BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೂತನ ಮೆನು: ಪಾಲಿಕೆ ಆಯುಕ್ತೆ
ತುಮಕೂರು

ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ನೂತನ ಮೆನು: ಪಾಲಿಕೆ ಆಯುಕ್ತೆ

By News Desk BenkiyabaleUpdated:May 28, 2025 3:36 pm
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರಸ್ತುತ ನೂತನವಾಗಿ ಮೆನು ಸಿದ್ಧಪಡಿಸಲಾಗಿದ್ದು, ಈ ಮೆನುವಿನಂತೆ ಬೆಳಗಿನ ಉಪಹಾರದಲ್ಲಿ ರೈಸ್‌ಬಾತ್, ಚಿತ್ರಾನ್ನ, ಉಪ್ಪಿಟ್ಟು, ಕೇಸರಿಬಾತ್, ಇಡ್ಲಿ-ಸಾಂಬಾರ್-ಚಟ್ನಿ; ಮಧ್ಯಾಹ್ನದ ಊಟಕ್ಕೆ ಮುದ್ದೆ, ಅನ್ನ, ಸಾಂಬಾರ್, ಮೊಸರನ್ನ, ಚಪಾತಿ ಹಾಗೂ ರಾತ್ರಿ ಊಟಕ್ಕೆ ರೈಸ್‌ಬಾತ್ ಮತ್ತು ಮೊಸರನ್ನ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ೪ ಇಂದಿರಾ ಕ್ಯಾಂಟೀನ್‌ಗಳೊAದಿಗೆ ಹೊಸದಾಗಿ ತುಮಕೂರು ಜಿಲ್ಲಾಸ್ಪತ್ರೆ ಮತ್ತು ಎಪಿಎಂಸಿ ಮಾರುಕಟ್ಟೆ ಬಳಿ ೨ ಇಂದಿರಾ ಕ್ಯಾಂಟೀನ್‌ಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ರೋಗಿಗಳು ಹಾಗೂ ಮಾರುಕಟ್ಟೆಗೆ ಆಗಮಿಸುವ ರೈತರು, ಗ್ರಾಹಕರು ಹಾಗೂ ವರ್ತಕರ ಅನುಕೂಲಕ್ಕಾಗಿ ಹೊಸದಾಗಿ ೨ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲಾಗಿದ್ದು,   ಮೇ ೧೭ರಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಉದ್ಘಾಟಿಸಿದ್ದಾರೆ.
ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಂದಾಗಿ ಬಡಜನರು ಅವರ ಸಮತೋಲಿತ ಹಾಗೂ ಪೌಷ್ಠಿಕ ಆಹಾರದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರವು ರಾಜ್ಯದ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟಿನ್ ಅನ್ನು ಪ್ರಾರಂಭಿಸಿ ೫ ರೂ.ಗಳಿಗೆ ಬೆಳಗಿನ ಉಪಹಾರ ಹಾಗೂ ೧೦ ರೂ.ಗಳಿಗೆ ಮಧ್ಯಾಹ್ನ ಮತ್ತು ಸಂಜೆಯ ಊಟಗಳನ್ನು ಒದಗಿಸುತ್ತಿದೆ.
ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳು ಸುಸಜ್ಜಿತ ಮತ್ತು ಆಧುನಿಕವಾದ ಮಾಸ್ಟರ್ ಕಿಚನ್ ಅನ್ನು ಒಳಗೊಂಡಿವೆ. ಪ್ರತಿ ಕ್ಯಾಂಟೀನ್‌ಗಳಲ್ಲಿ ಶುದ್ಧ ಹಾಗೂ ಆರೋಗ್ಯಕರ ಕುಡಿಯುವ ನೀರನ್ನು ಸರಬರಾಜು ಮಾಡಲು ಆರ್.ಓ ಪ್ಲಾಂಟ್‌ನ್ನು ಅಳವಡಿಸಲಾಗಿದೆ.
ನಗರ ಸೇರಿದಂತೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಭಾಗದಿಂದ ನಗರಕ್ಕೆ ಆಗಮಿಸುವ  ಬಡಜನರು, ಅಸಂಘಟಿತ ವಲಯದ ಕಾರ್ಮಿಕರು, ವಿದ್ಯಾರ್ಥಿಗಳು, ಕಟ್ಟಡ ಕಾರ್ಮಿಕರು ಇಂದಿರಾ ಕ್ಯಾಂಟೀನಿನ ಪ್ರಯೋಜನ ಪಡೆಯುತ್ತಿದ್ದಾರೆ.
ಸಾರ್ವಜನಿಕರನ್ನು ಆಕರ್ಷಿಸಲು ನಗರದ ಇತರೆ ಖಾಸಗಿ ಹೋಟೆಲ್‌ಗಳಿಗಿಂತ ವಿಭಿನ್ನ ರೀತಿಯಲ್ಲಿ ಕ್ಯಾಂಟೀನುಗಳನ್ನು ಹೂಗುಚ್ಛ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿ ವಿಶಿಷ್ಟ ಮತ್ತು ಮಾದರಿಯಾಗಿ ನಿರ್ವಹಿಸಲಾಗುತ್ತಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಂಡು ಇಂದಿರಾ ಕ್ಯಾಂಟೀನಿನ ಲಾಭ ಪಡೆಯಬೇಕು. ಊಟದ ರುಚಿ ಹಾಗೂ ಶುಚಿತ್ವದಲ್ಲಿ ಕೊರತೆಗಳಿದ್ದಲ್ಲಿ ನೇರವಾಗಿ ಪಾಲಿಕೆಗೆ ದೂರು ನೀಡಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ.
ಸಾರ್ವಜನಿಕರ ಅಭಿಪ್ರಾಯ
ಹೊಸದಾಗಿ ಆರಂಭಿಸಲಾದ ಜಿಲ್ಲಾಸ್ಪತ್ರೆ ಆವರಣ ಮತ್ತು ಎಪಿಎಂಸಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್‌ಗಳ ಲಾಭ ಪಡೆಯುತ್ತಿರುವ ಸಾರ್ವಜನಿಕರನ್ನು ಮಾತನಾಡಿಸಿದಾಗ ಉತ್ತಮವಾದ ರುಚಿಯಾದ ಆಹಾರವನ್ನು ಕಡಿಮೆ ಬೆಲೆಯಲ್ಲಿ ವಿತರಿಸುತ್ತಿರುವುದರಿಂದ ಗ್ರಾಮೀಣ ಭಾಗದಿಂದ ಆಗಮಿಸುತ್ತಿರುವ ನಮ್ಮಂತಹವರಿಗೆ ಅನುಕೂಲವಾಗಿದೆ ಎಂದು ಖುಷಿಯಿಂದ ಹೇಳುತ್ತಾರೆ ಎಂದು ಅಶ್ವಿಜ ಅವರು ತಿಳಿಸಿದ್ದಾರೆ.
(Visited 1 times, 1 visits today)
tumkur
Previous Articleಸನ್ನಡತೆ ಆಧಾರದ ಮೇಲೆ ೭೪ ರೌಡಿಶೀಟರ್‌ಗಳ ರೌಡಿಶೀಟರ್ ಕ್ಲೋಸ್: ಎಸ್ ಪಿ ಅಶೋಕ್ ಕೆ.ವಿ.
Next Article ಯೋಜನೆಗಳ ಸೌಲಭ್ಯಕ್ಕಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ: ಸಿಇಒ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.