BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು: ನಗರಕ್ಕೆ ೬ ಹೊಸ ವಿದ್ಯಾರ್ಥಿ ನಿಲಯ ಮಂಜೂರು
ತುಮಕೂರು

ತುಮಕೂರು: ನಗರಕ್ಕೆ ೬ ಹೊಸ ವಿದ್ಯಾರ್ಥಿ ನಿಲಯ ಮಂಜೂರು

ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಸೂಚನೆ
By News Desk BenkiyabaleUpdated:June 11, 2025 3:04 pm
ತುಮಕೂರು: ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದರಿಂದ ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ ೫೮ ವಿದ್ಯಾರ್ಥಿ ನಿಲಯಗಳ ಜೊತೆಗೆ ಹೆಚ್ಚುವರಿಯಾಗಿ ೬ ಹೊಸ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.
     ನಗರದ ಹೊರವಲಯ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಹೆಚ್ಚುವರಿಯಾಗಿ ಮಂಜೂರಾಗಿರುವ ೬ ವಿದ್ಯಾರ್ಥಿ ನಿಲಯಗಳನ್ನು ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದ್ದು, ಶೀಘ್ರವೇ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
      ಇಂಜಿನಿಯರಿAಗ್, ವಿಶ್ವವಿದ್ಯಾನಿಲಯ, ಮತ್ತಿತರ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಈ ನಿಲಯದಲ್ಲಿದ್ದು, ಸಮಾಜದಲ್ಲಿ ಉತ್ತಮ ಹಾಗೂ ಆರೋಗ್ಯವಂತ ಪ್ರಜೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ, ನಿಗಧಿಪಡಿಸಿರುವ ಆಹಾರ ಪಟ್ಟಿಯನ್ವಯ ವಾರಕ್ಕೆ ೪ ದಿನ ಮೊಟ್ಟೆ, ಬಾಳೆಹಣ್ಣು ಹಾಗೂ ವಾರಕ್ಕೊಮ್ಮೆ ಮಾಂಸಹಾರ ಒದಗಿಸಲಾಗುತ್ತಿದೆಯಲ್ಲದೆ, ಪ್ರತಿ ವಿದ್ಯಾರ್ಥಿಗೆ ತಿಂಗಳಿಗೊಮ್ಮೆ ಸೋಪು, ಕೊಬ್ಬರಿಎಣ್ಣೆ, ಮತ್ತಿತರ ದಿನಬಳಕೆ ವಸ್ತುಗಳುಳ್ಳ ಕಿಟ್ ಅನ್ನು ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುವಾಗುವಂತೆ ಪರೀಕ್ಷಾ ಪೂರ್ವ ಸಿದ್ಧತೆಗಾಗಿ ಪೂರಕ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಮೂಲಕ ಮಾದರಿ ವಿದ್ಯಾರ್ಥಿ ನಿಲಯವನ್ನಾಗಿ ರೂಪಿಸಿ ನಿರ್ವಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ೨೬೨ ವಸತಿ ನಿಲಯ :-
ಬೆಳಗಾವಿ, ಕಲ್ಬುರ್ಗಿ ಹೊರತುಪಡಿಸಿ ಅತಿ ಹೆಚ್ಚು ವಸತಿ ನಿಲಯಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ೧೦೪, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ೧೨೧, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ೧೬, ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣ ಇಲಾಖೆಯ ೨೧ ಸೇರಿದಂತೆ ಒಟ್ಟು ೨೬೨ ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ.  ವಸತಿ ನಿಲಯಗಳಿಗೆ ಸರ್ಕಾರದಿಂದ ಮಂಜೂರಾದ ವಿದ್ಯಾರ್ಥಿಗಳ ಸಂಖ್ಯೆಗಿAತ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ  ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆಯಡಿ ೭ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ೬ ಹೊಸ ವಸತಿ ನಿಲಯಗಳನ್ನು ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದ್ದು, ನಿರ್ಮಾಣ ಕಾಮಗಾರಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಪ್ರಸಕ್ತ ವರ್ಷ ಇಂಜಿನಿಯರಿAಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ವಸತಿ ನಿಲಯ ನಿರ್ಮಾಣ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದ್ದು, ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಸತಿ ನಿಲಯಗಳಿಗೆ ಸರ್ಕಾರವು ೨೫,೪೫೫ ವಿದ್ಯಾರ್ಥಿಗಳಿಗೆ ಮಂಜೂರಾತಿ ನೀಡಿದ್ದು, ಈ ಪೈಕಿ ೨೫,೪೫೦ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ವಸತಿ ನಿಲಯಗಳಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲಾ ವಸತಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಸಚಿವರಿಂದ ವಸತಿ ನಿಲಯ ಪರಿಶೀಲನೆ :-
ಇದಕ್ಕೂ ಮುನ್ನ ಸಚಿವರು ವಸತಿ ನಿಲಯದ ವಿದ್ಯಾರ್ಥಿಗಳ ಕೊಠಡಿ, ಅಡುಗೆ ಕೋಣೆ, ದಾಸ್ತಾನು ಕೋಣೆ, ಊಟದ ಕೋಣೆ, ಗ್ರಂಥಾಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ವಸತಿ ನಿಲಯದಲ್ಲಿ ಶುಚಿತ್ವ ಕಾಪಾಡಿಕೊಂಡ ಸಿಬ್ಬಂದಿಯ ಕಾರ್ಯವೈಖರಿಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ವಸತಿ ನಿಲಯದ ವಿದ್ಯಾರ್ಥಿಗಳ ಸಾಮರ್ಥ್ಯ, ನಿಲಯಕ್ಕೆ ಪ್ರಸಕ್ತ ವರ್ಷ ದಾಖಲಾದ ವಿದ್ಯಾರ್ಥಿಗಳು ಹಾಗೂ ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ನಿಲಯ ಮೇಲ್ವಿಚಾರಕಿ ಅರ್ಪಿತ ಅವರಿಂದ ಪಡೆದು ಕೊಂಡರು. ವಿದ್ಯಾರ್ಥಿಗಳಿಗಾಗಿ ತಯಾರಿಸಿಟ್ಟಿದ್ದ ಆಹಾರವನ್ನು ಸಚಿವರು ಪರಿಶೀಲಿಸಿದರು. ಅಡುಗೆ ಸಿಬ್ಬಂದಿಯ ವೇತನದ ಬಗ್ಗೆ ಮಾಹಿತಿ ಪಡೆದ ಅವರು ಮೆನು ಚಾರ್ಟ್ನಲ್ಲಿರುವಂತೆ ಪ್ರತಿ ದಿನ ಕಡ್ಡಾಯವಾಗಿ ಶುಚಿ ಹಾಗೂ ರುಚಿಯಾದ ಆಹಾರ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಬೇಕೆಂದು ಅಡುಗೆ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಬ್ಬೀರ್ ಅಹಮ್ಮದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ರಂಗಸ್ವಾಮಿ, ಮತ್ತಿತರ ಅಧಿಕಾರಿ/ಸಿಬ್ಬಂದಿ ಉಪಸ್ಥಿತರಿದ್ದರು.
(Visited 1 times, 1 visits today)
tumkur
Previous Articleಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ
Next Article Next Post
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.