಪು ಮೋಟಾರ್ ವಿತರಣೆ ಮಾಡದೆ ವಿಳಂಬ ಧೋರಣೆ ಅನುಸರಿಸಿರುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ವಿರುದ್ಧ ಶಾಸಕ ಬಿ ಸುರೇಶ್ ಗೌಡರು ತೀವ್ರ ಆಕ್ರೋಶಗೊಂಡರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನೊಡುಕೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪು ಮೋಟಾರ್ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಲಿತರು ಎಂದರೆ ಈ ಸರ್ಕಾರಕ್ಕೆ ತಾತ್ಸಾರ ಮನೋಭಾವ ಇದೆ. ದಲಿತರ ಹಾಗೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯರವರು ದಲಿತರಿಗೆ ಮೀಸಲಾಗಿರುವ ಎಲ್ಲ ನಿಗಮಗಳಲ್ಲೂ ಕೂಡ ಅವ್ಯಾಹತವಾಗಿ ಹಗರಣಗಳು ನಡೆದಿವೆ ಬೋವಿ ನಿಗಮ ವಾಲ್ಮೀಕಿ ನಿಗಮ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ವ್ಯಾಪಕವಾದ ಭ್ರಷ್ಟಾಚಾರ ಇದೆ. ಮೋಸ ಮಾಡಲು ದಲಿತರೇ ಬೇಕೆ ದಲಿತೋದ್ಧಾರಕ ಎಂದು ಉದ್ಘಾರ ಮಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸದೆ ಇರುವುದು ನೋಡಿದರೆ ಅವರಿಗೆ ದಲಿತರ ಉದ್ಧಾರ ಆಗುವುದು ಬೇಕಿಲ್ಲ ಬಡವರು ಬಡವರಾಗಿರಬೇಕು ಎಂಬುದು ಕಾಂಗ್ರೆಸ್ ಪಕ್ಷದ ಧೋರಣೆಯಾಗಿದೆ ಎಂದು ಶಾಸಕ ಬಿ ಸುರೇಶ್ ಗೌಡ ತೀವ್ರ ತರಾಟೆಗೆ ತೆಗೆದುಕೊಂಡರು.
ರೈತರೇ ತಂದು ಹಾಕುವ ಮೋಟರ್ ಪಂಪ್​ಗಳು ವರ್ಷಗಳು ಕಳೆದರೂ ದುರಸ್ಥಿಗೆ ಬರುವುದಿಲ್ಲ. ಆದರೆ ನಿಗಮದ ಅಧಿಕಾರಿಗಳು ವಿತರಣೆ ಮಾಡುವ ಪಂಪು ಮೋಟರುಗಳು ಪದೇ ಪದೇ ರಿಪೇರಿಗೆ ಬರುತ್ತಿರುವುದು ಅನೇಕ ಬಾರಿ ನನ್ನ ಗಮನಕ್ಕೆ ಬಂದಿದೆ ಕಳಪೆ ಗುಣಮಟ್ಟದಿಂದ ಕೂಡಿರುವ ಪಂಪು ಮೋಟರ್ ಗಳ ವಿತರಣೆ ಮಾಡಿದ್ದಲ್ಲಿ ನಾನಂತೂ ಸುಮ್ಮನೆ ಕೂರುವುದಿಲ್ಲ ಖಂಡಿತ ಅಮಾನತ್ತಿಗೆ ಶಿಫಾರಸು ಮಾಡುತ್ತೇನೆ ಎಂದು ಶಾಸಕ ಬಿ.ಸುರೇಶ್ ಗೌಡರು ಎಚ್ಚರಿಕೆ ನೀಡಿದರು.
