BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ
ತುಮಕೂರು

ವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ

ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯದಲ್ಲಿ ವಿಶ್ವ ಪರಿಸರ ದಿನ ಆಚರಣೆ
By News Desk BenkiyabaleUpdated:June 05, 2025 2:23 pm

ತುಮಕೂರು: ಸಿದ್ಧಗಂಗಾ ಚಾರಣ ತಂಡ ತನ್ನ ಐದನೇ ವಾರ್ಷಿಕೋತ್ಸವವನ್ನು ಹಾಗೂ ವಿಶ್ವ ಪರಿಸರ ದಿನವನ್ನು ತುಮಕೂರಿನ ಕನ್ನಡ ಭವನದಲ್ಲಿ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯದಲ್ಲಿ ಆಚರಿಸಲಾಯಿತು.
ಈ ವಿಶೇಷ ಸಂದರ್ಭದಲ್ಲಿ ವನ್ಯಜೀವಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸಿದ್ಧ ಸಂರಕ್ಷಣಾ ಜೀವಶಾಸ್ತ್ರಜ್ಞ ಡಾ. ಸಂಜಯ್ ಗುಬ್ಬಿ ರವರು ಹುಲಿ ಮತ್ತು ಚಿರತೆಗಳಂತಹ ಮಾಂಸಾಹಾರಿ ಪ್ರಾಣಿಗಳ ರಕ್ಷಣೆಯ ಮೇಲೆ ಕೇಂದ್ರೀಕರಿಸಿದ ವನ್ಯಜೀವಿ ಸಂರಕ್ಷಣೆಯ ಕುರಿತು ಉಪನ್ಯಾಸವನ್ನು ನೀಡಿದರು ಮತ್ತು ಹಿರಿಯ ಸಂಶೋಧನಾ ಸಹಾಯಕ ಅಭಿಷೇಕ್ ಭಾರದ್ವಾಜ್ ರವರು ಕಪ್ಪೆ ಮತ್ತು ಹಾವುಗಳ ರಕ್ಷಣೆ ಹಾಗೂ ವಿಶೇಷತೆಗಳ ಕುರಿತು ಉಪನ್ಯಾಸವನ್ನ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದಂತಹ ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಜಿಗಳು ಕಾರ್ಯಕ್ರಮವನ್ನುದ್ದೇಶಿಸಿ ಹಾಗೂ ಸದಸ್ಯರುಗಳ ಸಾಧನೆಯನ್ನು ಪ್ರಶಂಶಿಸಿ ಆಶೀರ್ವಚನ ನೀಡಿದರು.
ಹಿಮಾಲಯದ ಚಾರಣವನ್ನ ಯಶಸ್ವಿಯಾಗಿ ಪೂರ್ಣಗೊಳಿಸಿದ ಸಿದ್ಧಗಂಗಾ ಚಾರಣ ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು. ಇದರೊಂದಿಗೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಆಯೋಜಿಸಲಾಗಿತ್ತು, ಈ ತಂಡವು ಪ್ರತಿವರ್ಷವೂ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸುವುದು ಶ್ಲಾಘನೀಯವಾಗಿದೆ.
೨೦೨೧ರಲ್ಲಿ ರಾಮದೇವರಬೆಟ್ಟದ ತಪ್ಪಲಲ್ಲಿ ಸಸಿಗಳನ್ನು ನೆಟ್ಟು ಜವಾಬ್ದಾರಿಯಿಂದ ಪೋಷಿಸಿ ಬೆಳೆಸಲಾಯಿತು. ೨೦೨೨ರಲ್ಲಿ ದೇವರಾಯನದುರ್ಗದಲ್ಲಿ ಪ್ಲಾಸ್ಟಿಕ್ ಸ್ವಚ್ಛತಾ ಆಂದೋಲನ ಕೈಗೊಂಡು ಸುಮಾರು ೩೦೦ ಕ್ಕು ಹೆಚ್ಚು ಸ್ವಯಂಸೇವೆಕರು ಭಾಗವಹಿಸಿ ಅರಿವು ಮೂಡಿಸಿದರು. ೨೦೨೩ರಲ್ಲಿ ದೇವರಾಯನದುರ್ಗದ ಮೀಸಲು ಅರಣ್ಯ ಪ್ರದೇಶದಲ್ಲಿ ೮೦೦ಕ್ಕೂ ಅಧಿಕ ಸಸಿಗಳನ್ನು ನೆಟ್ಟು ಇಂದಿಗೂ ಅವುಗಳ ಪೋಷಣೆ ಮತ್ತು ಬೇಸಿಗೆಯಲ್ಲಿ ನೀರುಣಿಸುವ ಕೆಲಸವನ್ನು ನಡೆಸಿಕೊಂಡು ಬರುತ್ತಿದ್ದಾರೆ.
೨೦೨೪ರಲ್ಲಿ ಸಿದ್ಧರಬೆಟ್ಟದಲ್ಲಿ ಹಾಗೂ ಎರಡನೇ ಬಾರಿಗೆ ದೇವರಾಯನದುರ್ಗದಲ್ಲಿ ಪ್ಲಾಸ್ಟಿಕ್ ಸ್ವಚ್ಛತಾ ಆಂದೋಲನವನ್ನು ೮೦೦ ಕ್ಕು ಹೆಚ್ಚು ಸ್ವಯಂಸೇವಕರೊAದಿಗೆ ನಡೆಸಿ ೧೦೦೦ ಕ್ಕು ಹೆಚ್ಚು ಚೀಲಗಳಲ್ಲಿ ಸಂಗ್ರಹಿಸಿ ಹಾಗೂ ಸಂಗ್ರಹಿಸಿದ ಪ್ಲಾಸ್ಟಿಕ್ ಕಸವನ್ನು ತುಮಕೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು.
ಈ ಮೂಲಕ ಸಿದ್ಧಗಂಗಾ ಚಾರಣ ತಂಡವು ಪ್ರತಿವರ್ಷ ಪರಿಸರದ ಕಾಳಜಿಯೊಂದಿಗೆ ನವಚೈತನ್ಯದಿಂದ ವಿಶ್ವ ಪರಿಸರ ದಿನವನ್ನು ಆಚರಿಸುತ್ತಾ, ನೆಟ್ಟ ಸಸಿಗಳನ್ನು ಬೆಳೆಸುವ ಮೂಲಕ ಸಮರ್ಥ ಸೇವೆಯನ್ನು ನೀಡುತ್ತಿದೆ. ಈ ತಂಡದ ಸದಸ್ಯರುಗಳ ಭಾಗವಹಿಸುವಿಕೆ ಹಾಗೂ ಸೇವಾ ಮನೋಭಾವನೆ ಪ್ರಶಂಸನೀಯವಾಗಿದೆ.
ಈ ಸಂದರ್ಭದಲ್ಲಿ ಸಿದ್ಧಗಂಗಾ ಚಾರಣ ತಂಡ ಸದಸ್ಯರುಗಳು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.

(Visited 1 times, 1 visits today)
tumkur
Previous Articleವಾಕ್ ಮತ್ತು ಶ್ರವಣ ದೋಷವುಳ್ಳ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಸಂವಾದ
Next Article ೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.