BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಆರೋಪ
By News Desk BenkiyabaleUpdated:June 18, 2025 4:28 pm

ತುಮಕೂರು: ತನ್ನ ಅಸ್ತಿತ್ವಕ್ಕಾಗಿ ಪಂಚ ಗ್ಯಾರಂಟಿಗಳನ್ನು ನೀಡಿದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸಿ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬುಕ್ಕಾಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ತೆರಿಗೆ ಹಣವನ್ನು ಸ್ವೇಚ್ಛಾಚಾರವಾಗಿ ಬಳಸಿಕೊಳ್ಳುತ್ತಿದೆ. ಇನ್ನೊಂದೆಡೆ ಮಂತ್ರಿಗಳು ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡು ಜೈಲಿಗೆ ಹೋಗುತ್ತಿದ್ದಾರೆ ಎಂದು ಅವರು ದೂರಿದರು.
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸುವ ವಿದ್ಯುತ್ ಪರಿವರ್ತಕಗಳ ಬೆಲೆಯನ್ನು ೨.೫ ಲಕ್ಷಕ್ಕೆ ಏರಿಸಿದ್ದಾರೆ. ಇದನ್ನು ಗಮನಿಸಿದರೆ ರೈತರ ಮೇಲೆ ಈ ಸರ್ಕಾರಕ್ಕೆ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದರು.
ಮುAಬರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಸಂಘಟಿಸಲು ೫೮ ದಿನಗಳ ಕಾಲ ಪ್ರವಾಸವನ್ನು ಕೈಗೊಂಡಿದ್ದೇವೆ. ಡಿಸೆಂಬರ್ ತಿಂಗಳಲ್ಲಿ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ನಡೆಸಬೇಕಿದೆ. ಇದುವರೆಗೂ ಚುನಾವಣೆ ನಡೆಯದ ಹಾಗೆ ಈ ಚುನಾವಣೆ ನಡೆಸಬೇಕಾಗಿದೆ ಎಂದರು.
ಯಾವುದೇ ಪಕ್ಷದ ರಾಜಕಾರಣ ಪುಟಿದೇಳಬೇಕು ಎಂದರೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿರುವ ಕಾರ್ಯಕರ್ತರ ಶಕ್ತಿ ಬಹಳ ದೊಡ್ಡದು. ಚುನಾವಣೆ ೬ ತಿಂಗಳಾಗುತ್ತೋ ಅಥವಾ ವರ್ಷವಾಗುತ್ತೋ ಗೊತ್ತಿಲ್ಲ. ಆದರೆ ಪಕ್ಷ ಎಲ್ಲದಕ್ಕೂ ಸಿದ್ದವಾಗಿರಬೇಕು. ಅಷ್ಟರಲ್ಲಿ ನಿಮ್ಮೆಲ್ಲನ್ನು ಭೇಟಿಯಾಗಲು ನಾನು ಬಂದಿದ್ದೇನೆ, ನಿಮ್ಮೆಲ್ಲರ ಹೃದಯ ಗೆಲ್ಲಬೇಕು ಎಂಬ ಒಳ್ಳೆಯ ಉದ್ದೇಶದಿಂದ ಸಾರ್ವಜನಿಕ ಜೀವನಕ್ಕೆ ಬಂದಿದ್ದೇನೆ ಎಂದು ಅವರು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಕುಮಾರಣ್ಣನ ಆಶೀರ್ವಾದಿಂದ ಈ ಭಾಗದಲ್ಲಿ ಪ್ರಾದೇಶಿಕ ಪಕ್ಷವನ್ನು ಮತ್ತಷ್ಟು ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದೇವೆ. ಇದಕ್ಕೆ ನಿಮ್ಮೆಲ್ಲರ ಬೆಂಬಲ ಸಿಗಲಿದೆ ಎಂಬ ವಿಶ್ವಾಸ ನಮಗಿದೆ. ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಜತೆಗೆ ರಾಜ್ಯಾದ್ಯಂತ ಜನರ ಸಮಸ್ಯೆ ಅರಿಯಲು ಈ ಪ್ರವಾಸ ಸಹಕಾರಿಯಾಗಿದೆ ಎಂದರು.
ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿರುವ ಚಿ.ನಾ.ಹಳ್ಳಿ ಶಾಸಕ ಸುರೇಶ್‌ಬಾಬು ಅವರು ರಾಜ್ಯಕ್ಕೆ ಮಾದರಿ ಎಂಬAತೆ ೫-೧೦ ಸಾವಿರ ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ. ಬೇರೆ ಬೇರೆ ತಾಲ್ಲೂಕುಗಳಲ್ಲಿ ಪಕ್ಷ ಕಟ್ಟಲು ಸಹಕಾರ ನೀಡುವುದಾಗಿ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.
