BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ
ಇತರೆ ಸುದ್ಧಿಗಳು

ಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ

ಶ್ರೀಗಳ ಕುರಿತು ಬರೆಯುವುದೆಂದರೆ ಭಗವಂತನ ಕುರಿತು ಬರೆದಂತೆ: ಗೋ.ರು.ಚನ್ನಬಸಪ್ಪ
By News Desk BenkiyabaleUpdated:June 28, 2025 3:37 pm
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 41;

ತುಮಕೂರು: ಸಿದ್ದಗಂಗಾ ಶ್ರೀಗಳ ಕುರಿತು ಬರೆಯುವುದೆಂದರೆ ಭಗವಂತನ ಕುರಿತು ಬರೆದಂತೆ. ಹಾಗಾಗಿ ಶ್ರೀಸಿದ್ದಗಂಗಾ ಶ್ರೀಗಳ ಬಗ್ಗೆ ಕನ್ನಡ, ಸಂಸ್ಕೃತದಲ್ಲಿ ಇರುವ ಸಾಹಿತ್ಯವನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡಿ, ನಾಡಿನ ಮೂಲೆ ಮೂಲೆಗೂ ತಲುಪುವಂತೆ ಮಾಡಬೇಕಾಗಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಹಾಗೂ ನಾಡೋಜ ಗೋ.ರು.ಚನ್ನಬಸಪ್ಪ ತಿಳಿಸಿದ್ದಾರೆ.
ನಗರದ ಶ್ರೀಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀಉದ್ಯಾನ ಶಿವಯೋಗಿಗಳ ಸಮುದಾಯ ಭವನದಲ್ಲಿ ಜಾನಪದ ವಿದ್ವಾಂಸ ಹಾಗೂ ಸಿದ್ದಗಂಗಾ ಮಾಸಪತ್ರಿಕೆಯ ಸಂಪಾದಕರಾದ ಹೆಚ್.ಎಸ್.ಸಿದ್ದಗಂಗಪ್ಪ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಜೀವನ, ಸಾಧನೆ, ಸಂದೇಶ ಕುರಿತು ಬರೆದಿರುವ ಪದ್ಮಭೂಷಣ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಎಂಬ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡುತಿದ್ದ ಅವರು,ಭಕ್ತರಿಂದ ನಡೆದಾಡುವ ದೇವರು ಎಂದು ಕರೆಯಿಸಿಕೊಂಡ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಭಕ್ತರಲ್ಲಿಯೇ ದೇವರನ್ನು ಕಂಡವರು.ಧಾರ್ಮಿಕತೆಗೆ ಹೊಸ ಭಾಷ್ಯ ಬರೆದ ಇವರನ್ನು ವರ್ಣಿಸಿದರೆ, ದೇವರನ್ನು ಪರಿಚಯಿಸಿದಂತೆ ಎಂದರು.
