ತುಮಕೂರು: ಜಿಲ್ಲೆಯಲ್ಲಿ ಜೂನ್ ೯ ರಿಂದ ೨೦ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾನಿಟೈಸರ್ ಮಾಡಿ ಯಾವುದೇ ಲೋಪದೋಷಗಳಿಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೩ಕ್ಕೆ ಸಂಬ0ಧಿಸಿದAತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ- ೧ ಮತ್ತು ೨ ರ ಪರೀಕ್ಷೆಯನ್ನು ಯಾಶಸ್ವಿಯಾಗಿ ನಡೆಸಿದಂತೆ ಈ ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಬೇಕು ಎಂದು ತಿಳಿಸಿದರು.
ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ ೪ ಹಾಗೂ ಉಳಿದೆಲ್ಲ ತಾಲೂಕುಗಳಲ್ಲಿ ತಲಾ ೧ ರಂತೆ ಒಟ್ಟು ೧೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದ ರಲ್ಲದೆ, ಪರೀಕ್ಷೆಗೆ ಸಂಬ0ಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಿಗಾ ವಹಿಸಬೇಕು. ನಿಗಧಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು. ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು. ನಿಯೋ ಜಿಸಿರುವ ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮವನ್ನು ತಡೆಯಲು ಮುಖ್ಯ ಅಧೀಕ್ಷಕರನ್ನು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಹಾಯಕರನ್ನು ನೇಮಿಸಲು ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿ ರ್ದೇಶಕ ಬಾಲ ಗುರುಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ೯೪೩೬ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-೩ ಬರೆಯಲು ನೋಂದಾ ಯಿಸಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಉಮಾ, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಡಿಡಿಪಿಐ ಮನಮೋಹನ್, ಕೊರಟಗೆರೆ ತಾಲ್ಲೂ ಕು ತಹಶೀಲ್ದಾರ್ ಮಂಜುನಾಥ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮತ್ತಿತರ ಅಧಿಕಾರಿಗಳು ಹಾಜರಿದ್ದರು.
(Visited 1 times, 1 visits today)