ತುಮಕೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಕುಂದು ಕೊರತೆ ಸಭೆಗಳನ್ನು ಕಡ್ಡಾ ಯವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ೨೦೨೫ನೇ ವರ್ಷದ ೨ನೇ ತ್ರೆöÊಮಾಸಿಕ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ತಾಲ್ಲೂಕು ಮಟ್ಟದಲ್ಲಿ ಈ ಸಭೆಗಳನ್ನು ನಿರಂತರವಾಗಿ ನಡೆಸುವುದು ಕಡ್ಡಾಯವಾಗಿದ್ದು, ಸಮಸ್ಯೆಗಳನ್ನು ತಹಶೀಲ್ದಾರ್‌ಗಳ ಹಂತದಲ್ಲಿಯೇ ಬಗೆಹರಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೆ ಎಸ್‌ಸಿ/ಎಸ್‌ಟಿ ಸಮು ದಾಯಕ್ಕೆ ಸಂಬ0ಧಿಸಿದ0ತೆ ೪೦೩ ದೌರ್ಜನ್ಯ ಮತ್ತು ೨೦ ಪೋಕ್ಸೋ ಪ್ರಕರಣಗಳು ಬಾಕಿಯಿದ್ದು, ಇವುಗಳನ್ನು ಶೀಘ್ರದಲ್ಲಿ ಇತ್ಯ ರ್ಥಪಡಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೋಕ್ಸೋ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಈಗಾಗಲೇ ೩೩೦ ಗ್ರಾಮ ಪಂಚಾಯಿತಿಗಳಲ್ಲಿ ೨೧೦ ಪಂಚಾಯಿತಿಗಳಲ್ಲಿ ಸಭೆ ನಡೆದಿದ್ದು, ಉಳಿದ ಗ್ರಾಮ ಪಂಚಾಯಿತಿಗಳಲ್ಲಿ ಸಭೆಗಳನ್ನು ಆಯೋಜಿಸಬೇಕು.
ಜಿಲ್ಲೆಯ ಎಲ್ಲಾ ಅಕ್ಕಿ ಗಿರಣಿ ಕಾರ್ಖಾನೆಗಳಲ್ಲಿ ಕಾರ್ಮಿಕರ ಸುರಕ್ಷತೆಗಾಗಿ ಅಗತ್ಯವಾದ ಸಾಧನಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು ಅಕ್ಕಿ ಗಿರಣಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ಸಭೆಗೆ ಗೈರಾದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರಲ್ಲದೆ, ಮುಂದಿನ ಸಭೆಗೆ ಸಂಬAಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ತಿಳಿಸಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್ ಮಾತನಾಡಿ, ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಹಂತದಲ್ಲಿ ಪ್ರತಿ ತಿಂಗಳು ಪೋಕ್ಸೋ ಹಾಗೂ ಡ್ರಗ್ಸ್ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜೀತ ಪದ್ಧತಿ ಸೇರಿದಂತೆ ಇತರ ಎಲ್ಲಾ ಪ್ರಕರಣಗಳಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆ ಪ್ರತಿ ತಿಂಗಳು ಜಿಲ್ಲೆಯಲ್ಲಿನ ಎಲ್ಲ ಪೊಲೀಸ್ ಠಾಣೆಗಳಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಜನರ ಕುಂದುಕೊರತೆ ಸಭೆಗಳನ್ನು ನಡೆಸುತ್ತಿದ್ದು, ದಾಖಲಾಗಿರುವ ಎಲ್ಲ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾತನಾಡಿದರು. ಸಂಜೀವಪ್ಪ, ಸಣ್ಣಮಸಿಯಪ್ಪ, ಗೋಟೂರು ಶಿವಪ್ಪ, ವಿವಿಧ ತಾಲ್ಲೂಕು ತಹಶೀಲ್ದಾರರು ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.

(Visited 1 times, 1 visits today)