BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗೃಹ ಸಚಿವ ಪರಮೇಶ್ವರ ಅವರಿಂದ ಬುಗುಡನಹಳ್ಳಿ ಕೆರೆ ವೀಕ್ಷಣೆ
ತುಮಕೂರು

ಗೃಹ ಸಚಿವ ಪರಮೇಶ್ವರ ಅವರಿಂದ ಬುಗುಡನಹಳ್ಳಿ ಕೆರೆ ವೀಕ್ಷಣೆ

By News Desk BenkiyabaleUpdated:May 27, 2025 3:18 pm

ತುಮಕೂರು: ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ ೮ ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು.
ತುಮಕೂರು ನಗರದ ಬುಗುಡನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿದ ನಂತರ ನಗರದ ಎಂ.ಜಿ.ಸ್ಟೇಡಿಯAನಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಗೊರೂರು ಜಲಾಶಯದಿಂದ ಹೇಮಾವತಿ ನಾಲೆಗೆ ಮೇ ೨೩ರಂದು ನೀರು ಹರಿಯಬಿಟ್ಟಿದ್ದು, ಮೇ ೨೫ರ ರಾತ್ರಿ ಬುಗಡನಹಳ್ಳಿ ಕೆರೆಗೆ ನೀರು ತಲುಪಿದೆ ಎಂದು ತಿಳಿಸಿದ ಅವರು ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆAಬ ಉದ್ದೇಶದಿಂದ ಹಾಸನದಲ್ಲಿ ಇತ್ತೀಚೆಗೆ ಜರುಗಿದ ನೀರಾವರಿ ಸಮಿತಿ ನಿರ್ಣಯದಂತೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಮಕೂರಿಗೆ ಗೊರೂರು ಜಲಾಶಯದಿಂದ ನೀರು ಹರಿಸಲಾಗಿದೆ. ಮುಂದಿನ ೫೦ ದಿನಗಳಿಗೆ ಮಾತ್ರ ಪೂರೈಕೆ ಮಾಡುವಷ್ಟು ಕೆರೆಯಲ್ಲಿ ನೀರು ಲಭ್ಯವಿತ್ತು. ಮುಂದಾಲೋಚನೆಯಿAದ ಕೆರೆಗೆ ನೀರು ಹರಿಸಲಾಗಿದೆ ಎಂದು ತಿಳಿಸಿದರು.
ಹೇಮಾವತಿ ನೀರನ್ನು ಬುಗುಡನಹಳ್ಳಿ ಕೆರೆಯಲ್ಲಿ ಸಂಗ್ರಹಿಸಿ ಶುದ್ಧೀಕರಿಸಿ ನಾಗರಿಕರಿಗೆ ಪೂರೈಕೆ ಮಾಡಲಾಗುವುದು. ಹೇಮಾವತಿ ಜಲಾಶಯದಿಂದ ಪ್ರತೀ ದಿನ ೨ ಟಿಎಂಸಿ ನೀರನ್ನು ಹರಿಸಲು ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ ೮ ದಿನಗಳಲ್ಲಿ ಕೆರೆ ಭರ್ತಿಯಾಗಲಿದ್ದು, ಕೆರೆ ಭರ್ತಿಯಾದ ನಂತರ ಹೆಬ್ಬಾಕ, ನರಸಾಪುರ, ಅಮಾನಿಕೆರೆಗೆ ನೀರನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು. ಪ್ರಸಕ್ತ ವರ್ಷ ಅವಧಿಗೂ ಮುನ್ನವೇ ಮಳೆಗಾಲ ಪ್ರಾರಂಭವಾಗಿರುವುದರಿAದ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದು ಎಂದು ಹೇಳಿದರು.
ಪ್ರಸಕ್ತ ವರ್ಷ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಜಿಲ್ಲಾಡಳಿತದಿಂದ ಈಗಾಗಲೇ ಸಭೆಗಳನ್ನು ನಡೆಸಿ ನೀಲನಕ್ಷೆಯನ್ನು ಸಿದ್ಧಪಡಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕೇಂದ್ರ ಸ್ಥಾನದಲ್ಲಿ ೩೫ ಲಕ್ಷ ರೂ.ಗಳ ವೆಚ್ಚದಲ್ಲಿ ಅಲಂಕಾರಿಕ ಮೀನುಗಳ ಪ್ರದರ್ಶನಕ್ಕಾಗಿ ಮತ್ಸಾö್ಯಲಯವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ವಿಶೇಷವಾಗಿ ಶಾಲಾ ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಮತ್ಸಾö್ಯಲಯವನ್ನು ನಿರ್ಮಿಸಲಾಗುತ್ತಿದೆ. ವಿವಿಧ ಜಾತಿಯ ಮೀನುಗಳ ಪರಿಚಯ, ಅಧ್ಯಯನಕ್ಕಾಗಿ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲಿದೆ. ಸದ್ಯದಲ್ಲಿಯೇ ಈ ಮತ್ಸಾö್ಯಲಯವನ್ನು ಉದ್ಘಾಟಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ನಗರದ ಹೊರವಲಯದಲ್ಲಿರುವ ನರಸಾಪುರ ಗೇಟ್‌ನಿಂದ ಬುಗುಡನಹಳ್ಳಿ ಜಲಸಂಗ್ರಹಾಗಾರದವರೆಗೂ ಕಾಲ್ನಡಿಗೆಯಲ್ಲಿ ಸಾಗಿ ಹೇಮಾವತಿ ನಾಲೆ ನೀರು ಹರಿಯುವಿಕೆಯನ್ನು ಸಚಿವರು ಪರಿವೀಕ್ಷಿಸಿದರು. ಬುಗುಡನಹಳ್ಳಿ ಕೆರೆಯಲ್ಲಿ ಬೆಳೆದಿರುವ ಜಾಲಿಗಿಡ, ಜಂಗಲ್, ಗಿಡ-ಗಂಟೆಗಳನ್ನು ಕೂಡಲೇ ತೆರವುಗೊಳಿಸಲು ಕ್ರಮಕೈಗೊಳ್ಳಬೇಕು. ಕೆರೆಗೆ ಯಾವುದೇ ಕಲುಷಿತ ನೀರು ಸೇರದಂತೆ ಎಚ್ಚರಿಕೆವಹಿಸಬೇಕು ಎಂದು ಪಾಲಿಕೆ ಆಯುಕ್ತ ಅಶ್ವಿಜ ಅವರಿಗೆ ನಿರ್ದೇಶನ ನೀಡಿದರು.