ಸುರೇಶ್‌ಬಾಬು ಅವರು ಕ್ಷೇತ್ರದ ಜನರ ಕಷ್ಟ-ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ನಿಮ್ಮ ಮನೆ ಬಾಗಿಲಿಗೆ ಮನೆ ಮಗ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ರೀತಿಯ ಕಾರ್ಯಕ್ರಮಗಳಿಂದ ಜನರ ಹೃದಯ ಗೆಲ್ಲಲು ಸಾಧ್ಯ. ಅವರ ಜನಪರ ಕಾಳಜಿ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬರುವುದರೊಂದಿಗೆ ಅವರನ್ನು ಮಂತ್ರಿಯಾಗಿ ನೋಡುವ ಕಾಲ ಬಹಳ ದೂರವಿಲ್ಲ ಎಂದು ಅವರು ಹೇಳಿದರು.
ರೈತರ ಮಕ್ಕಳು ಯಾವಾಗ ಬಂದರೂ ವರುಣ ಆಶೀರ್ವಾದ ಮಾಡುತ್ತಿದ್ದಾನೆ. ಇಂದು ಸಹ ಬುಕ್ಕಾಪಟ್ಟಣದಲ್ಲಿ ವರುಣ ಸಿಂಚನದ ಮೂಲಕ ಆಶೀರ್ವದಿಸಿದ್ದಾನೆ. ತುಮಕೂರು ಜಿಲ್ಲೆ ಸದಾ ಕಾಲ ದೇವೇಗೌಡರ ಹೋರಾಟಕ್ಕೆ ಜತೆಗೂಡಿ ಸಹಕಾರ ನೀಡುತ್ತಾ ಬಂದಿದೆ. ಈ ಸಹಕಾರ ಇನ್ನು ಮುಂದೆಯೂ ಹೀಗೆ ಇರಲಿ ಎಂದರು.
ಶಾಸಕ ಸಿ.ಬಿ. ಸುರೇಶ್‌ಬಾಬು ಮಾತನಾಡಿ, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪಣ ತೊಡಲಾಗಿದೆ ಎಂದು ಹೇಳಿದರು.
ಮೂರು ಬಾರಿ ಸೋತರೂ ಸಹ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿ ಎಂಬ ಉದ್ದೇಶದಿಂದ ನಿಖಿಲ್ ಕುಮಾರಸ್ವಾಮಿ ಅವರು ಹೋರಾಟಕ್ಕೆ ಇಳಿದಿದ್ದಾರೆ ಎಂದರು.
ರಾಜ್ಯ ಸರ್ಕಾರದ ನಡೆದುಕೊಳ್ಳುತ್ತಿರುವ ರೀತಿಯಿಂದ ಜನತೆಗೆ ಪಶ್ಚಾತ್ತಾಪ ಆಗುತ್ತಿದೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೂ ಸಹ ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದಾಗಿದೆ ಎಂದು ಟೀಕಿಸಿದರು.
ಚಿ.ನಾ.ಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ೧೦ ಕೋಟಿ ರೂ. ಅನುದಾನ ಬಂದಿತ್ತು. ಇದರಲ್ಲಿ ೨ ಕೋಟಿ ರೂ.ಗಳನ್ನು ಬುಕ್ಕಾಪಟ್ಟಣ ಅಭಿವೃದ್ಧಿಗೆ ನೀಡಲಾಗಿದೆ ಎಂದರು.
ಮನೆ ಬಾಗಿಲಿಗೆ ಮನೆ ಮಗ ಕಾರ್ಯಕ್ರಮದ ಮೂಲಕ ಪ್ರತಿ ಹಳ್ಳಿಗೂ ಪ್ರವಾಸ ಮಾಡಿ ಅಲ್ಲಿನ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಇಡೀ ರಾಜ್ಯದಲ್ಲೇ ಪ್ರಥಮವಾಗಿದ್ದು, ಇತರ ಕ್ಷೇತ್ರಗಳಿಗೆ ಮಾದರಿಯಾಗಿದೆ ಎಂದು ಅವರು ಹೇಳಿದರು.
ಆರ್‌ಸಿಬಿ ವಿಜಯೋತ್ಸವದ ವೇಳೆ ೧೧ ಮಂದಿ ಅಮಾಯಕರನ್ನು ರಾಜ್ಯ ಸರ್ಕಾರ ಬಲಿ ತೆಗೆದುಕೊಂಡಿತು. ಈ ಸರ್ಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸ್ವಪ್ರತಿಷ್ಠೆಗಾಗಿ ಕಾರ್ಯಕ್ರಮ ಮಾಡಲು ಹೋಗಿ ಕಾಲ್ತುಳಿತ ದುರಂತಕ್ಕೆ ಕಾರಣರಾದರು ಎಂದರು.
ರಾಜ್ಯ ಸರ್ಕಾರ ಯುವಕರಿಗೆ ಯುವ ನಿಧಿ ಯೋಜನೆಯಡಿ ೩ ಸಾವಿರ ಕೊಟ್ಟು ಸೋಮಾರಿಗಳನ್ನಾಗಿ ಮಾಡಲು ಹೊರಟಿದೆ. ಈ ಸರ್ಕಾರ ಕೊಡುವ ೩ ಸಾವಿರ ಪಡೆದು ಸೋಮಾರಿಗಳಾಗಲು ನಮ್ಮ ಯುವಕರು ಸಿದ್ದರಿಲ್ಲ ಎಂದರು.
