BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೂತನ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ
ತುಮಕೂರು

ನೂತನ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ

ಹಿಂದೂ ಸಾದರ ಸಮಾಜ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಿದೆ: ಸಚಿವ ವಿ.ಸೋಮಣ್ಣ ಅಭಿಪ್ರಾಯ
By News Desk BenkiyabaleUpdated:June 30, 2025 3:50 pm

 

ತುಮಕೂರು:ತನ್ನ ಅಭಿವೃದ್ಧಿಗೆೆ ಬೇರೆ ಸಮುದಾಯದ ಆಸರೆ ಬೇಡದೆ,ಸ್ವತಹಃ ಸಂಘಟಿತರಾಗಿ,ಸ್ವಾಭಿಮಾನದಿ0ದ ಬದುಕುತ್ತಿರುವ ಹಿಂದೂ ಸಾದರ ಸಮಾಜ.ತನ್ನ ಶೈಕ್ಷಣಿಕ ಅಭಿವೃದ್ದಿಗಾಗಿ ಬಾಲಕ, ಬಾಲಕಿಯರ ಹಾಸ್ಟಲ್‌ಗಳನ್ನು ತೆರೆದು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ನಗರದ ಕ್ಯಾತ್ಸಂದ್ರ ರಿಂಗ್‌ರಸ್ತೆಯಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ದಿ ಸಂಘದವತಿಯಿAದ ನೂತನವಾಗಿ ನಿರ್ಮಿಸಿರುವ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ ನೆರವೇರಿಸಿ ಮಾತನಾಡುತಿದ್ದ ಅವರು,ಬಡತನವನ್ನು ಮೆಟ್ಟಿನಿಂತು ಸಮಾಜದ ಏಳಿಗೆಗೆ ಸಮುದಾಯದ ದಾನಿಗಳು ನಿರಂತರವಾಗಿ ನಿಸ್ವಾರ್ಥದಿಂದ ಶ್ರಮಿಸುತ್ತಿರುವುದೇ ಸಮುದಾಯ ಉತ್ತರೋತ್ತರವಾಗಿ ಬೆಳೆಯಲು ಕಾರಣವಾಗಿದೆ ಎಂದರು.
ಹಿAದೂ ಸಾದರು ಜನಸಂಖ್ಯೆಯಲ್ಲಿ ಕಡಿಮೆಯಿದ್ದರೂ ಶೈಕ್ಷಣಿಕವಾಗಿ, ಅರ್ಥಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ. ಇದಕ್ಕೆ ಮಂಡಿ ಹರಿಯಣ್ಣನವರಿಂದ ಹಿಡಿದು ಇಂದಿನ ರವಿಕುಮಾರ್ ಅವರವರೆಗೆ ಎಲ್ಲರೂ ಸಹ ಶ್ರಮಿಸಿದ್ದಾರೆ. ಸಮುದಾಯದ ವತಿಯಿಂದ ನಿರ್ಮಿಸಿರುವ ಹಾಸ್ಟಲ್‌ಗಳಿಗೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಆಯಾಯ ಕಾಲದ ಸರಕಾರಗಳು ನೆರವು ನೀಡಿವೆ. ಹಿರಿಯರ ಕೋರಿಕೆಯಂತೆ ತುಮಕೂರಿನಲ್ಲಿ ನಿರ್ಮಾಣವಾಗುತ್ತಿರುವ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಸೋಮಣ್ಣ ಪ್ರತಿಷ್ಠಾನದಿಂದ ೨೫ ಲಕ್ಷ ರೂಗಳನ್ನು ನೀಡುವುದಾಗಿ ಭರವಸೆ ನೀಡಿದರು.
