BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತ್ಯಾಗ, ಬಲಿದಾನ ಸ್ಮರಿಸುವ ಹಬ್ಬ ಬಕ್ರೀದ್
ತುಮಕೂರು

ತ್ಯಾಗ, ಬಲಿದಾನ ಸ್ಮರಿಸುವ ಹಬ್ಬ ಬಕ್ರೀದ್

ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಭ್ರಮಧ ಬಕ್ರೀದ್ ಆಚರಣೆ
By News Desk BenkiyabaleUpdated:June 07, 2025 3:45 pm

ತುಮಕೂರು: ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿAದ ಆಚರಿಸಲಾಯಿತು.
ಜಿಲ್ಲೆಯ ಕುಣಿಗಲ್, ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಮಧುಗಿರಿ, ಸಿರಾ, ಪಾವಗಡ ಹಾಗೂ ತುಮಕೂರು ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ, ಹೊಸ ಉಡುಪುಗಳನ್ನು ಧರಿಸಿ ಆಯಾ ತಾಲ್ಲೂಕು ಕೇಂದ್ರಗಳ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ೧೦ಕ್ಕೆ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ನಂತರ ಮಕ್ಕಾ ಮಸೀದಿ, ಈದ್ಗಾ ಮೊಹಲ್ಲಾ ಪಕ್ಕದಲ್ಲಿರುವ ಕೌಸರ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಈದ್ಗಾ ಮೈದಾನಕ್ಕೆ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಶೇಖರಗೌಡ, ಕೆಂಚಮಾರಯ್ಯ, ರೇವಣಸಿದ್ದಯ್ಯ, ಅಸ್ಲಾಂಪಾಷ, ಡಿವೈಎಸ್ಪಿ ಚಂದ್ರಶೇಖರ್ ಅವರು ಭೇಟಿ ನೀಡಿ ಮುಸ್ಲಿಂ ಸಮುದಾಯದ ಮುಖಂಡರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.
ಮುಖಂಡರಾದ ಇಕ್ಬಾಲ್ ಅಹಮದ್ ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಪ್ರತೀಕ. ಬಡವರಿಗೆ, ನಿರ್ಗತಿಕರಿಗೆ ದಾನ, ಧರ್ಮ ಮಾಡಲು ಅವಕಾಶ ಮಾಡಿಕೊಡುವುದೇ ಬಕ್ರೀದ್ ಹಬ್ಬದ ವಿಶೇಷತೆ. ಎಲ್ಲರೂ ಕೂಡಿ ಸಮಾನತೆಯಿಂದ ಬಾಳಲು, ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ ಈ ಬಕ್ರೀದ್ ಹಬ್ಬ ಎಂದರು.
ಮನುಕುಲಕ್ಕೆ ಶಾಂತಿ ನೀಡಲಿ, ಮಳೆಯಾಗಲಿ, ಬೆಳೆಯಾಗಲಿ. ಶಾಂತಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಬೇರೆಯವರ ಬಗ್ಗೆ ಇರುವ ಕೆಡಕನ್ನು ನಾವೆಲ್ಲಾ ತ್ಯಾಗ ಮಾಡಬೇಕಾಗಿದೆ ಎಂದರು.
ಬಕ್ರೀದ್ ಹಬ್ಬವು ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ, ಎಲ್ಲರೂ ಕೂಡಿ ಬಾಳುವಂತಾಗಲಿ, ಉತ್ತಮ ಮಳೆ, ಬೆಳೆಯಾಗಿ ದೇಶ ಸಮೃದ್ಧಿಯಾಗಲಿ ಎಂದು ಆಶಿಸಿದರು.
ನಮ್ಮಲ್ಲಿರುವ ಅಸೂಯೆ, ದ್ವೇಷವನ್ನು ತೆಗೆದು ಹಾಕಬೇಕು. ಬಕ್ರೀದ್ ತ್ಯಾಗ ಬಲಿದಾನದ ಸಂಕೇತ ಎಂದು ಹೇಳುವ ಮೂಲಕ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.
ಮಾಜಿ ಉಪಮೇಯರ್ ಅಸ್ಲಾಂಪಾಷ ಮಾತನಾಡಿ, ಮಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಬಹಳ ಶ್ರೇಷ್ಠವಾದುದು. ಎಲ್ಲರೂ ಶಾಂತಿಯಿAದ ಹಬ್ಬವನ್ನು ಆಚರಿಸಿ ದಾನ ಕೊಡಬೇಕು. ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಹಿಂದೂ-ಮುಸ್ಲಿA ಬಾಂಧವರು ಮಹಮದ್ ಪೈಗಂಬರರು ನೀಡಿರುವ ಸಂದೇಶದAತೆ ಸಾಮರಸ್ಯದಿಂದ ಬದುಕು ನಡೆಸಬೇಕು. ಹಿಂದೂ-ಮುಸ್ಲಿA ಬಾಂಧವರು ಎಲ್ಲರೂ ಸೇರಿ ಹಬ್ಬಗಳನ್ನು ಆಚರಿಸಬೇಕು ಎಂದು ಹೇಳಿದರು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

(Visited 1 times, 1 visits today)
tumkur
Previous Articleಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು
Next Article ಯುವಕರು ಮುಖ್ಯವಾಹಿನಿಗೆ ಬರಲು ಕ್ರೀಡೆ ಸಹಕಾರಿ
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.