BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ
ತುಮಕೂರು

ಸಾಹಿತ್ಯವು ಬದುಕಿನ ಪ್ರತಿಬಿಂಬ: ಡಾ.ಎನ್. ಆರ್. ಲಲಿತಾಂಬ

ಮಾನವನು ವೈರಾಗ್ಯ, ಮೋಹ, ದ್ವೇಷವನ್ನು ತ್ಯಜಿಸಿ ನೈತಿಕ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕು
By News Desk BenkiyabaleUpdated:June 06, 2025 3:09 pm

 

ತುಮಕೂರು: ಒಬ್ಬ ವ್ಯಕ್ತಿಯ ದೃಷ್ಟಿಕೋನ, ಜೀವನದ ಬಗ್ಗೆ ಇರುವ ಆಳವಾದ ಅರಿವು, ಅನಿಸಿಕೆ, ಲೋಕದೃಷ್ಟಿ ಮುಂತಾದವುಗಳ ಮೊತ್ತ ಜೀವನದರ್ಶನವಾಗಿದೆ. ಜೀವ ಜಗತ್ತಿನಲ್ಲಿ ಮನುಷ್ಯನ ಪಾತ್ರ, ಸುಖ ದುಃಖಗಳ ಅರ್ಥ, ಬದುಕಿನಲ್ಲಿ ಅವುಗಳ ಪರಿಣಾಮ ಇಂತಹ ವಿಚಾರವನ್ನು ಸಾಹಿತ್ಯದಲ್ಲಿ ಹುಡುಕುವ ಪ್ರಕ್ರಿಯೆ ಉಂಟಾಗಿದೆ. ಸಾಹಿತ್ಯವು ಜೀವನದ ದೃಷ್ಟಿಕೋನದ ಜೊತೆ ಬದುಕಿನ ಪ್ರತಿಬಿಂಬದ0ತೆ ಕಾರ್ಯನಿರ್ವಹಿಸುತ್ತದೆ ಎಂದು ಬೆಂಗಳೂರಿನ ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಡಾ. ಎನ್. ಆರ್ ಲಲಿತಾಂಬ ಅಭಿಪ್ರಾಯ ಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಗುರುವಾರ ಹಮ್ಮಿಕೊಂಡಿದ್ದ ದಿ. ಗುಬ್ಬಿ ಬೊಮ್ಮಣ್ಣಯ್ಯ ಸ್ಮಾರಕ ಹಳಗನ್ನಡ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಳಗನ್ನಡ ಸಾಹಿತ್ಯದಲ್ಲಿ ಪ್ರಮುಖವಾಗಿ ನೈತಿಕ ಮತ್ತು ನಾಗರಿಕ ಜೀವನ ದರ್ಶನ ತತ್ವಗಳು, ಯಾವುದು ಹಿತ ಯಾವುದು ಅಹಿತ ಎಂಬುದನ್ನು ಕಾಣಬಹುದು. ಮಾನವನು ವೈರಾಗ್ಯ, ಮೋಹ, ದ್ವೇಷವನ್ನು ತ್ಯಜಿಸಿ ಆತ್ಮಶುದ್ಧಿ, ತ್ಯಾಗ, ನೈತಿಕ ಮೌಲ್ಯಗಳನ್ನು ರೂಡಿ ಸಿಕೊಳ್ಳಬೇಕು ಎಂದರು.
ಆದಿಪುರಾಣ, ವಿಕ್ರಮಾರ್ಜುನ ವಿಜಯ, ಕವಿರಾಜಮಾರ್ಗ ಇಂತಹ ಮಹಾನ್ ಕಾವ್ಯಗ ಳಲ್ಲಿ ನ್ಯಾಯ, ಧರ್ಮ, ರಾಜಸೇವೆ, ತ್ಯಾಗ, ಬಲಿದಾನ, ಕರ್ತವ್ಯ ಪ್ರಜ್ಞೆ, ಮತ್ತು ಲೌಕಿಕ ವಿಚಾರಗಳನ್ನು ಕಾಣಬಹುದು. ಹಳಗನ್ನಡದ ಕವಿ ಆದಿನಾಥನ ಪ್ರಕಾರ ಭೋಗ ಎನ್ನುವುದು ಎಂದಿಗೂ ಶಾಶ್ವತವಲ್ಲ ಎಂದರು.