ಪದ್ಮಭೂಷಣ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಕೃತಿಯ ಲೇಖಕರಾದ ಹೆಚ್.ಎಸ್.ಸಿದ್ದಗಂಗಪ್ಪ ಅವರು ಶ್ರೀಗಳನ್ನು ಹತ್ತಿರದಿಂದ ಬಲ್ಲವರು ಹಾಗಾಗಿಯೇ ಹೆಚ್ಚು ನಿಖರವಾಗಿ ಅವರ ಜೀವನ ಚರಿತ್ರೆಯನ್ನು ಕಟ್ಟಿಕೊಟ್ಟಿದ್ದಾರೆ.ನಾಡಿನ ಹಲವು ಗುರುಗಳನ್ನು ನೋಡಿದ್ದೇನೆ.ಯಾವ ಗುರುವರ್ಯರಿಗೂ ಶ್ರೀಶಿವಕುಮಾರಸ್ವಾಮೀಜಿಗಳ ಕುರಿತು ಬಂದಿರುವಷ್ಟು ಕೃತಿಗಳು ಪ್ರಕಟಗೊಂಡಿಲ್ಲ.ಹಾಗಾಗಿ ಇವರೆಲ್ಲಾ ಕೃತಿಗಳನ್ನು ಸಂಪಾದಿಸಿ,ಅವುಗಳನ್ನು ಸಣ್ಣ ಸಣ್ಣ ಪುಸ್ತಕದ ರೂಪದಲ್ಲಿ ಇಂಗ್ಲಿಷ್‌ಗೆ ಭಾ಼ಷಾಂತರಿಸುವ ಕೆಲಸ ಆದರೆ ಹೆಚ್ಚಿನವರಿಗೆ ಶ್ರೀಗಳನ್ನು ಪರಿಚಯಿಸಲು ಸಾಧ್ಯವಾಗಲಿದೆ.ಶ್ರೀಗಳ ಜೀವನ ಶಾಲಾ, ಕಾಲೇಜುಗಳ ಪಠ್ಯವಾಗುವಂತೆ ಮಾಡಿದರೆ ಮತ್ತಷ್ಟು ಜನರನ್ನು ತಲುಪಬಹುದು ಎಂದು ಗೋ.ರು.ಚನ್ನಬಸಪ್ಪ ನುಡಿದರು.
ಲೇಖಕರಾಗಿರುವ ಹೆಚ್.ಎಸ್.ಸಿದ್ದಗಂಗಪ್ಪ ಅವರು ಡಾ.ಶ್ರೀಶಿವಕುಮಾರಸ್ವಾಮಿಜಿಗಳ ಸಮಗ್ರ ಚಿತ್ರಣವನ್ನು ಈ ಕೃತಿಯ ಮೂಲಕ ಮಾಡಿದ್ದಾರೆ. ಇದು ಶ್ರೀಗಳ ಬಗ್ಗೆ ಸಂಶೋಧನೆ ಕೈಗೊಳ್ಳುವವರಿಗೆ ಒಳ್ಳೆಯ ಅಕರ ಗ್ರಂಥವಾಗಲಿದೆ.ಪದ್ಮಭೂಷಣ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಕೃತಿ ಪುರಾಣದ ಗ್ರಂಥವಲ್ಲ. ಪ್ರಮಾಣದ ಗ್ರಂಥ.ಇAತಹ ಕೃತಿಯನ್ನು ಪ್ರತಿಯೊಬ್ಬರು ಕೊಂಡು ಓದುವಂತಾಗಬೇಕು ಎಂದು ಗೋ,ರು.ಚನ್ನಬಸಪ್ಪ ತಿಳಿಸಿದರು.
ಕೃತಿಯ ಲೇಖಕರಾದ ಹೆಚ್.ಎಸ್.ಸಿದ್ದಗಂಗಪ್ಪ ಮಾತನಾಡಿ,ಸುಮಾರು ೯೦೦ ಪುಟಗಳ ಈ ಗ್ರಂಥದಲ್ಲಿ ಶ್ರೀಗಳ ಪ್ರತಿಯೊಂದು ಕ್ಷಣವನ್ನು ಅಕ್ಷರ ರೂಪಕ್ಕೆ ತರಲು ಪ್ರಯತ್ನಿಸಲಾಗಿದೆ.ಪ್ರತಿದಿನ ಸಂಜೆ ನಡೆಯುವ ಸಾಮೂಹಿಕ ಪ್ರಾರ್ಥನೆಯ ವೇಳೆ ಶ್ರೀಗಳು ಮಾಡಿರುವ ನೀತಿ ಬೋಧನೆಯ ಭಾಷಣಗಳು, ವಿವಿಧ ಕೃತಿಗಳಿಗೆ ಬರೆದಿರುವ ಮುನ್ನುಡಿ, ಆಶಯನುಡಿಗಳ ಸಂಗ್ರಹವೂ ಇದೆ.ಸರಳ ಕನ್ನಡದಲ್ಲಿ ಎಲ್ಲರಿಗೂ ಅರಿವಾಗುವ ರೀತಿ ಈ ಕೃತಿಯನ್ನು ರಚಿಸಲಾಗಿದೆ.