ಪಾವಗಡ: ಅಧಿಕಾರಿಗಳು ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರವರು ಅಧಿಕಾರಿಗಳಿಗೆ ಸೂಚಿಸಿದರು
ಕೇಂದ್ರ ವಲಯ ಮತ್ತು ಕೇಂದ್ರ ಪುರಸ್ಕೃತ ಕರ‍್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹಳ್ಳಿಗಾಡಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಮೊದಲೇ ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಮಾಡಬೇಕು, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸಬೇಕು,
ಅಧಿಕಾರಿಗಳು ಹೊಣೆಗಾರಿಕೆಯಿಂದ ತಪ್ಪಿಸಿಕೊಂಡು ಹೋಗಲು ತಾವು ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ,ಜನಪ್ರತಿನಿಧಿಗಳು ಒಗ್ಗೂಡಿ ಕಾರ್ಯನಿರ್ವಸಲು ಬದ್ಧ ರಾಗಿದ್ದೆವೆ. ಇಲಾಖೆವಾರು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ಅವುಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು
ಶಾಶ್ವತ ಬರಪೀಡಿತ ಪ್ರದೇಶವಾದ ಪಾವಗಡ ತಾಲ್ಲೂಕಿನ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಯೋಜ ನೆಯೊಂದನ್ನು ಹಾಕಿಕೊಂಡಿದ್ದೇನೆ ಅದರ ಜಾರಿಗೆ ಅಧಿಕಾರಿಗಳು ಸಹಕಾರ ನೀಡಬೇಕು, ಹಳ್ಳಿಗಾಡಿನ ಪ್ರದೇಶಗಳಲ್ಲಿ ಸಾರಿಗೆ ಬಸ್ ವ್ಯವಸ್ಥೆ ಇಲ್ಲ ಎಂಬ ಬಗ್ಗೆ ದೂರು ಬಂದಿ ದೆ, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು
ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ರವರಿಂದ ಮಾಹಿತಿ ಪಡೆದ ಸಂಸದರು ಗಡಿಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು, ಮುಂದಿನ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರಗತಿ ಯಾಗಬೇಕು ಎಂದು ತಿಳಿಸಿದರು
ಪಶು ಇಲಾಖೆಯ ಹೊರೆಕೇರಪ್ಪ ರವರಿಂದ ವರದಿ ಪಡೆದು, ಕೇಂದ್ರ ಸರ್ಕಾರದ ಎನ್.ಎಲ್.ಎಂ, ಯೋಜನೆಯಡಿ ಕುರಿ, ಹಸು ಸಾಕಾಣಿಕೆಗೆ ಸಹಾಯಧನ ನೀಡಲಾಗುವುದು ಈ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರ ಮಾಡಬೇಕು ಎಂದು ತಿಳಿಸಿದರು
ಮುಂದುವರೆದು ಮಾತನಾಡಿದ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಕೃಷಿ, ತೋಟಗಾರಿಕೆ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಬಕಾರಿ, ಲೋಕೋಪಯೋಗಿ, ಸಮಾ ಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಸಾರ್ವಜನಿಕ ರಿಗೆ, ಮಹಿಳೆಯರಿಗೆ, ರೈತರಿಗೆ, ತೊಂದರೆ ಮಾಡದಂತೆ, ಸರ್ಕಾರದ ಯೋಜನೆಗಳನ್ನು ತಲುಪಿಸಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ತಹಶೀಲ್ದಾರ್ ವರದರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ, ಇಂಜಿನಿಯರ್ ಬಸವಲಿಂಗಪ್ಪ,ರೇಷ್ಮೆ ಇಲಾ ಖೆಯ ಮುರುಳಿದರ, ಅರಣ್ಯ ಇಲಾಖೆಯ ರಾಕೇಶ್ ಸಿಂಗ್, ಪೋಲಿಸ್ ವೃತ್ತ ನಿರೀಕ್ಷಕ ಗಿರೀಶ್, ಅಕ್ಷರ ದಾಸೋಹ ಶಂಕರ್ ನಾಯ್ಕ, ಆಹಾರ ಇಲಾಖೆಯ ಸುಜಾತ, ಕಾರ್ಮಿಕ ಇಲಾಖೆಯ ಹರೀಶ್, ಕೈಗಾರಿಕೆ ಇಲಾಖೆಯ ಅಶೋಕ್, ಅಬಕಾರಿ ಇಲಾಖೆಯ ಮೈಕಲ್, ಭದ್ರಾ ಮೇಲ್ದಂಡೆ ಯೋಜನೆ ಯ ಮುರಳಿ, ಸಣ್ಣ ನೀರಾವರಿ ಇಲಾಖೆಯ ಚಿತ್ತಯ್ಯ ಸೋಲಾರ್ ನಿಗಮದ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

(Visited 1 times, 1 visits today)