ಕಳೆದ ಮೂರು ತಿಂಗಳಿAದ ಗೃಹ ಲಕ್ಷಿ÷್ಮ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಹಾಕಿಲ್ಲ. ಆದರೆ ಗ್ಯಾರಂಟಿ ಸಮಿತಿಗಳಿಗೆ ಅವರದೇ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಿ ಅವರಿಗೆ ೩ ತಿಂಗಳ ಹಣವನ್ನು ಮುಂಗಡವಾಗಿ ಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಬೆಳೆಸುವ ನಿಟ್ಟಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರವಾಸ ಕೈಗೊಂಡಿದ್ದಾರೆ. ಅವರ ಆಶಯ ಈಡೇರಲು ನಾವೆಲ್ಲರೂ ಕೈಜೋಡಿಸಿ, ಶ್ರಮ ವಹಿಸಿ ಕೆಲಸ ಮಾಡಬೇಕಾಗಿದೆ ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾದ ಬಳಿಕ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ಉದ್ದೇಶದಿಂದ ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರು ಮತ್ತು ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ ಎಂದರು.
ನಿಖಿಲ್ ಕುಮಾರಸ್ವಾಮಿ ಅವರು ೫೮ ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಿಸ್ಡ್ ಕಾಲ್ ಅಭಿಯಾನದ ಮೂಲಕ ಸದಸ್ಯತ್ವ ನೋಂದಣಿ ಅಭಿಯಾನವನ್ನು ಆರಂಭಿಸಿದ್ದಾರೆ. ಇದಕ್ಕೆ ಪಕ್ಷ ಎಲ್ಲ ಕಾರ್ಯಕರ್ತರು ಕೈಜೋಡಿಸಬೇಕು ಎಂದು ಕರೆ ನೀಡಿದರು.
೨೦೨೮ಕ್ಕೆ ಕುಮಾರಸ್ವಾಮಿಯವರು ಮತ್ತೊಮ್ಮೆ ಮುಖ್ಯಮಂತ್ರಿ ಎಂಬ ಅಭಿಯಾನವನ್ನು ೨೨೪ ಮತ ಕ್ಷೇತ್ರದಲ್ಲೂ ನಡೆಸುವ ಕಾರ್ಯವನ್ನು ಮಾಡಲಾಗುವುದು ಎಂದರು.
ಪಕ್ಷವನ್ನು ಸಂಘಟನೆ ಮಾಡಲು ನಾವು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವುದು ಅನಿವಾರ್ಯ. ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳನ್ನು ಆದಷ್ಟು ಬೇಗ ನಡೆಸಬೇಕಿದೆ. ಹಾಗಾಗಿ ಮಿಸ್ಡ್ ಕಾಲ್ ಅಭಿಯಾನದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಮುಖಂಡ ಎಸ್.ಆರ್. ಗೌಡ ಮಾತನಾಡಿ, ರಾಜ್ಯದಲ್ಲಿ ರೈತರ ಪರವಾಗಿರುವ ಪಕ್ಷ ಜಾತ್ಯಾತೀತ ಜನತಾ ದಳ. ಹಲವಾರು ಪಕ್ಷಗಳು ರಾಜ್ಯವನ್ನಾಳಿವೆ. ಆದರೆ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾತ್ರ ರೈತರಿಗೆ ಶಕ್ತಿ ತುಂಬುವ ಕೆಲಸ ನಡೆದಿದೆ ಎಂದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಇದಕ್ಕೂ ಮುನ್ನ ಬುಕ್ಕಾಪಟ್ಟಣ ವೃತ್ತದಿಂದ ನಿಖಿಲ್ ಕುಮಾರಸ್ವಾಮಿಯವರನ್ನು ತುಂತುರು ಮಳೆಯಲ್ಲೇ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆದೊಯ್ಯಲಾಯಿತು.
ಸಮಾವೇಶದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ. ಆಂಜಿನಪ್ಪ, ಚಿ.ನಾ.ಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ರಾಮಚಂದ್ರಪ್ಪ, ಆರ್. ಉಗ್ರೇಶ್, ಎಸ್.ಆರ್.ಗೌಡ, ರಾಜಕುಮಾರ್, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಚೇತನ ಗಂಗಾಧರ್, ಲೋಹಿತಾ ಬಾಯಿ, ಶಶಿಧರಯ್ಯ, ದಾಂಡೇಲಿ ಗಂಗಣ್ಣ, ಮುದಿಮಡು ರಂಗಸ್ವಾಮಿ, ಹೊನ್ನೇಶಪ್ಪ, ರಾಮಕೃಷ್ಣಪ್ಪ, ಖಲಂದರ್ ಸಾಬ್, ಹೆಚ್.ಎನ್. ಕುಮಾರ್, ಜಾನಮ್ಮ ರಾಮಚಂದ್ರಯ್ಯ ಮತ್ತಿತರರು ಭಾಗವಹಿಸಿದ್ದರು.

 

(Visited 1 times, 1 visits today)
tumkur
Previous Articleಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ
Next Article ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.