
ತುಮಕೂರು: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨ ಮೇ ೨೬ ರಿಂದ ಜೂನ್ ೨ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪ ದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ೩೫ ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಿರುವ ಹಾಗೂ ಎಲ್ಲಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಪರೀಕ್ಷೆಗೆ ನೋಂದಾಯಿಸಿಕೊAಡಿರುವ ೧೧೯೫೧ ಮಕ್ಕಳಿಗೆ ಸುಗಮವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಡಿಡಿಪಿಐ ಮನಮೋಹನ ಮಾತನಾಡಿ, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ೨೨ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ೭೪೨೯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾ ಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಮಧುಗಿರಿ ಡಿಡಿಪಿಐ ಗಿರಿಜಾ ಸಭೆಗೆ ಮಾಹಿತಿ ನೀಡುತ್ತಾ, ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ೧೩ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ೪೫೨೨ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾ ಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಮಾರ್ಗಗಳನ್ನು ರಚಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಹಾಗೂ ಪರೀಕ್ಷಾ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ ಡಿಡಿಪಿಐಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಜಿಲ್ಲಾ ಖಜಾನೆ ಉಪನಿರ್ದೇಶಕ ಉಮಾ, ವಿವಿಧ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾ ಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು/ಹೆಚ್ಚುವರಿ ಮುಖ್ಯ ಅಧೀಕ್ಷಕರು, ಮೇಲ್ವಿಚಾರಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.





