ತುಮಕೂರು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾಲೇಜಿಗೊಂದು ಕನ್ನಡ ಕಾರ್ಯಕ್ರಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತುಮಕೂರು ಹಾಗೂ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ, ತುಮಕೂರು ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ನಡೆ-ಯುವ ಜನತೆಯ ಕಡೆ ಎಂಬ ಕಾಲೇಜಿಗೊಂದು ಕನ್ನಡ ಕಾರ್ಯಕ್ರಮವು ತುಮಕೂರು ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಸಹ ಕಾರ್ಯದರ್ಶಿಯಾದ ಡಾ. ಅಜಯಕುಮಾರ್ ಎಂ.ವಿ. ಇದು ಕನ್ನಡವನ್ನು ಉಳಿಸಿ, ಬೆಳೆಸುವ ಹಾಗೂ ವಿದ್ಯಾರ್ಥಿಗಳಲ್ಲಿ ನಾಡು ನುಡಿಯ ಮಹತ್ವ ತಿಳಿಸುವ ವಿಶೇಷ ಕಾರ್ಯಕ್ರಮ ಎಂದರು.
ಮುಖ್ಯ ಅತಿಥಿಗಳಾಗಿ ವಿಶೇಷ ಉಪನ್ಯಾಸ ನೀಡಿದ ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ಎಲ್.ಪಿ.ರಾಜುರವರು “ಕರ್ನಾಟಕದಲ್ಲಿ ಕ್ವಿಟ್‌ಇಂಡಿಯಾ” ಎಂಬ ವಿಷಯವನ್ನು ಮನಮುಟ್ಟುವಂತೆ ತಿಳಿಸಿದರು. ಅಂದಿನ ಕ್ವಿಟ್‌ಇಂಡಿಯಾ ಚಳುವಳಿಯಲ್ಲಿ ಕರ್ನಾಟಕದ ಪಾತ್ರ, ತುಮಕೂರು ಜಿಲ್ಲೆಯ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳ ಬಗ್ಗೆ, ವಿಶೇಷವಾಗಿ ಇದೇ ಸರ್ಕಾರಿ ಪದವಿಪೂರ್ವ ಕಾಲೇಜಿನ ಜಾಗವು ಸ್ವಾತಂತ್ರ‍್ಯ ಚಳುವಳಿಯಲ್ಲಿ ಹಲವಾರು ಸಭೆಗಳನ್ನು ನಡೆಸಿದ ಪುಣ್ಯಭೂಮಿಯೆಂದು ಶ್ಲಾಘಿಸಿದರು. ಕ್ವಿಟ್‌ಇಂಡಿಯಾ ಹೋರಾಟದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ತರವಾಗಿತ್ತೆಂದು ಇಡೀ ಕ್ವಿಟ್‌ಇಂಡಿಯಾ ಚಳುವಳಿಯ ಹೋರಾಟವನ್ನು ಎಳೆ ಎಳೆಯಾಗಿ ತಿಳಿಸುತ್ತಾ, ಮಹಾತ್ಮಗಾಂಧೀಜಿಯವರ ಪರಿಣಾಮ ಈ ಚಳುವಳಿಯಲ್ಲಿ ಅತ್ಯಂತ ಮಹತ್ತರವಾಗಿತ್ತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀ ಎಸ್.ರಾಜಕುಮಾರ್‌ರವರು ವಹಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಡು ನುಡಿಯ ಬಗ್ಗೆ ಚಿಂತನೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತದೆ ಎಂದರು.
ವೇದಿಕೆಯಲ್ಲಿ ತುಮಕೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಚಿಕ್ಕಬೆಳ್ಳಾವಿ ಶಿವಕುಮಾರ್, ಹಿರಿಯ ಉಪನ್ಯಾಸಕರಾದ ಖಾಜಿ ದಸ್ತಗಿರಿ ಹಾಗೂ ರಹಮತ್ ವುಲ್ಲಾ ಇದ್ದರು ಕಾರ್ಯಕ್ರಮದ ಪ್ರಾರ್ಥನೆಯನ್ನು ಉಪನ್ಯಾಸಕಿ ಶ್ರೀಮತಿ ಪುಷ್ಪಾವತಿ, ಸ್ವಾಗತವನ್ನು ಉಪನ್ಯಾಸಕರಾದ ಶ್ರೀ ಟಿ.ವಿ.ಪ್ರಕಾಶ್ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕಿ ಗಂಗಾ0ಭಿಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.

(Visited 1 times, 1 visits today)