ನರಸಾಪುರ ಗೇಟ್‌ನಿಂದ ಜಲಸಂಗ್ರಹಾಗಾರಕ್ಕೆ ಸೇರುವ ರಸ್ತೆಯನ್ನು ಅಗಲೀಕರಣಗೊಳಿಸಬೇಕು. ಕೆರೆ ಏರಿ ಮೇಲೆ ತಿರುಗಾಡಲು ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯ ಗ್ರಾಮಸ್ಥರು ಸಚಿವರಿಗೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಗೊರೂರು ಜಲಾಶಯದಿಂದ ಮೇ ೨೩ ರಿಂದ ಹೇಮಾವತಿ ನಾಲೆಗೆ ನೀರು ಹರಿಸಲಾಗಿದ್ದು, ಮೇ ೨೫ ರಾತ್ರಿ ೧೧.೧೫ ಗಂಟೆಗೆ ತುಮಕೂರಿಗೆ ನೀರು ತಲುಪಿದೆ. ಸಂಗ್ರಹವಾದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲಾಗುವುದು ಎಂದು ತಿಳಿಸಿದರು.
ಸಚಿವರು ನಂತರ ಜಿಲ್ಲಾ ಪಂಚಾಯತಿ ಹಾಗೂ ಮೀನುಗಾರಿಕೆ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಕ್ರೀಡಾಂಗಣದ ಬಳಿ ನವೀಕರಿಸುತ್ತಿರುವ ಮತ್ಸಾö್ಯಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮತ್ಸಾö್ಯಲಯದೊಂದಿಗೆ ಪರಿಸರ ಹಾಗೂ ಜಿಲ್ಲೆಯ ಜೀವ ವೈವಿಧ್ಯತೆಯ ಬಗ್ಗೆ ಮಾಹಿತಿ ತಿಳಿಸುವ ಸಲುವಾಗಿ ಸಾಕ್ಷö್ಯಚಿತ್ರ ಪ್ರದರ್ಶನ ಮಾಡಲು ಮಕ್ಕಳಿಗಾಗಿ ಮಿನಿ ಥಿಯೇಟರ್ ಅನ್ನು ನಿರ್ಮಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಜಿ. ಪ್ರಭು ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಜಿ. ಪ್ರಭು ಮಾತನಾಡಿ ಸುಮಾರು ೧೦೦ ಮಕ್ಕಳು ಕುಳಿತು ಸಾಕ್ಷö್ಯಚಿತ್ರ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ತುಮಕೂರಿನ ಪ್ರಮುಖ ಆಕರ್ಷಣೆ ಇದಾಗಲಿದೆ. ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸದೆ ಮುಚ್ಚಲಾಗಿದ್ದ ಮತ್ಸಾö್ಯಲಯಕ್ಕೆ ಮರುಜೀವ ನೀಡಲಾಗುತ್ತಿದೆ. ಮುಂದಿನ ೧೦ ದಿನಗಳೊಳಗಾಗಿ ನವೀಕರಣ ಕಾರ್ಯವನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು. ಈ ಮತ್ಸಾö್ಯಲಯದಲ್ಲಿ ವಿವಿಧ ೩೬ ಜಾತಿಯ ಅಲಂಕಾರಿಕ ಮೀನುಗಳ ಅಕ್ವೇರಿಯಂಗಳನ್ನು ಅಳವಡಿಸಲಾಗಿದೆ. ಕೋಯಿಕಾರ್ಪ್, ಗೋಲ್ಡ್ ಫಿಶ್, ಅರೋಹನ, ಫ್ಲವರ್‌ಆರ್ಮ್, ಪ್ಯಾರಲ್ಸ್ ಸೇರಿದಂತೆ ಹಲವಾರು ಜಾತಿಯ ಮೀನುಗಳನ್ನು ಪ್ರದರ್ಶನಕ್ಕಿಡಲಾಗುವುದು ಎಂದು ಸಚಿವರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಹೇಮಾವತಿ ನಾಲಾ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸಿ. ಸಂಪತ್ ಕುಮಾರ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಎ.ಸಿ. ಶಿವಶಂಕರ್, ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ: ಗಿರೀಶ್ ಬಾಬುರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಹಿರೇಮಠದಲ್ಲಿ ಮಲ್ಲಿಕಾರ್ಜುನಸ್ವಾಮಿ ಪುನ: ಪ್ರತಿಷ್ಠಾಪನೆ
Next Article ಮಳೆ ಹಾನಿ ಪರಿಹಾರ: ಕ್ರಮಕ್ಕೆ ಸೂಚನೆ
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.