ಇದೇ ವೇಳೆ ರೈತರಿಂದ ಹಣ ಪಡೆದುಕೊಳ್ಳುತ್ತಿರುವ ಕೆಲವು ಅಧಿಕಾರಿಗಳ ವಿರುದ್ದ ಗರಂ ಆದರು. ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಯುವ ವೇಳೆ ಬೋರ್​ವೆಲ್ ಏಜೆಂಟ್ ರೈತರ ಬಳಿ ಹತ್ತು-ಇಪ್ಪತ್ತು ಸಾವಿರ ಹಣ ವಸೂಲಿ ಮಾಡುತ್ತಿದ್ದಾರೆಂದು ರೈತರು ಶಾಸಕರಿಗೆ ದೂರು ನೀಡಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ರೈತರ ಬಳಿ ಹಣ ವಸೂಲಿ ಮಾಡುವ ಬೋರ್​ವೆಲ್​ ಗುತ್ತಿಗೆದಾರರ ಪರವಾನಿಗೆ ರದ್ದು ಮಾಡಲು ಶಿಫಾರಸ್ಸು ಮಾಡುವಂತೆ ಸೂಚಿಸಿದರು.
ಗುಣಮಟ್ಟದ ಸಾಮಗ್ರಿಗಳನ್ನು ವಿತರಣೆ ಮಾಡುವಂತೆ ಎಚ್ಚರಿಕೆ ಕೊಟ್ಟರು.
ಹಳೆ ಸರಕಾರದ ಯೋಜನೆಗಳು ನನೆಗುದಿಗೆ ಬಿದ್ದು ಹೊಸ ಗ್ಯಾರಂಟಿಗಳು ಅನುಷ್ಠಾನವಾಗುತ್ತಿರುವ ಬೆನ್ನಲ್ಲೆ ರಾಜ್ಯ ಸರಕಾರದ ಮೂಲ ಸೌಕರ್ಯಗಳನ್ನು ಒದಗಿಸುವ ಯೋಜನೆಯಡಿ ರಾಜಕೀಯ ಹಸ್ತಕ್ಷೆಪ ಆಗುತ್ತಿದೆ ಎಂಬುದು ಬೆಳಕಿಗೆ ಬಂದಿದೆ.
ಬಿಜೆಪಿ ಸರಕಾರದ ಅವಧಿಯಲ್ಲಿ ಆದಿಜಾಂಬವ, ಡಾ. ಬಿ.ಆರ್. ಅಂಬೇಡ್ಕರ್, ಶ್ರೀ ವಾಲ್ಮಿಕಿ ನಿಗಮಗಳಲ್ಲಿ ಪ್ರತಿ ಕ್ಷೇತ್ರದಲ್ಲಿ ನೂರಾರು ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿಗಳ ಸೋಗಿನಲ್ಲಿರುವ ಈ ಸರ್ಕಾರ ಒಂದು ಕ್ಷೇತ್ರಕ್ಕೆ ಒಂದು ಎರಡು ಅಥವಾ ಮೂರು ಘಟಕಗಳನ್ನು ನೀಡುತ್ತಿರುವುದು ಬಹಳ ಶೋಚನಿಯ ಸ್ಥಿತಿ ಇದ್ದು ಬಡ ಕುಟುಂಬಗಳ ಬದುಕಿನ ಮೇಲೆ ಬರೆ ಎಳೆದಂತಾಗಿದ್ದು ಹಲವು ವರ್ಷಗಳಿಂದ ಕನಸು ಕಟ್ಟಿಕೊಂಡವರು ಆತಂಕಕ್ಕೆ ಸಿಲುಕುವಂತಾಗಿದೆ.
ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ
ಗಂಗಾ ಕಲ್ಯಾಣ, ನೇರ ಸಾಲ ಯೋಜನೆಗಳು
ಪರಿಶಿಷ್ಟ ಜಾತಿ, ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರ ಖುಷ್ಕಿ ಜಮೀನಿನಲ್ಲಿ ಕೊಳವೆ ಬಾವಿ ಕೊರೆದು ಪಂಪ್ ಮೋಟಾರ್ ಅಳವಡಿಸಿ, ವಿದ್ಯುದ್ದಿಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವ ಗಂಗಾ ಕಲ್ಯಾಣ ಯೋಜನೆ ಹಾಗೂ ನಿರುದ್ಯೋಗಿಗಳು ಕೈಗಾಡಿಗಳನ್ನು ಖರೀದಿಸಿ ಮತ್ತು ರೈತರಿಂದ ತರಕಾರಿ, ಹಣ್ಣುಗಳನ್ನು ಖರೀದಿ ಮಾಡಿ ತಳ್ಳುವ ಗಾಡಿ ಮೂಲಕ ಮಾರಾಟ ಮಾಡಿ ಸ್ವಯಂ ಉದ್ಯೋಗ ಕೈಗೊಂಡು ಆದಾಯ ಗಳಿಸಲು ಅವಶ್ಯವಿರುವ ಸಾಲ ಮತ್ತು ಸಹಾಯಧನವನ್ನು ನಿಗಮದಿಂದ ನೇರ ಸಾಲ ಮಂಜೂರು ಯೋಜನೆ, ಐಎಸ್‌ಬಿ ಯೋಜನೆಯಲ್ಲಿ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಘಟಕ ವೆಚ್ಚದ ಶೆ.೭೦ರಷ್ಟು ಅಥವಾ ಗರಿಷ್ಠ ರೂ. ೨ ಲಕ್ಷಗಳವರೆಗೆ ಸಹಾಯಧನ ಮಂಜೂರು ಮಾಡಿ ಬ್ಯಾಂಕ್ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸುವ ಯೋಜನೆ ಮತ್ತು ಉದ್ಯಮ ಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ (ಸರಕು/ಟ್ಯಾಕ್ಸಿ) ಯೋಜನೆಯಡಿ ೪ ಚಕ್ರದ ವಾಹನಗಳಿಗೆ ಘಟಕ ವೆಚ್ಚದ ಶೆ.೭೫ರಷ್ಟು ಅಥವಾ ಗರಿಷ್ಠ ರೂ.೪.೦೦ ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ ಬ್ಯಾಂಕ್ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವ ಯೋಜನೆಗಳು ಜಾರಿಯಲ್ಲಿದ್ದವು ಆದರೆ ಈಗಲೂ ಯೋಜನೆಗಳು ಜಾರಿಯಲ್ಲಿದ್ದರೂ ಕೂಡ ಫಲಾನುಭವಿಗಳ ಸಂಖ್ಯೆ ಗಣನೀಯ ಮಟ್ಟದಲ್ಲಿ ಕಡಿಮೆ ಆಗಿರೋದು ಸರ್ಕಾರದಲ್ಲಿ ಆರ್ಥಿಕ ಪರಿಸ್ಥಿತಿ ಬಹಳ ಕೆಟ್ಟದಾಗಿದೆ ಎನ್ನುವುದಕ್ಕೆ ಇದೊಂದು ತಾಜಾ ಉದಾಹರಣೆ ಎಂದು ಶಾಸಕ ಬಿ.ಸುರೇಶ್ ಗೌಡ ಹೇಳಿದರು.
ಬರುವಂಥ ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ದಲಿತರಿಗೆ ಹೆಚ್ಚು ಸೌಲಭ್ಯಗಳನ್ನು ಒದಗಿಸಿ ಕೊಡುವಂತೆ ಆಗ್ರಹಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಹೊಳಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಂಜಿನಪ್ಪ ಊರುಕೆರೆಯ ವಿಜಯ್ ಕುಮಾರ್ ಯಲ್ಲಾಪುರ ರಮೇಶ್, ಹಮೀದ್, ಹೊನ್ನುಡಿಕೆ ಕಿಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಮಕೃಷ್ಣ (ಅಪ್ಪಿ) ಶಿವರಾಜು ನಾಗವಲ್ಲಿ ಪಾಪಣ್ಣ ಸೇರಿದಂತೆ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು

(Visited 1 times, 1 visits today)
BJP Mla jyothiganesh tumkur
Previous Articleಮಕ್ಕಳು ಕಡ್ಡಾಯವಾಗಿ ವಿದ್ಯಾವಂತಗರಾಗಬೇಕು
Next Article ಜೀವ ತೆಗೆಯುತ್ತೇವೆ ಎಂದವರ ಮೇಲೆ ಅನುಕಂಪ ಬೇಡ: ಸಚಿವ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.