ತುಮಕೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ ೨೦ರವರೆಗೆ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆ ಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾ ಮಿನಲ್ಲಿ ಈವರೆಗೆ ಶೇ.೧೩೪ರಷ್ಟು ಅಧಿಕ ಮಳೆಯಾಗಿದ್ದು, ಪ್ರವಾಹ/ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವ ಹಾನಿ ಯಾಗದಂತೆ ಮುಂಜಾಗ್ರತೆವಹಿಸಬೇಕು. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬ ಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡ ಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯು ವುದು, ಈಜಾಡುವುದು, ದನ-ಕರುಗಳನ್ನು ತೊಳೆ ಯುವುದು ಹಾಗೂ ಫೋಟೋ/ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರಬೇಕು. ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಸಬೇಕು. ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿ ಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: ೭೩೦೪೯೭೫೫೧೯ ಅಥವಾ ದೂರವಾಣಿ ಸಂಖ್ಯೆ: ೦೮೧೬-೨೨೧೩೪೦೦, ೧೫೫೩೦೪; ಬೆಸ್ಕಾಂ: ೧೯೧೨/ ೮೨೭೭೮೮೪೦೧೯(ತಿhಚಿಣsಚಿಠಿಠಿ)ನ್ನು ಸಂಪರ್ಕಿಸಬೇಕೆAದು ಮನವಿ ಮಾಡಿದ್ದಾರೆ.

(Visited 1 times, 1 visits today)