ತುಮಕೂರು: ನಗರದ ಹೊರವಲಯದ ನಂದಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ರಾಜೇಶ್ (೨೫), ಧನಂಜಯ (೨೭), ಧನುಷ್ (೨೩) ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸಮೀಪದ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದಂತೆ ಎದುರಾದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ತಕ್ಷಣ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಮೃತಪಟ್ಟಿರುವ ಮೂವರು ದಾಬಸ್ ಪೇಟೆಯ ಸೋಲಾರ್ ಕಂಪನಿಯೊ0ದರಲ್ಲಿ ಗಾರ್ಡುಗಳಾಗಿ ಕೆಲಸ ಮಾಡುತ್ತಿದ್ದರು.    ಬೆಳಗಿನ ಜಾವ ತಮ್ಮ ಕೆಲಸವನ್ನು ಮುಗಿಸಿಕೊಂಡು ವಾಪಸ್ ತುಮಕೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಈ ಸಂಬAಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(Visited 1 times, 1 visits today)