ತುಮಕೂರು: ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ‘ದುಡಿಯೋಣ ಬಾ ಅಭಿಯಾನ’ದ ಮೂಲಕ ಸ್ಥಳೀಯವಾಗಿ ಕೆಲಸ ನೀಡಲಾಗುವುದು. ಗ್ರಾಮೀಣ ಜನರು ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹರ್ಷ ಕುಮಾರ್ ಕೆ. ಹೇಳಿದರು.
ತಾಲ್ಲೂಕಿನ ಹರಳೂರು ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ನರೇಗಾ ಯೋಜನೆಯಡಿ ‘ದುಡಿಯೋಣ ಬಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಡ ಕುಟುಂಬಗಳನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು, ಸ್ಥಳೀಯರಿಗೆ ಉದ್ಯೋಗ ನೀಡುವ ಮೂಲಕ ಸ್ವಾವಲಂಬಿ ಬದುಕು ಸಾಗಿಸುವಂತೆ ಮಾಡುವುದು, ಗ್ರಾಮೀಣ ಭಾಗದಲ್ಲಿ ವಲಸೆ ತಪ್ಪಿಸಿ ಕೂಲಿಕಾ ರರಿಗೆ ಕೆಲಸ ಒದಗಿಸುವುದು ನರೇಗಾ ಯೋಜ ನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ದುಡಿಯೋಣ ಬಾ ಅಭಿಯಾನವನ್ನು ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಸರ್ಕಾರದ ಯೋಜನೆ ಯಶಸ್ವಿಯಾಗಲಿದೆ. ಈ ನಿಟ್ಟಿನಲ್ಲಿ ವೈಯಕ್ತಿಕ ಅಥವಾ ಸಾಮೂಹಿಕ ಕೂಲಿಯನ್ನು ಸೃಷ್ಟಿಸಲು ದುಡಿಯೋಣ ಬಾ ಅಭಿಯಾನ ಸಹಕಾರಿಯಾಗಿದೆ. ಹರಳೂರು ಗ್ರಾಮದ ರೈತರಿಗೆ ಉದ್ಯೋಗ ಖಾತರಿ ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ಹಂಚುವ ಮೂಲಕ ಕೂಲಿ ಆಧಾರಿತ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ನಂತರ ರೈತರ ಮನೆ-ಮನೆಗೆ ಭೇಟಿ ನೀಡಿ, ಕೂಲಿ ಆಧಾರಿತ ಕಾಮಗಾರಿಗಳಿಗೆ ಕಾರ್ಯಾದೇಶವನ್ನು ವಿತರಿಸಿದರು.
ಈ ವೇಳೆ ಸಹಾಯಕ ನಿರ್ದೇಶಕರು (ಗ್ರಾ.ಉ), ಗ್ರಾಮ ಪಂಚಾಯಿತಿ ಪಿಡಿಒ, ತಾಂತ್ರಿಕ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

(Visited 1 times, 1 visits today)