BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleUpdated:June 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಗತಿ ಪರ ಚಿಂತಕ ದೊರೈರಾಜು ಅಭಿಪ್ರಾಯಪಟ್ಟರು.
ನಗರದಲ್ಲಿ ಮಾದಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮೊದಲಿನಿಂದಲೂ ಬಡವರು, ಅಸಹಾಯಕರ ಹೋರಾಟಕ್ಕೆ ಧ್ವನಿಯಾಗಿದ್ದಾರೆ, ಸಾಮಾನ್ಯರೊಂದಿಗೆ ಬೆರೆ ಯುವ ಅಸಾಮಾನ್ಯಗುಣವನ್ನು ಹೊಂದಿರುವ ಕೆ.ಎನ್.ರಾಜಣ್ಣ ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲದಂತಹ ವ್ಯಕ್ತಿತ್ವದವರು ಎಂದರು.
ಸಹಕಾರಿ ತತ್ವವನ್ನೇ ಉಸಿರಾಗಿಸಿಕೊಂಡು ಸಹಕಾರ ರಂಗದಲ್ಲಿ ಶೋಷಿತ ಸಮುದಾಯವನ್ನು ಗುರುತಿಸಿ, ಬೆಳೆಸಿ ರುವ ಕೆ.ಎನ್.ರಾಜಣ್ಣ ಅವರು ಸಹಕಾರಿ ರಂಗದಲ್ಲಿಯೂ ಮೀಸಲಾತಿಯನ್ನು ತರುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದ್ದು, ದಲಿತ ಸಂಘಟನೆಗಳು ಹಾಗೂ ಯುವ ಸಮುದಾಯ ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಎಸ್ಸಿ,ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯ ಗೌರವಾಧ್ಯಕ್ಷ ಡಾ. ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ, ಶೋಷಿತ ಸಮುದಾಯದ ಮುಖಂಡರಾಗಿರುವ ಕೆ.ಎನ್.ರಾಜಣ್ಣ ಅವರಿಗೆ ಪರ್ಯಾಯ ನಾಯಕರಿಲ್ಲ, ಸಣ್ಣ, ಪುಟ್ಟ ಸಮುದಾಯಗಳನ್ನು ಗುರುತಿಸಿ ಅವಕಾಶ ನೀಡಿ ಪ್ರೋತ್ಸಾ ಹಿಸುವ ಜನನಾಯಕ ಎಂದರು.
ಶೋಷಿತ ವರ್ಗಗಳ ಪರವಾಗಿ ಇರುವ ಕೆ.ಎನ್.ರಾಜಣ್ಣ ಅವರು ಅಧಿಕಾರಿಗಳಿರಲಿ, ಜನಸಾಮಾನ್ಯರ ತೊಂದರೆಗಳಿಗೆ ಸ್ಪಂದಿಸುವ ಮೂಲಕ ತಳ ಸಮುದಾಯಗಳ ಹಿತವನ್ನು ಕಾಯುತ್ತಿದ್ದಾರೆ. ಜಾತ್ಯಾತೀತವಾಗಿ, ಪಕ್ಷಾತೀತವಾಗಿ ನಡೆಯು ತ್ತಿರುವ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸುವ ಮೂಲಕ ಶೋಷಿತರ ಪರ ಹೋರಾಟವನ್ನು ಮುಂದು ವರೆಸಲು ನೈತಿಕ ಶಕ್ತಿ ತುಂಬಬೇಕಿದೆ ಎಂದರು.
ನಾಗಾರ್ಜುನ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವನಂಜಪ್ಪ ಮಾತನಾಡಿ ಮಾದಿಗ ಸಮುದಾಯದ ಬಗ್ಗೆ ಅತೀವ ಕಾಳಜಿ, ಪ್ರೀತಿಯುಳ್ಳ ಕೆ.ಎನ್.ರಾಜಣ್ಣ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾಗಲೇ ನಾಗಾರ್ಜುನ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ೩೫ ಲಕ್ಷ ಸಾಲ ಮಂಜೂರು ಮಾಡಿಸಿ, ಸಮುದಾಯದ ಸಹಕಾರಿಗೆ ಸ್ವಂತ ಕಟ್ಟಡ ಹೊಂದುವ ಅವಕಾಶ ಕಲ್ಪಿಸಿದವರು ಎಂದು ಸ್ಮರಿಸಿದರು.
ರಾಜಣ್ಣ ಅವರು ಶಾಸಕರಾಗಿ ಆಯ್ಕೆಯಾದ ಮೇಲೆ ಸಹಕಾರಿ ಸಚಿವರಾಗುವಂತೆ ಮನವಿ ಮಾಡಿದ್ದೆವು, ದೇವರ ಅನುಗ್ರಹದಿಂದ ಸಹಕಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ, ಸಹಕಾರ ಸಚಿವರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಜನಸ್ನೇಹಿ ಇಲಾಖೆಯನ್ನಾಗಿ ಮಾರ್ಪಡಿಸಿದ್ದಾರೆ ಎಂದರು.
ಸಭೆಯಲ್ಲಿ ನಗರಸಭೆ ಮಾಜಿ ಸದಸ್ಯ ಹನುಮಂತರಾಯಪ್ಪ, ಟೂಡಾ ಮಾಜಿ ಸದಸ್ಯ ಜಯಮೂರ್ತಿ, ನಿವೃತ್ತ ತಹಶೀಲ್ದಾರ್ ಎಂ.ಸಿ.ನರಸಿAಹಮೂರ್ತಿ, ಹೆಚ್.ಆರ್.ಬಸವರಾಜು, ಗಂಗಾ ಧರಪ್ಪ, ನರಸಿಂಹಯ್ಯ, ನರಸೀಯಪ್ಪ, ಮಾಲಣ್ಣ, ಚಂದ್ರಣ್ಣ, ಗೋಪಾಲ್ ಸೇರಿದಂತೆ ಇತರರಿದ್ದರು.

(Visited 1 times, 1 visits today)
tumkur
Previous Articleವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
Next Article ನೈತಿಕ ಪತ್ರಿಕೋದ್ಯಮದ ಮೇಲೆ ಊಹಾ ಪತ್ರಿಕೋದ್ಯಮದ ಕರಿನೆರಳು
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.