ಹಿಂದೂ ಸಾದರ ಕ್ಷೇಮಾಭಿವೃದ್ದಿ ಸಂಘದವತಿಯಿAದ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಸಂಕಿರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ,ಸಮುದಾಯದ ಅಭಿವೃದ್ದಿಗೆ ಶ್ರಮಿಸಿದ ದಾನಿಗಳನ್ನು ಸ್ಮರಿಸುವುದು ನಿಜಕ್ಕೂ ಒಳ್ಳೆಯ ಸಂಪ್ರದಾಯ.ಸಾದರ ಸಮುದಾಯ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯಾಗಿ ಪರಿವರ್ತಿಸುತ್ತಿರುವುದು ಪುಣ್ಯದ ಕೆಲಸ.ಸಾದರ ಸಮಾಜ ಬುದ್ದಿವಂತ ಮತ್ತು ಸುಸಂಸ್ಕೃತ ಸಮಾಜ.ತನ್ನ ಒಳ್ಳೆಯತನದಿಂದಲೇ ಎಲ್ಲಾ ಸಮುದಾಯಗಳ ವಿಶ್ವಾಸವನ್ನು ಗಳಿಸಿದೆ.ಹಾಗಾಗಿಯೇ ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಲಕ್ಷಿö್ಮನರಸಿಂಹಯ್ಯನವರು ಎರಡು ಬಾರಿ ಶಾಸಕರಾಗಿ, ಮಂತ್ರಿಯೂ ಆಗಲು ಕಾರಣವಾಯಿತು.ರಾಜಕೀಯ ಅಧಿಕಾರಕ್ಕಾಗಿ ಕಾಯುವುದು ಬೇಡ. ಪ್ರಯತ್ನಗಳು ನಡೆಯಬೇಕು. ನಿರಂತರ ಪ್ರಯತ್ನ ಒಮ್ಮೆಯಾದರೂ ಫಲ ನೀಡುತ್ತದೆ. ತುಮಕೂರು ಏಜುಕೇಷನ್ ಹಬ್ ಆಗಿ ಬೆಳೆಯುತ್ತಿದೆ. ಇಂತಹ ನಗರದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಹಾಸ್ಟಲ್ ನಿರ್ಮಾಣ ನಿಜಕ್ಕೂ ಶ್ಲಾಘನೀಯ. ಸದಾ ನಿಮ್ಮ ಜೊತೆ ನಾನು ಇರುತ್ತೇನೆ ಎಂದು ಭರವಸೆ ನೀಡಿದರು.
ಹಿಂದೂ ಸಾದರ ಕ್ಷೇಮಾಭಿವೃದ್ದಿ ಸಂಘದವತಿಯಿ0ದ ನಿರ್ಮಿಸಲು ಉದ್ದೇಶಿಸಿರುವ ಬಾಲಕಿಯರು ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,ಶ್ರೀಸಿದ್ದಾರ್ಥ ಇಂಜಿನಿಯರಿAಗ್ ಕಾಲೇಜು ಸ್ಥಾಪನೆ ವೇಳೆ ನಮ್ಮ ತಂದೆಗೆ ಸಾದರ ಸಮುದಾಯ ನೀಡಿದ ಕೊಡುಗೆಯನ್ನು ಹಾಗೂ ಮಧುಗಿರಿಯಲ್ಲಿ ಪ್ರಥಮ ಬಾರಿಗೆ ಚುನಾವಣೆ ಎದುರಿಸಿದಾಗ ನನಗೆ ನೀಡಿದ ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.ಶಿಕ್ಷಣವನ್ನು ಅದ್ಯತಾ ವಿಷಯವಾಗಿ ತೆಗೆದುಕೊಂಡಿರುವುದು ನಿಜಕ್ಕೂ ಮೆಚ್ಚುವಂತಹದ್ದು, ಭಾರತ ಇಂದು ಇಡೀ ವಿಶ್ವಕ್ಕೆ ತಾಂತ್ರಿಕ ಮಾನವ ಸಂಪನ್ಮೂಲವನ್ನು ನೀಡುವಷ್ಟು ಎತ್ತರಕ್ಕೆ ಬೆಳೆದಿದೆ ಎಂದರೆ ಅದಕ್ಕೆ ಶಿಕ್ಷಣಕ್ಕೆ ನೀಡಿದ ಪ್ರಾಮುಖ್ಯತೆಯೇ ಕಾರಣ ಎಂದರು.
