BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ
ಇತರೆ ಸುದ್ಧಿಗಳು

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತ ಹಿರಿಯ ಹೋರಾಟಗಾರ ಎನ್.ವೆಂಕಟೇಶ್ ಅಭಿಪ್ರಾಯ
By News Desk BenkiyabaleUpdated:June 16, 2025 1:56 pm

ತುಮಕೂರು: ಶೋಷಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹತ್ತಿಸಿದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಹಾದಿಯಲ್ಲಿ ಯುವ ಸಮುದಾಯ ಹೆಜ್ಜೆ ಹಾಕಬೇಕಿದೆ. ಶಿಕ್ಷಣ, ಸಂಘಟನೆಯ ಮೂಲಕ ಸಮುದಾಯದ ಅಭಿವೃದ್ಧಿ ಹೊಂದಬೇಕಿದೆ ಎಂದು ಡಾ.ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತ ಹಿರಿಯ ಹೋರಾಟಗಾರ ಎನ್.ವೆಂಕಟೇಶ್ ಅಭಿಪ್ರಾಯಪಟ್ಟರು.
ನಗರದಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರೊ.ಬಿ.ಕೃಷ್ಣಪ್ಪ ಜನ್ಮಾದಿನಾಚರಣೆ ಹಾಗೂ ಒಳಮೀಸಲಾತಿ ಮುಂದಿನ ಹೆಜ್ಜೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪ ಅವರು ಪ್ರಾರಂಭಿಸಿದ ದಲಿತ ಸಂಘರ್ಷ ಸಮಿತಿ ಶೋಷಿತ, ಹಿಂದುಳಿದ ವರ್ಗಗಳಲ್ಲಿ ಸ್ವಾಭಿಮಾನದ ಹೋರಾಟವನ್ನು, ತಾರತಮ್ಯದ ವಿರುದ್ಧ ಹೋರಾಡುವ ಶಕ್ತಿಯನ್ನು ತುಂಬಿತು. ಶೋಷಿತ ಮತ್ತು ಹಿಂದುಳಿದವರು ಇಂದು ಸಂಘಟಿತರಾಗಬೇಕಿದೆ ಎಂದರು.
ದಲಿತ ಸಂಘರ್ಷ ಸಮಿತಿ ಹಾಗೂ ವಿರೋಧ ಪಕ್ಷಗಳ ಬೆಂಬಲದೊAದಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರೊ.ಬಿ.ಕೃಷ್ಣಪ್ಪ ಅವರು ರಾಜೀವ್ ಗಾಂಧಿಯವರ ಸಾವಿನ ಕಾಂಗ್ರೆಸ್ ಪರ ಅನುಕಂಪದ ಅಲೆಯಲ್ಲಿ ಸೋಲನ್ನು ಅನುಭವಿಸಿದರು. ಸೋಲಿನ ನಂತರವೂ ಹೋರಾಟದಿಂದ ವಿಮುಖರಾಗಲಿಲ್ಲ.
ಚುನಾವಣಾ ರಾಜಕೀಯದಲ್ಲಿ ಸೋಲನ್ನು ಕಂಡ ಪ್ರೊ.ಬಿ.ಕೃಷ್ಣಪ್ಪ ಅವರು ದಲಿತ ಸಂಘರ್ಷ ಸಮಿತಿಯೊಂದಿಗೆ, ಬಹುಜನ ಸಮಾಜವಾದಿ ಪಕ್ಷವನ್ನು ರಾಜ್ಯದಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು. ತಮ್ಮ ೫೯ನೇ ವರ್ಷದಲ್ಲಿ ನಮ್ಮನ್ನು ಅಗಲುವ ಮೂಲಕ ಶೋಷಿತ, ದಲಿತ ವರ್ಗಗಳಲ್ಲಿ ಪ್ರಜ್ವಲಿಸಿದ ಸ್ವಾಭಿಮಾನದ ಜ್ಯೋತಿ ನಂದಿತು ಎಂದರು.
ಪ್ರೊ.ಬಿ.ಕೃಷ್ಣಪ್ಪ ಅವರು ತೋರಿದ ಹಾದಿಯಲ್ಲಿ ಇಂದಿನ ಯುವ ಸಮೂಹ ಸಾಗಬೇಕಿದೆ, ಶೋಷಿತ ಮತ್ತು ಹಿಂದುಳಿದವರಿಗೆ ಶಿಕ್ಷಣ ಮತ್ತು ಸಂಘಟನೆಯ ಶಕ್ತಿಯನ್ನು ತೋರಿಸುವ ಮೂಲಕ ಸಮಾಜವನ್ನು ಸರಿ ದಾರಿಯಲ್ಲಿ ಮುನ್ನೆಡೆಸಬೇಕಾದ ಮಹತ್ವದ ಜವಾಬ್ದಾರಿ ಇದೆ ಎನ್ನುವುದನ್ನು ಅರಿಯಬೇಕು ಎಂದರು.
ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ ಪ್ರೊ.ಬಿ.ಕೃಷ್ಣಪ್ಪ ಅವರು ದಲಿತ ಸಮುದಾಯವನ್ನು ಸಂಘಟಿಸುವ ಮೂಲಕ ದಲಿತ ಸಮುದಾಯಗಳಲ್ಲಿ ರಾಜಕೀಯ, ಶಿಕ್ಷಣದ ಅರಿವನ್ನು ಮೂಡಿಸಿದರು. ಇಂದಿನ ಕಾಲಘಟ್ಟದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳು ಒಂದಾಗಿ ಹೋರಾಟ ನಡೆಸಬೇಕಾದ ಅವಶ್ಯಕತೆ ಇದೆ ಎಂದರು.
ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ದೊರಕಬೇಕಾಗಿದ್ದು, ಹಿಂದುಳಿದ ವರ್ಗಗಳಿಗೂ ಜನಸಂಖ್ಯೆಗೆ ಅವಶ್ಯಕವಾದ ಮೀಸಲಾತಿಯನ್ನು ಪಡೆಯುವ ಅವಶ್ಯಕತೆ ಇದೆ. ಹಿಂದುಳಿದ ವರ್ಗಗಳಿಗೂ, ದಲಿತ ಸಮುದಾಯಗಳಿಗೂ ಮೀಸಲಾತಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಪಟ್ಟಭದ್ರರ ಹುನ್ನಾರಗಳು ನಡೆಯುತ್ತಿರುವುದರ ವಿರುದ್ಧ ಎಚ್ಚರಿಕೆಯನ್ನು ವಹಿಸಬೇಕಿದೆ ಎಂದರು.
ಒಳಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ ರಾಜ್ಯದ ದಲಿತರ ಪಾಲಿಗೆ ಪ್ರೊ.ಬಿ.ಕೃಷ್ಣಪ್ಪ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತೆ ಪ್ರಭಾವ ಬೀರಿದ ಮಹಾನ್ ನಾಯಕ, ಚಂದ್ರಗುತ್ತಿ ರಾಜ್ಯದಲ್ಲಿ ಅನೇಕ ಅನಿಷ್ಠ ಆಚರಣೆಗಳನ್ನು ನಿಲ್ಲಿಸಲು ದಲಿತ ಸಂಘರ್ಷ ಸಮಿತಿ ಹಾಗೂ ಪ್ರೊ.ಬಿ.ಕೃಷ್ಣಪ್ಪ ಕಾರಣ ಎಂದರು.
ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಮೀಕ್ಷೆಯನ್ನು ನಡೆಸುತ್ತಿರುವುದರ ಬೆನ್ನಲ್ಲೆ ಹೊಸದಾಗಿ ಜಾತಿ ಗಣತಿಯನ್ನು ನಡೆಸಲು ತೀರ್ಮಾನಿಸಿದೆ. ಒಳ ಮೀಸಲಾತಿ ಗಣತಿ ಈಗಾಗಲೇ ಬಹುತೇಕ ಮುಗಿಯುವ ಹಂತದಲ್ಲಿ ಇರುವುದರಿಂದ ಮೊದಲು ಒಳ ಮೀಸಲಾತಿಯನ್ನು ನೀಡಿದ ಬಳಿಕ ಜಾತಿಗಣತಿಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎನ್.ವೆಂಕಟೇಶ್, ಪ್ರೊ.ಕೆ.ದೊರೈರಾಜು ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆಂಚಮಾರಯ್ಯ, ನಗರಸಭಾ ಮಾಜಿ ಅಧ್ಯಕ್ಷ ವಾಲೆಚಂದ್ರಯ್ಯ, ನಗರಸಭೆ ಮಾಜಿ ಸದಸ್ಯ ನರಸೀಯಪ್ಪ, ಹನುಮಂತರಾಯಪ್ಪ, ಟೂಡಾ ಮಾಜಿ ಸದಸ್ಯ ಜಯಮೂರ್ತಿ, ಜಿ.ಪಂ.ಸಿಎಒ ನರಸಿಂಹಮೂರ್ತಿ, ಹೋರಾಟಗಾರ ನರಸಿಂಹಯ್ಯ, ನಾಗಾರ್ಜುನ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಿವನಂಜಪ್ಪ ಸೇರಿದಂತೆ ಇತರರಿದ್ದರು.

(Visited 1 times, 1 visits today)
Previous Articleರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
Next Article ಕ್ಯಾತ್ಸಂದ್ರದಲ್ಲಿ ಡ್ರಗ್ಸ್ ವಿರುದ್ಧಯುವಕರ ಜಾಗೃತಿ ನಡಿಗೆ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.