
ತುಮಕೂರು: ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ೧೭ ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಸ್ವಾಭಾವಿಕವಾಗಿ ದೊರೆಯುವ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ.
ಸಸ್ಯಗಳಿಗೆ ಪ್ರಧಾನ ಪೋಷಕಾಂಶಗಳಾದ ಸಾರಜನಕ, ರಂಜಕ, ಪೋಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಲಘು ಪೋಷಕಾಂಶಗಳಾದ ಕಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗಿರುತ್ತದೆ.
ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಎಲ್ಲಾ ಪೋಷಕಾಂಶಗಳು ಬೇಕಾದ ಪ್ರಮಾಣದಲ್ಲಿ ಬೆಳೆಗಳಿಗೆ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವರ‍್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕು. ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು, ಅವುಗಳ ಬಳಕೆ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಬೇಕೆಂದು ಕೃಷಿ ಇಲಾಖೆ ಸಲಹೆ ನೀಡಿದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿಯನ್ನು
ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರ ಇರುತ್ತದೆ. ಆದರೆ ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಶ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಶ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.
ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ: ರಂಜಕ: ಪೊಟ್ಯಾಶ್ ರಸಗೊಬ್ಬರಗಳನ್ನು ೪:೨:೧ರ ಅನುಪಾತದಲ್ಲಿ ಬಳಸಬೇಕು. ಆದರೆ ಇತ್ತೀಚಿನ ರ‍್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ ೫:೩:೧ ಆಗಿರುತ್ತದೆ. ಆದ್ದರಿಂದ ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಶ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿದೆ.
ಅಲ್ಲದೆ ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ ರಸಗೊಬ್ಬರಕ್ಕೆ ರ‍್ಯಾಯವಾಗಿ ಗಂಧಕ ಒದಗಿಸುವ ೨೦:೨೦:೦:೧೩ ಹಾಗೂ ಪೋಟ್ಯಾಶ್ ಒದಗಿಸುವ ಇತರೆ ថ្ម ថថថថ ೧೫:೧೫:೧೫, ೧೦:೨೬:೨೬, ೧೨:೩೨:೧೬, ೨೨:೨೨:೧೧, ೧೪:೩೫:೧೪, ೧೭:೧೭:೧೭, ೧೪:೨೮:೧೪, ೧೯:೧೯:೧೯, ೨೦:೧೦:೧೦ನ್ನು ಸಹ ಬಳಸಬಹುದಾಗಿದೆ ಎಂದು ಕೃಷಿ ಇಲಾಖೆ ಸಲಹೆ ನೀಡಿದೆ.
(Visited 1 times, 1 visits today)