ಸಾದರ ಕ್ಷೇಮಾಭಿವೃದ್ದಿ ಸಂಘದಿ0ದ ನೂತನ ಬಾಲಕಿಯರ ಹಾಸ್ಟಲ್ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಸರಕಾರದವತಿಯಿಂದ ಒಂದು ಕೋಟಿ ರೂ ಅನುದಾನ ಕೊಡಿಸುತ್ತೇನೆ.ಹಾಗೆಯೇ ಮಧುಗಿರಿ ಮತ್ತು ಕೊರಟಗೆರೆ ತಾಲೂಕುಗಳಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯಭವನಗಳಿಗೆ ಶಾಸಕರ ನಿಧಿಯಿಂದ ಒಟ್ಟು ೧೫ ಲಕ್ಷ ರೂ ನೀಡುವುದಾಗಿ ಘೋಷಿಸಿದ ಗೃಹ ಸಚಿವರು, ಶ್ರೇಣಿಕೃತ ಸಮಾಜ ವ್ಯವಸ್ಥೆಯಲ್ಲಿ ಕೆಳಗಿರುವವರು ಮೇಲೆ ಬರಬೇಕು ಎಂದು ಬಯಸುವಂತೆ ಮುಂದುವರೆದವರು ಅದನ್ನು ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಾರೆ.ಸಮುದಾಯದ ರಾಜಕೀಯ ಸ್ಥಾನಮಾನಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಸ್ತಾವಿಕ ನುಡಿಗಳನ್ನಾಡಿದ ಹಿಂದೂ ಸಾದರ ಕ್ಷೇಮಾಭಿವೃದ್ದಿ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ರವಿಕುಮಾರ್.ಡಿ.ಈ, ಆಳುವ ಸರಕಾರಗಳು ಪ್ರತಿಬಾರಿಯೂ ನಮ್ಮ ಕೈ ಹಿಡಿದಿವೆ.ಕರೋನದಂತಹ ಸಂದರ್ಭದಲ್ಲಿ ಅರ್ಥಿಕ ಮುಗ್ಗಟ್ಟಿನ ನಡುವೆಯೂ ಎರಡು ಹಾಸ್ಟಲ್‌ಗಳ ನಿರ್ಮಾಣಕ್ಕೆ ಸಮುದಾಯ ದಾನಿಗಳು ನೆರವಾಗಿದ್ದಾರೆ.ಈಗಲೂ ಸಹ ಸುಮಾರು ೧೪ ಕೋಟಿ ರೂ ವೆಚ್ಚದಲ್ಲಿ ತುಮಕೂರಿನಲ್ಲಿ ಮತ್ತು ಬೆಂಗಳೂರಿನಲ್ಲಿ ಬಾಲಕಿಯರ ಹಾಸ್ಟಲ್ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.ಗೌರಿಬಿದನೂರು, ಶಿರಾದಲ್ಲಿಯೂ ಸಮುದಾಯ ಭವನಗಳ ನಿರ್ಮಿಸುವ ಯೋಜನೆ ಇದೆ.ಸಮಾಜದ ಅನ್ನ ತಿಂದು ಬೆಳೆದಿದ್ದೇವೆ.ಹಾಗಾಗಿ ಅದರ ಋಣ ತೀರಿಸುವ ಕೆಲಸವನ್ನು ನಾವುಗಳು ಮಾಡುತ್ತಿದ್ದೇವೆ. ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಕಲ್ಪಿಸಲು ಗೃಹ ಸಚಿವರು, ಸಹಕಾರ ಸಚಿವರು ನೆರವಾಗಬೇಕು. ಹಾಗೆಯೇ ಎಲ್ಲಾ ಸಮುದಾಯಗಳ ರೀತಿ ಸಾದರ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಸಚಿವರುಗಳ ಮುಂದೆ ಬೇಡಿಕೆ ಇಟ್ಟರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಮಾಜಿ ಸದಸ್ಯರು ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು,ಸಮುದಾಯದ ಅಭಿವೃದ್ದಿಯ ದೃಷ್ಟಿಯಿಂದ ೧೯೪೩ರಲ್ಲಿ ಸ್ಥಾಪನೆಯಾದ ಹಿಂದೂ ಸಾದರ ಕ್ಷೇಮಾಭಿವೃದ್ದಿ ಸಂಘ ಸಮುದಾಯದ ಅಭಿವೃದ್ದಿಗೆ ನಿರಂತರವಾಗಿ ಶ್ರಮಿಸುತ್ತಿದೆ.