BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ
ಇತರೆ ಸುದ್ಧಿಗಳು

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

By News Desk BenkiyabaleUpdated:June 05, 2025 2:29 pm

ತುಮಕೂರು: ಸಾರ್ವಜನಿಕರು ಸರ್ಕಾರ ರೂಪಿಸುವ ವಿವಿಧ ಜನಪರ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಶ್ರೀ ಡಿ.ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಬುಧವಾರ ಸರ್ಕಾರದ ೨ ವರ್ಷದ ಸಾಧನೆ ಹಾಗೂ ಯೋಜನೆಗಳ ಕುರಿತು ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು, ಇಂದಿನಿAದ ಜೂನ್ ೧೦ರವರೆಗೆ ಆಯೋಜಿಸಲಾಗಿರುವ ಈ ವಸ್ತುಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ ಗೃಹಲಕ್ಷಿö್ಮ ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು ೨,೦೦೦ ರೂ.ಗಳನ್ನು ಜಮೆ ಮಾಡಲಾಗುತ್ತಿದ್ದು, ಈವರೆಗೆ ಅರ್ಹ ಫಲಾನುಭವಿಗಳಿಗೆ ೨೩೦೦ ಕೋಟಿ ರೂ.ಗಳನ್ನು ತಲುಪಿಸಲಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ಜಮೆಯಾಗುತ್ತಿರುವ ಈ ಹಣದಿಂದ ಮಹಿಳೆಯರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಕುಟುಂಬ ನಿರ್ವಹಣೆ, ದಿನನಿತ್ಯದ ಖರ್ಚು-ವೆಚ್ಚಗಳಿಗಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಅದೇ ರೀತಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ಉಚಿತವಾಗಿ ಪೂರೈಕೆ ಮಾಡಲಾಗುತ್ತಿರುವ ೧೦ ಕೆ.ಜಿ. ಅಕ್ಕಿಯಿಂದ ಬಡವರು ತಮ್ಮ ಹಸಿವನ್ನು ನೀಗಿಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಅನ್ನಭಾಗ್ಯ ಯೋಜನೆಯಡಿ ಸುಮಾರು ೩೫೦ ಕೋಟಿ ರೂ. ಮೌಲ್ಯದ ಅಕ್ಕಿಯನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಗ್ರಾಹಕ ಕುಟುಂಬಕ್ಕೆ ಉಚಿತವಾಗಿ ೨೦೦ ಯುನಿಟ್ ವಿದ್ಯುತ್ ಒದಗಿಸಲಾಗುತ್ತಿದೆ. ಶಕ್ತಿ ಯೋಜನೆಯಡಿ ಎಲ್ಲಾ ವರ್ಗದ ಮಹಿಳೆಯರು ರಾಜ್ಯದಾದ್ಯಂತ ವಿವಿಧ ಸ್ಥಳಗಳಿಗೆ ಉಚಿತವಾಗಿ ಪ್ರಯಾಣಿಸಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಪದವಿ/ಡಿಪ್ಲೋಮಾ ಮುಗಿಸಿದ ನಿರುದ್ಯೋಗಿ ಯುವ ಜನಾಂಗಕ್ಕೆ ಮಾಸಿಕ ಭತ್ಯೆ ನೀಡಲಾಗುತ್ತಿದ್ದು, ಜಿಲ್ಲೆಯ ಅರ್ಹ ಫಲಾನುಭವಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಕಂದಾಯ ಗ್ರಾಮಗಳಲ್ಲಿ ಫಲಾನುಭವಿಗಳಿಗೆ ೭,೦೦೦ ಹಕ್ಕು ಪತ್ರ ವಿತರಿಸಲಾಗಿದ್ದು, ಹಕ್ಕುಪತ್ರ ವಿತರಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಬಾಕಿಯಿರುವ ಪೌತಿ ಖಾತೆ, ದರಖಾಸ್ತು/ಪೋಡಿ ಸೇರಿದಂತೆ ಮತ್ತಿತರ ಕಂದಾಯ ಸೇವೆಗಳನ್ನು ಜನಸಾಮಾನ್ಯರಿಗೆ ಒದಗಿಸಲು ಆಂದೋಲನ ರೂಪದಲ್ಲಿ ಕೈಗೊಳ್ಳಲಾಗುತ್ತಿದೆ. ಕಂದಾಯ, ಆರೋಗ್ಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳು ಜನ ಸೇವೆಗಾಗಿ ನಿರಂತರ ಶ್ರಮಿಸುತ್ತಿವೆ. ಜಿಲ್ಲೆಯನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ಸರ್ಕಾರದ ಹಲವಾರು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರುವಲ್ಲಿ ಜಿಲ್ಲಾಡಳಿತ ಬದ್ಧವಾಗಿದೆ ಎಂದು ತಿಳಿಸಿದರು.
ವಸ್ತುಪ್ರದರ್ಶನದಲ್ಲಿ ರಾಜ್ಯದ ಜನತೆಯ ಸಮಾನತೆಗಾಗಿ ಅನುಷ್ಟಾನಗೊಳಿಸಿರುವ ಗ್ಯಾರಂಟಿ ಬದುಕಿನ ೫ ಯೋಜನೆಗಳು, ಇಂದಿರಾ ಕ್ಯಾಂಟೀನ್, ಹಿಂದುಳಿದ ವರ್ಗಗಳ ಕಲ್ಯಾಣ ಯೋಜನೆಗಳು, ಅನ್ನದಾತನಿಗಾಗಿ ಜಾರಿಗೊಳಿಸಿರುವ ವಿವಿಧ ಸೌಲಭ್ಯಗಳು, ವಸತಿ ಯೋಜನೆ, ಗುಣಮಟ್ಟದ ಆರೋಗ್ಯ ಸೌಲಭ್ಯ, ಮತ್ತಿತರ ಯೋಜನೆಗಳ ಮಾಹಿತಿ ಫಲಕಗಳನ್ನು ಪ್ರದರ್ಶಿಸಲಾಗಿದ್ದು, ಸಾರ್ವಜನಿಕರು ವೀಕ್ಷಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ತನ್ನ ಸ್ವಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ತಾಲ್ಲೂಕಿನ ಹೊನ್ನುಡಿಕೆ ನಿವಾಸಿ ಪಾರ್ವತಮ್ಮ ಅವರು ವಸ್ತುಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು. ನಂತರ ಜಿಲ್ಲಾಧಿಕಾರಿಗಳು ಮಹಿಳೆಯಿಂದ ಗೃಹಲಕ್ಷಿö್ಮ ಯೋಜನೆಯ ೨೦೦೦ ರೂ. ಹಣ ಖಾತೆಗೆ ಜಮೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದರು.
ವಸ್ತುಪ್ರದರ್ಶನದಲ್ಲಿ ಅಳವಡಿಸಲಾಗಿದ್ದ ಸೆಲ್ಫಿ ಪಾಯಿಂಟ್‌ಗಳಲ್ಲಿ ಸಾರ್ವಜನಿಕರು ಫೋಟೋ ಕ್ಲಿಕ್ಕಿಸಿಕೊಂಡರು. ವಸ್ತುಪ್ರದರ್ಶನದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು “ರಾಜ್ಯದ ಸಮಗ್ರ ಅಭಿವೃದ್ಧಿಯ ಬಗ್ಗೆ ಪ್ರಚುರಪಡಿಸಿರುವ ಮಾಹಿತಿ ಫಲಕಗಳು ಅರ್ಥಪೂರ್ಣ ಹಾಗೂ ಆಕರ್ಷಕವಾಗಿವೆ. ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಈ ವಸ್ತುಪ್ರದರ್ಶನ ಫಲಕಾರಿಯಾಗಲಿದೆ ಎಂದು ಅಭಿಪ್ರಾಯ ಸಂಗ್ರಹ ಪುಸ್ತಕದಲ್ಲಿ ದಾಖಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಚಂದ್ರಶೇಖರ್, ವಾರ್ತಾ ಸಹಾಯಕಿ ಆರ್. ರೂಪಕಲಾ, ನಿಗಮದ ನಿಲ್ದಾಣಾಧಿಕಾರಿ ಮಾಸಪ್ಪ, ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)
tumkur
Previous Articleಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್
Next Article ಹೈನುಗಾರ ರೈತಾಪಿಗಳಿಗೆ ವಿಶೇಷವಾದ ಸವಲತ್ತುಗಳು ದೊರೆಯುತ್ತಿವೆ: ಮಹಲಿಂಗಯ್ಯ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.