BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೈತಿಕ ಪತ್ರಿಕೋದ್ಯಮದ ಮೇಲೆ ಊಹಾ ಪತ್ರಿಕೋದ್ಯಮದ ಕರಿನೆರಳು
ತುಮಕೂರು

ನೈತಿಕ ಪತ್ರಿಕೋದ್ಯಮದ ಮೇಲೆ ಊಹಾ ಪತ್ರಿಕೋದ್ಯಮದ ಕರಿನೆರಳು

ಪತ್ರಕರ್ತರಾಗುವವರಿಗೆ ಮಾತಿಗೆ ಮೊದಲು ನೋಟ ಮುಖ್ಯ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾgಕೆ.ವಿ.ಪ್ರಭಾಕರ್ ಹೇಳಿಕೆ
By News Desk BenkiyabaleUpdated:June 26, 2025 3:46 pm

ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ.
ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ.
ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು ಮಾತನ್ನು ನೆನಪಿಸಿಕೊಳ್ಳುತ್ತಾರೆ. “ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತದೆ. ಬೆಳೆಯುತ್ತಾ ಅಲ್ಪ ಮಾನವನನ್ನಾಗಿ ಮಾಡಲಾಗುತ್ತದೆ”.
ಪತ್ರಕರ್ತರಾಗುವವರು ಪೂರ್ವಾಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು. ಹೀಗಾದಾಗ ಮಾತ್ರ ಸಾಮಜಿಕ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ. ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದರು.
ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ.
ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗೆ ಧಾವಿಸಿ ಬಂದಿದ್ದೇವೆ.
ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, ದ್ವೇಷ ಭಾಷೆ ಇತ್ಯಾದಿಗಳ ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ ಜಗತ್ತಿನ ಮುಂದಿಟ್ಟಿದೆ.
ಇAತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ ಜೊತೆಗೆ ಕಲಿಸಬೇಕಾಗಿದೆ. ಮೊದಲು ಸತ್ಯ, ನಂತರ ವೇಗ ಎಂಬ ನುಡಿಯು ಈಗ ಇನ್ನೂ ಹೆಚ್ಚು ಪ್ರಸ್ತುತವಾಗಿದೆ. chart GPT ಇರಬಹುದು ಅಥವಾ AI ಯುಗದಲ್ಲಿ ನಿಮ್ಮತನವನ್ನು ಕಳೆದುಕೊಳ್ಳದೆ ಕಾರ್ಯನಿರ್ವಹಿಸಿದರೆ, ಕೃತಕತೆ ಇಲ್ಲದ ಯಶಸ್ಸು ಸಾಧ್ಯ. ಇದನ್ನು ಸಾಧಿಸಲು ಶಿಕ್ಷಣ ಮತ್ತು ತರಬೇತಿಯ ಅಗತ್ಯತೆ ಇದೆ.
ಪ್ರತಿಯೊಬ್ಬ ಮಾಧ್ಯಮ ವಿದ್ಯಾರ್ಥಿಗೆ ನಿಖರ ಮಾಹಿತಿ ಸಂಗ್ರಹಣೆ, ಬೋಧನೆಯ ಶೈಲಿ, ವಿಶ್ಲೇಷಣಾತ್ಮಕ ದೃಷ್ಟಿಕೋನ ಹಾಗೂ ಸಮಾಜದ ಅಸಮಾನತೆಗಳನ್ನು ಗುರುತಿಸುವ ನೈತಿಕ ಬದ್ಧತೆ ಅತ್ಯಗತ್ಯ. ಮಾಧ್ಯಮ ಇಂದಿನ ಕಾಲದಲ್ಲಿ ಕೇವಲ ಸುದ್ದಿಯನ್ನು ನೀಡುವುದಲ್ಲ. ಇವು ಆಲೋಚನೆಗಳನ್ನು, ಅಭಿಪ್ರಾಯಗಳನ್ನು ರೂಪಿಸುವ ಶಕ್ತಿಯನ್ನೂ ಹೊಂದಿವೆ. ಈ ಕಾರಣಕ್ಕಾಗಿಯೇ ಮಾಧ್ಯಮಗಳನ್ನು OPINION MAKERS ಎಂದು ಪರಿಗಣಿಸಲಾಗುತ್ತಿದೆ.