ಸಂಘದ ಅಧ್ಯಕ್ಷರಾಗಿರುವ ರವಿಕುಮಾರ್ ಮತ್ತು ಸಂಗಡಿಗರು ಹೊಸ ಹೊಸ ಯೋಜನೆಗಳ ಮೂಲಕ ಸಮಾಜಕ್ಕೆ ಗಟ್ಟಿ ನೆಲೆಯನ್ನು ಒದಗಿಸಿದ್ದಾರೆ.ವಿದ್ಯೆ ಯಾರಿಂದಲೂ ಕಸಿಯಲಾಗದ ಸಂಪತ್ತು. ಅದರಲ್ಲಿಯೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಮಾಜಿ ಮಂತ್ರಿ ಹಾಗೂ ದೆಹಲಿ ವಿಶೇ಼ಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅವರುಗಳು ಸಮಾರಂಭ ಕುರಿತು ಮಾತನಾಡಿದರು.ಕಾರ್ಯಕ್ರಮದಲ್ಲಿ ಸಮುದಾಯದ ಅಭಿವೃದ್ದಿಗೆ ಶ್ರಮಿಸಿದ ೧೦ ಜನರಿಗೆ ಮಂಡಿ ಹರಿಯಣ್ಣ ಹಾಗು ಎಂ.ಎಸ್.ಮಲ್ಲಯ್ಯ ಪ್ರಶಸ್ತಿ, ಪ್ರತಿಭಾನ್ವಿತ ಮಕ್ಕಳಿಗೆ ಲಕ್ಷಿö್ಮನರಸಿಂಹಯ್ಯ ಸ್ಮರಣಾರ್ಥ ವಿದ್ಯಾರ್ಥಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಅಲ್ಲದೆ ಪ್ರತಿಭಾನ್ವಿತ ಮಕ್ಕಳನ್ನು ಪುರಸ್ಕರಿಸಲಾಯಿತು.
ವೇದಿಕೆಯಲ್ಲಿ ಮುಖಂಡರಾದ ಮಾಜಿ ಸಂಸದ ಜಿ.ಎಸ್.ಬಸವರಾಜು, ಕರ್ನಾಟಕ ಸರಕಾರ ಎನ್.ಆರ್.ಐ.ಪೋರಂನ ಉಪಾಧ್ಯಕ್ಷರಾದ ಎಸ್.ಐ.ಪ್ರಕಾಶ್, ಸೊಗಡು ಶಿವಣ್ಣ,ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆAಕಟೇಶ್ವರಲು, ಹಿಂದೂ ಸಾದರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ರವಿಕುಮಾರ್.ತಾಲೂಕು ಅಧ್ಯಕ್ಷ ಡಿ.ಶಿವಕುಮಾರ್,ತುಮಕೂರು ಎ.ಡಿ.ಬಲರಾಮಯ್ಯ, ಎಸ್.ಟಿ.ಡಿ ನಾಗರಾಜು, ಡೆಲ್ಟ ರವಿ, ಸ್ವಾಮಿ ವಿವೇಕಾನಂದ ಪತ್ತಿನ ಸಹಕಾರ ಸಂಘದ ಪಿ.ಮೂರ್ತಿ,ಎ.ಡಿ.ಬಲರಾಮಯ್ಯ, ರವಿಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

 

(Visited 1 times, 1 visits today)
tumkur
Previous Article೧೭ ಮಹಿಳೆಯರು ಸೇರಿ ೩೨ ಮಂದಿಗೆ ಗಾಯ
Next Article ರಾಷ್ಟçಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ ಹೇಳಿಕೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.