ಪಾವಗಡ: ಬಹು ದಿನಗಳ ಕನಸಿನ ಯೋಜನೆ ಗಳೂಂದಾದ ಜಲಜೀವನ ಮಿಷನ್ ವತಿಯಿಂದ ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಯಿಂದ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್ ರವರು ತಿಳಿಸಿದ್ದಾರೆ.
ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಾ, ತಾಲ್ಲೂಕಿನ ಜನತೆಗೆ ತುಂಗಭದ್ರಾ ನದಿ ಮೂಲದ ಶುದ್ಧ ಕುಡಿಯುವ ನೀರನ್ನು ನೀಡುವ ಸದುದ್ದೇಶದಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಜುಲೈ ೨೧ ಸೋಮವಾರ ಆಗಮಿಸುತ್ತಾರೆ. ತಾಲ್ಲೂಕಿನಲ್ಲಿ ಪೂರ್ಣಗೊಂಡಿರುವ ಕಾಲವು ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಗುವುದು. ತಾಲ್ಲೂಕಿನ ಜನತೆಗೆ ಫ್ಲೋರೈಡ್ ರಹಿತವಾದ ನದಿ ಮೂಲದ ಶುದ್ಧ ಕುಡಿಯುವ ನೀರನ್ನು ನೀಡುವ ಸಲುವಾಗಿ ಸುಮಾರು ೪೩೬ ಕೋಟಿ ವೆಚ್ಚದ ಯೋಜನೆಯ ಕಾಮಗಾರಿಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಇದರಿಂದ ತಾಲೂಕಿನ ೩೩ ಹಳ್ಳಿಗಳ ಮನೆಮನೆಗೂ ನೀರನ್ನು ನೀಡಲಾಗುವುದು. ಪಿಡಬ್ಲ್ಯೂಡಿ ಇಲಾಖೆಯಿಂದ ಸುಮಾರು ೬೫೦ ಲಕ್ಷ ರೂಪಾಯಿಯ ವಿವಿಧ ರೀತಿಯ ರಸ್ತೆಗಳನ್ನು ಉದ್ಘಾಟಿಸಲಾಗುವುದು. ಶಿಶು ಅಭಿವೃದ್ಧಿ ಇಲಾಖೆಯ ವತಿಯಿಂದ ತಲ ೨೦ ಲಕ್ಷ ರೂಪಾಯಿಗಳ ಎರಡು ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಲಾಗುವುದು. ಸಣ್ಣ ನೀರಾವರಿ ಇಲಾಖೆ (ಎಂಐ) ತಿಮ್ಮಾಪುರ ಗ್ರಾಮದ ಚೆಕ್ ಡ್ಯಾನ್ ಸೇರಿದಂತೆ ೧.೫೦ ಲಕ್ಷ ರೂಪಾಯಿಯ ೧೧೦ ಕಾಮಗಾರಿಗಳನ್ನು ಮತ್ತು ಗಂಗಾ ಕಲ್ಯಾಣ ಯೋಜನೆಯ ೩.೧೨ ಕೋಟಿ ವೆಚ್ಚದ ಕೊಳವೆ ಬಾವಿಗಳನ್ನು ವಿತರಣೆ ಇದರಲ್ಲಿ ೪೮೦ ಪೂರ್ಣಗೊಳಿಸಲಾಗಿದೆ. ಮತ್ತು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಸ್ಟೆಲ್ ಲೋಕಾರ್ಪಣೆ ಮಾಡಲಾಗುವುದು. ಇದೇ ರೀತಿ ಇನ್ನೂ ಹಲವಾರು ಇಲಾಖೆಯ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ತುಮಕೂರಿನಿಂದ ಪಾವಗಡದವರೆಗೆ ರಸ್ತೆ ಬದಿಯಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸಂಬAಧಿಸಿದ ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಹಾಗೂ ಗಣ್ಯರಿಗೆ ಭೋಜನ, ಕುಡಿಯುವ ನೀರು, ಮೊಬೈಲ್ ಶೌಚಾಲಯದ ವ್ಯವಸ್ಥೆಯನ್ನು ಮಾಡಬೇಕು ಎಂದು ನಿರ್ದೇಶನ ನೀಡಿದರು.
ಕಾರ್ಯಕ್ರಮದ ದಿನ ವಾಹನ ದಟ್ಟಣೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಭದ್ರತಾ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಡಿ ೪೩೬ ಕೋಟಿ ರೂ., ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ೧೩೦ ಕೋಟಿ ರೂ., ಪಂಚಾಯತ್ ರಾಜ್ ಇಲಾಖೆಯ ೩೦ ಕೋಟಿ ರೂ. ಕಾಮಗಾರಿ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ೩೧೮ ಕೋಟಿ ರೂ. ಹಾಗೂ ಏಕಗ್ರಾಮ ಕುಡಿಯುವ ನೀರಿನ ಯೋಜನೆಯಡಿ ೧೧೮ ಕೋಟಿ ರೂ.ಗಳ ವೆಚ್ಚದ ಕಾಮಗಾರಿ ಸೇರಿದಂತೆ ಒಟ್ಟು ೬೦೩ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಪಟ್ಟಣದ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರು, ಮುಖ್ಯಮಂತ್ರಿಗಳ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳಿಂದ ಇಲಾಖಾವಾರು ಮಾಹಿತಿ ಪಡೆದರು. ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಜನಪರ ಯೋಜನೆಗಳ ಕುರಿತು ಮಳಿಗೆಗಳನ್ನು ತೆರೆದು ಜನರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ, ನಿವೇಶನ, ಹಕ್ಕುಪತ್ರ, ಇ-ಸ್ವತ್ತು, ಆರ್‌ಟಿಸಿ, ಮತ್ತಿತರ ಮಂಜೂರಾತಿ ಆದೇಶಗಳನ್ನು ನೀಡಬೇಕು ಹಾಗೂ ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡಬೇಕೆಂದು ಸೂಚನೆ ನೀಡಿದರು.
ಸಭೆಯ ಬಳಿಕ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಜರುಗುವ ವೇದಿಕೆ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ, ನಾಗಲಮಡಿಕೆ ಕ್ರಾಸ್ ಬಳಿ ಉದ್ಘಾಟನೆಗೆ ಸಿದ್ಧವಿರುವ ತುಂಗಭದ್ರ ಕುಡಿಯುವ ನೀರಿನ ಯೋಜನಾ ಕಾಮಗಾರಿ ಸ್ಥಳ ಪರಿಶೀಲನೆ, ಉದ್ಘಾಟನೆಗೆ ಸಿದ್ಧಗೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವೆಂಕಟರಮಣಪ್ಪ, ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ಪೊಲೀಸ್ ವರಿಷ್ಟಾಧಿಕಾರಿ ಕೆ ವಿ ಅಶೋಕ್, ತಹಸಿಲ್ದಾರ್ ಡಿ.ಎನ್. ವರದರಾಜು ಹಾಗೂ ಹಲವು ಇಲಾಖೆಯ ಜಿಲ್ಲೆಯ ಆಧಿಕಾರಿಗಳು ಹಾಗೂ ತಾಲೂಕು ಅಧಿಕಾರಿಗಳು ಭಾಗವಹಿಸಿದ್ದರು.
(Visited 1 times, 1 visits today)