
ತುಮಕೂರು: ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ೪೦೦ ರಿಂದ ೫೦೦ ಜನ ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಮೂಲಕ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೧ ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಗುರಿಯನ್ನು ತಲುಪಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿAದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿಗಳೊAದಿಗೆ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯು ಮೊದಲ ಸ್ಥಾನ ಪಡೆದಿದೆ. ಈ ವರ್ಷವೂ ಮೊದಲ ಸ್ಥಾನವನ್ನು ಯಥಾರೀತಿ ಕಾಪಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಕಳೆದ ವರ್ಷ ಸುಮಾರು ೧೨೨ ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿದ್ದ ೩೬೬೦ ಶಾಲಾಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಾದ ಚರಂಡಿ, ರಸ್ತೆ, ಸ್ಮಶಾನ, ಕೆರೆಗಳ ಅಭಿವೃದ್ಧಿ; ನಾಲೆಗಳ ನಿರ್ಮಾಣ, ಗೋದಾಮು, ಸಂಜೀವಿನ ಭವನ, ಗ್ರಾಮ ಪಂಚಾಯತಿ ಕಟ್ಟಡ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಸೂಚಿಸಿದರು.
ಸಭೆಯಲ್ಲಿ ಉಪ ಕಾರ್ಯದರ್ಶಿಗಳಾದ ಕೆ.ಪಿ. ಸಂಜೀವಪ್ಪ ಹಾಗೂ ಹಾಲಸಿದ್ದಪ್ಪ ಪೂಜೇರಿ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ವಿವಿಧ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು(ಗ್ರಾಉ) ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
(Visited 1 times, 1 visits today)