ಬಳ್ಳಾರಿಯ ಸಿರಗುಪ್ಪದ ಶ್ರೀಮಠದ ಹಳೆಯ ವಿದ್ಯಾರ್ಥಿಗಳು ಇದರ ಮುದ್ರಣದ ಜವಾಬ್ದಾರಿ ಹೊತ್ತಿದ್ದಾರೆ.ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಪ್ರಸ್ತಾವಿಕ ನುಡಿಗಳನ್ನಾಡಿದ ಹಳೆಯ ವಿದ್ಯಾರ್ಥಿಗಳ ಸಂಘದ ಬಾಲಚಂದ್ರ ಅವರು, ಹೇಗೆ ಭಗವದ್ಗೀತೆಯನ್ನು ಇಸ್ಕಾನ್ ಸಂಸ್ಥೆಯವರು, ವಿವೇಕಾನಂದರನ್ನು ರಾಮಕೃಷ್ಣ ಮಿಷನರಿಗಳು ನಾಡಿಗೆ ಪರಿಚಯಿಸಿದ ರೀತಿ, ನಡೆದಾಡುವ ದೇವರಾಗಿದ್ದ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಜೀವನ, ಸಾಧನೆ ಮತ್ತು ಸಂದೇಶಗಳನ್ನು ನಾಡಿನ ಎಲ್ಲಾ ಭಾಷೆಗಳಲ್ಲಿಯೂ ಮುದ್ರಿಸಿ, ಕಟ್ಟೆ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಹಳೆಯ ವಿದ್ಯಾರ್ಥಿಗಳ ಸಂಘ ಮಾಡಲಿದೆ.ಅದರ ಮೊದಲ ಹೆಜ್ಜೆ ಇದಾಗಿದೆ ಎಂದರು.
ಇದೇ ವೇಳೆ ಶ್ರೀಮಠದ ಹಳೆಯ ವಿದ್ಯಾರ್ಥಿಗಳ ಸಂಘದಿAದ ಪದ್ಮಭೂಷಣ ಡಾ.ಶ್ರೀಶಿವಕುಮಾರಸ್ವಾಮಿಜಿಗಳು ಕೃತಿಯ ಲೇಖಕರಾದ ಹೆಚ್.ಎಸ್.ಸಿದ್ದಗಂಗಪ್ಪ ಅವರಿಗೆ ಶ್ರೀಸಿದ್ದಗಂಗಾ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಶ್ರೀಸಿದ್ದಲಿಂಗಸ್ವಾಮೀಜಿಗಳು ಆಶೀರ್ವಚನ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕೋ.ರಂ.ಬಸವರಾಜು ಅವರುಗಳು ಕೃತಿಯ ಕುರಿತು ಮಾತನಾಡಿದರು. ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀಶಿವಸಿದ್ದೇಶ್ವರಸ್ವಾಮೀಜಿಗಳು,ಗೀತಾಂಜಲಿ ಗ್ರಾಫಿಕ್ ಮಾಲೀಕರದ ಜಿ.ನಾಗಸುಂದರ್,ಗುತ್ತಿಗೆದಾರರಾದ ಆರ್.ಸಿ.ಪಂಪನಗೌಡರ್,ಮುದ್ರಣ್ಣನವರು, ಮರೇಗೌಡ ಸೇರಿದಂತೆ ಶ್ರೀಮಠದ ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

(Visited 1 times, 1 visits today)
tumkur
Previous Articleತುಮಕೂರು: ನೂತನ ವಿವಿ ಬಳಿ ಚಿರತೆ ಪ್ರತ್ಯಕ್ಷ
Next Article ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.