ನಮ್ಮ ಸರ್ಕಾರ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಮಾಧ್ಯಮ ಅಕಾಡೆಮಿಯ ಮೂಲಕ ತರಬೇತಿ ಶಿಬಿರಗಳು, ಸಂವಾದ ಸಭೆಗಳು, ಗ್ರಾಮೀಣ ಪತ್ರಕರ್ತರ ಪ್ರೋತ್ಸಾಹ, ಡಿಜಿಟಲ್ ಮಾಧ್ಯಮ ತರಬೇತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಸತ್ಯನಿಷ್ಠ ಸಮಾಜಮುಖಿ ಪತ್ರಕರ್ತರನ್ನು ರೂಪಿಸುವ ದಿಕ್ಕಿನಲ್ಲಿ ಪ್ರಯತ್ನಿಸುತ್ತಿದೆ.
ನೀವು ಪತ್ರಿಕೋದ್ಯಮವನ್ನು ವೃತ್ತಿಯಾಗಿ ಆಯ್ಕೆ ಮಾಡುತ್ತಿದ್ದರೆ, ಇದು ಕೇವಲ ಉದ್ಯೋಗವಲ್ಲ. ಇದು ಸಮಾಜದ ಧ್ವನಿ ಆಗುವ, ಧ್ವನಿ ಇಲ್ಲದವರ ಮಾತುಗಳನ್ನು ಎತ್ತಿ ಹಿಡಿಯುವ, ಮತ್ತು ಅಧಿಕಾರದ ಎದುರು ಸತ್ಯವನ್ನು ಹೇಳುವ ಧೈರ್ಯದ ಮಾರ್ಗ ಮತ್ತು ಮಾಧ್ಯಮ ಎನ್ನುವುದನ್ನು ನೆನಪಿನಲ್ಲಿಡಬೇಕು.
ಪ್ರೀತಿಯ ವಿದ್ಯಾರ್ಥಿಗಳೇ, ಕಲಿಕೆಯ ದಿನಗಳಲ್ಲಿ ಸೃಜನಶೀಲತೆ, ಅಧ್ಯಯನಶೀಲತೆ ಸಂಶೋಧನಾ ಮನೋಭಾವ, ಮತ್ತು ಸಾಮಾಜಿಕ ಜವಾಬ್ದಾರಿಯ ಚಿಂತನೆಯನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದರು.
ತುಮಕೂರು ವಿಶ್ವ ವಿದ್ಯಾಲಯ ಆಯೋಜಿಸಿರುವ ಈ ಮಾಧ್ಯಮ ಹಬ್ಬವು ಮಾಧ್ಯಮ ಕ್ಷೇತ್ರದಲ್ಲಿ ಪ್ರಜ್ಞಾವಂತ ಯುವ ಪ್ರತಿಭೆಗಳ ಹುಟ್ಟಿಗೆ ವೇದಿಕೆಯಾಗಲಿ ಎಂದು ಆಶಿಸುತ್ತೇನೆ ಎಂದರು.
ತುಮಕೂರು ವಿವಿ ಕುಲಪತಿಗಳಾದ ಪ್ರೊ.ಎಂ.ವೆAಕಟೇಶ್ವರಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶ ಖಾನಂ, ಕಾರ್ಯದರ್ಶಿ ಸಹನಾ ಎಂ, ಪ್ರಜಾ ಪ್ರಗತಿ ಸಂಪಾದಕಾದ ನಾಗಣ್ಣ, ಸಿಂಡಿಕೇಟ್ ಸದಸ್ಯರಾದ ಮನೋಜ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಸತೀಶ್ ಗೌಡ, ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಿಣಿ ಅವರು ಉಪಸ್ಥಿತರಿದ್ದರು.

ಪ್ರಶ್ನೆ ಕೇಳುವ ಮೊದಲು ಅಧ್ಯಯನ ಅಗತ್ಯ

ಪತ್ರಕರ್ತರು ಪ್ರಶ್ನೆ ಕೇಳುವುದನ್ನು ಬಿಡಬಾರದು ಆದರೆ, ಪ್ರಶ್ನೆ ಮಾಡುವ ಮೊದಲು ಆ ವಿಷಯದ ಬಗ್ಗೆ ಅಧ್ಯಯನ ನಡೆಸಿರಬೇಕು. ವಾಪಾಸ್ ಪ್ರಶ್ನೆ ಕೇಳಿದರೆ ಪತ್ರಕರ್ತರು ಮುಖ ಮುಖ ನೋಡಬಾರದು. ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ.

(Visited 1 times, 1 visits today)
tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
Next Article ತುಮಕೂರು: ನೂತನ ವಿವಿ ಬಳಿ ಚಿರತೆ ಪ್ರತ್ಯಕ್ಷ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.