ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ ೪ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪಾಲಿಕೆಯ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಆರೋಗ್ಯಾ ಧಿಕಾರಿ ಹಾಗೂ ಮತ್ತಿತರ ಅಧಿಕಾರಿಗಳ ತಂಡ ದೊಂದಿಗೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಅವರು ಸ್ವಚ್ಛತೆ, ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.
ಕ್ಯಾಂಟೀನ್‌ನಲ್ಲಿ ಸಾರ್ವಜನಿಕರೊಂದಿಗೆ ಆಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಹಾಗೂ ಶುಚಿ-ರುಚಿಯನ್ನು ಪರಿಶೀಲಿಸಿದರು. ಇತರೆ ಹೋಟೆಲ್‌ಗಳಿಗಿಂತ ಭಿನ್ನ ರೀತಿಯಲ್ಲಿ ಕಾಣಿಸುವಂತೆ ಇಂದಿರಾ ಕ್ಯಾಂಟೀನ್‌ಗಳನ್ನು ಸೌಂದರ್ಯೀಕರಣಗೊಳಿಸಲಾಗಿದೆ. ಪ್ರಸ್ತುತ ಇರುವ ೪ ಇಂದಿರಾ ಕ್ಯಾಂಟೀನ್‌ಗಳೊAದಿಗೆ ಶಿರಾಗೇಟ್ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ೨ ಹೊಸದಾಗಿ ಅನು ಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ. ಮುಂದಿನ ೨ ವಾರಗಳಲ್ಲಿ ಹೊಸ ಇಂದಿರಾ ಕ್ಯಾಂಟೀ ನ್‌ಗಳಲ್ಲಿ ಉತ್ತಮ ಗುಣಮಟ್ಟದ ಶುಚಿ-ರುಚಿಯಾದ ವಿತರಣೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿಗೆ ೫ ರೂ. ಹಾಗೂ ಊಟಕ್ಕೆ ೧೦ ರೂ.ಗಳ ದರ ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.
(Visited 1 times, 1 visits today)