ಶಿಸ್ತಿನ ಮೌಲ್ಯವನ್ನು ಹಳಗನ್ನಡ ಸಾಹಿತ್ಯವು ಎತ್ತಿ ಹಿಡಿಯುತ್ತಿತ್ತು. ಲೋಭ ಮತ್ತು ಭಯ ಪಾಪವನ್ನು ಅಂಟಿಸಿಕೊ0ಡು ಬರುತ್ತವೆ. ಆ ದ್ದರಿಂದ ಸರಿಯಾದ ಮಾರ್ಗವನ್ನು ಇಂದಿನ ಯುವಜನತೆ ತುಳಿಯಬೇಕು. ಪಾಪದ ಲೇಪವಿ ಲ್ಲದ ಪಯಣ ನಮ್ಮದಾಗಬೇಕು ಎಂದರು.
ವಿದ್ವಾ0ಸ ಡಾ. ಎಸ್. ಪಿ. ಪದ್ಮಪ್ರಸಾದ್ ಮಾತನಾಡಿ, ಅನುಭವ ಮತ್ತು ತಾತ್ವಿಕತೆಗಳು ಮನುಷ್ಯನ ಜೀವನವನ್ನು ಪ್ರಭಾವಿಸುತ್ತವೆ. ಹಳಗನ್ನಡ ಸಾಹಿತ್ಯದಂತೆ ಹರಿಕಥೆ, ಗಮಕ, ಜಾನಪದ, ಪ್ರವಚನಕಾರರು ಜೀವನ ದರ್ಶನಕ್ಕೆ ಅನುಗುಣವಾಗಿ ತಮ್ಮ ವಿಚಾರಗಳನ್ನು ತಿಳಿಸು ತ್ತಿದ್ದರು. ಸಾಹಿತ್ಯದ ಕೃತಿಗಳು ಅವರ ಪಾತ್ರ ವಾತಾವರಣ ದರ್ಶನವನ್ನು ಕಟ್ಟುಕೊಡುತ್ತಿದ್ದವು ಎಂದರು.
ಹಳಗನ್ನಡದ ವಿಡಂಬನ ಕಾವ್ಯಗಳಲ್ಲಿ ನಯ ಸೇನ ಇನ್ನಿತರ ಕವಿಗಳು ಬದುಕಿನ ಲೌಕಿಕ ಜವಾಬ್ದಾರಿಗಳು, ಸಾಮಾಜಿಕ ವಿಚಾರಗಳನ್ನು ಚಿತ್ರಿಸಿದ್ದಾರೆ. ಜೀವನವು ಒಂದು ತಪಸ್ಸಿನಂತೆ, ಸತತ ಪ್ರಯತ್ನದಿಂದ ಪರಮೋಚ್ಛ ಸ್ಥಾನವನ್ನು ಪಡೆಯಲು ಸಾಧ್ಯ ಎಂಬ ಚಿಂತನೆಯನ್ನು ವಿಸ್ತರಿಸಿದ್ದಾರೆ ಎಂದರು.
ಅಧ್ಯಕ್ಷೀಯ ಮಾತುಗಳನ್ನಾಡಿದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ನಿತ್ಯಾನಂದ ಬಿ. ಶೆಟ್ಟಿ, ಸಾಹಿತ್ಯದ ಮನೋಧರ್ಮವೇ ಎಲ್ಲ ವನ್ನು ಬೆಸೆಯುವುದು. ಸಾಹಿತ್ಯವು ತಾತ್ವಿಕ ಚೌಕಟ್ಟನ್ನು ನೀಡುತ್ತದೆ. ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಸಾಹಿತ್ಯವು ಪರಿಹಾರ ನೀಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಗುಬ್ಬಿ ಬೊಮ್ಮಣ್ಣಯ್ಯ ಸ್ಮಾರಕದತ್ತಿ ನಿಧಿ ಸಂಸ್ಥಾಪಕರಾದ ಜೆ.ಬಿ. ಶ್ರೇಯಾಂಸ ಕುಮಾರ್ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಪರವಾನಗಿ ಇಲ್ಲದೆ ಯೂರಿಯಾ ಸಾಗಾಣಿಕೆ: ವಾಹನ ಜಪ್ತಿ
Next Article ಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.