ತುಮಕೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ ೨೧ರಂದು ೧೧ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಡಿ ಶಾಲಾ-ಕಾಲೇಜು, ವಸತಿ ನಿಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ|| ಸಿ. ಗಂಗಾಧರ್ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಯೋಗ ದಿನಾಚರಣೆ ಕಾರ್ಯಕ್ರಮವು ಸಾರ್ವಜನಿಕ ಕಾರ್ಯಕ್ರಮವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಬೇಕು. ಯೋಗ ದಿನಾಚರಣೆ ಕಾರ್ಯಕ್ರಮದ ಯಶಸ್ವಿಗೆ ಯೋಗ ತರಬೇತಿ ಸಂಸ್ಥೆ, ವಿವಿಧ ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ತಿಳಿಸಿದರು.
ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ ೨೧ರ ಬೆಳಿಗ್ಗೆ ೬.೩೦ ರಿಂದ ೮ ಗಂಟೆಯವರೆಗೆ ಆಯೋಜಿಸಬೇಕು. ಕಾರ್ಯಕ್ರಮಕ್ಕೆ ಅವಶ್ಯವಿರುವ ಗ್ರೀನ್ ಮ್ಯಾಟ್, ವೇದಿಕೆ, ಧ್ವನಿವರ್ಧಕ ವ್ಯವಸ್ಥೆ ಮಾಡಬೇಕು. ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬ್ಯಾರಿಕೇಟ್‌ಗಳನ್ನು ಅಳವಡಿಸಬೇಕು. ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್ಸ್ ವ್ಯವಸ್ಥೆಯೊಂದಿಗೆ ವೈದ್ಯರನ್ನು ನಿಯೋಜಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಬಿ. ಪರಮೇಶ್ವರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)