ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಸಂಬ0ಧಿಸಿದ0ತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಆಗಸ್ಟ್ ಮಾಹೆಯೊಳಗಾಗಿ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಯೋಜನೆಗಳಿಗೆ ಸಂಬ0ಧಿಸಿದ0ತೆ ಜಿಲ್ಲಾ ಭೂಸ್ವಾಧೀನ ಮತ್ತು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಭೂ ಮಾಲೀಕರಿಗೆ ಪರಿಹಾರ ನೀಡಿದ್ದರೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಈಗಾಗಲೇ ಭೂಸ್ವಾಧೀನಪಡಿಸಿಕೊಂಡ ಪ್ರದೇಶದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಮುಂದುವರೆಸಬೇಕು ಎಂದು ನಿರ್ದೇಶನ ನೀಡಿದರು.
ಎತ್ತಿನಹೊಳೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮುರುಳಿ ಮಾತನಾಡಿ, ಎತ್ತಿನಹೊಳೆ ಯೋಜನೆಯು ಜಿಲ್ಲೆಯ ೧೪೪ ಗ್ರಾಮಗಳನ್ನೊಳಗೊಂಡಿದ್ದು, ಈವರೆಗೆ ೩೫೨೯ ಭೂ ಮಾಲೀಕರಿಗೆ ೭೪೬ಕೋಟಿ ರೂ.ಗಳ ಪರಿಹಾರವನ್ನು ಪಾವತಿಸಲಾಗಿದ್ದು, ೯೨೫ ಕೋಟಿ ರೂ.ಗಳ ಪರಿಹಾರ ಮೊತ್ತ ಪಾವತಿಗೆ ಅವಾರ್ಡ್ ಅನುಮೋದನೆಯಾಗಿದೆ. ಉಳಿದಂತೆ ೮೧೯ ಭೂ ಮಾಲೀಕರಿಗೆ ೧೬೩ಕೋಟಿ ರೂ.ಗಳ ಪರಿಹಾರ ಪಾವತಿಸಬೇಕಾಗಿದೆ ಎಂದು ಮಾಹಿತಿ ನೀಡಿದರು.
ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಮಾತನಾಡಿ, ಕೆಲವು ಕಡೆ ಭೂಸ್ವಾಧೀನಕ್ಕೆ ರೈತರು ಅಡ್ಡಿಪಡಿಸುತ್ತಿರುವುದರಿಂದ ಕಾಮಗಾರಿ ಅನುಷ್ಠಾನ ವಿಳಂಬವಾಗುತ್ತಿದೆ. ರಾಮೇನಹಳ್ಳಿ ಹಾಗೂ ಶೆಟ್ಟಿಹಳ್ಳಿ ಗ್ರಾಮದಲ್ಲಿ ೧.೩೪ ಕಿ.ಮೀ. ಪ್ರದೇಶದಲ್ಲಿ ಭೂಸ್ವಾಧೀನಪಡಿಸಿಕೊಳ್ಳಲು ಸಮಸ್ಯೆಯಿದ್ದು, ಸಮಸ್ಯೆ ತೀರಿದ ನಂತರ ಸ್ವಾಧೀನಪಡಿಸಿಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಂದುವರೆದು ಸಚಿವರು ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸುತ್ತಾ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಾಗಿ ಬ್ರಹ್ಮಸಂದ್ರ, ಮುದಿಗೆರೆಕಾವಲ್, ಕಳ್ಳಂಬೆಳ್ಳ ಹಾಗೂ ಸೀಬಿ ಅಗ್ರಹಾರ ಗ್ರಾಮದಲ್ಲಿ ಭೂಸ್ವಾಧೀನಪಡಿಸಿಕೊಂಡ ಮಾಲೀಕರಿಗೆ ಪರಿಹಾರ ಪಾವತಿಯಾಗಿಲ್ಲ. ಕೂಡಲೇ ಪಾವತಿಗೆ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ತುಮಕೂರು-ರಾಯದುರ್ಗ ಯೋಜನೆಯ ಉಪಮುಖ್ಯ ಇಂಜಿನಿಯರ್ ಮಾತನಾಡಿ, ತುಮಕೂರು-ಊರುಕೆರೆ-ಕೊರಟಗೆರೆ-ಮಧುಗಿರಿ-ಮಡಕಶಿರಾ-ಪಾವಗಡ-ದೊಡ್ಡಹಳ್ಳಿ-ರಾಯದುರ್ಗ ಮಾರ್ಗದಲ್ಲಿ ಈ ರೈಲ್ವೆ ಯೋಜನೆಯನ್ನು ಕೈಗೊಳ್ಳಲಾಗಿದ್ದು, ತುಮಕೂರು-ಊರುಕೆರೆ ರೈಲ್ವೆ ಮಾರ್ಗದಲ್ಲಿ ಈಗಾಗಲೇ ಅಗತ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಹಸ್ತಾಂತರಿಸಲಾಗಿದ್ದು, ಅಕ್ಟೋಬರ್ ಮಾಹೆಯೊಳಗಾಗಿ ರೈಲ್ವೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಊರುಕೆರೆ-ಕೊರಟಗೆರೆ-ಮಧುಗಿರಿ-ಮಡಕಶಿರಾ ಮಾರ್ಗದ ರೈಲ್ವೆ ನಿರ್ಮಾಣ ಕಾಮಗಾರಿಯನ್ನು ೨೦೨೮ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಸುಪ್ರಿಯ ಮಾತನಾಡುತ್ತಾ, ಕೆಲವು ಕಡೆ ರೈತರು ಭೂ ಪರಿಹಾರ ಪಡೆದಿದ್ದರೂ ಕಾಮಗಾರಿ ಅನುಷ್ಠಾನಕ್ಕೆ ತಡೆ ಒಡ್ಡುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದಾಗ ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸೂಚನೆ ನೀಡಿದರು.
ಹೇಮಾವತಿ ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದAತೆ ವಿಶೇಷ ಭೂಸ್ವಾಧೀನಾಧಿಕಾರಿ ಮಂಜುಳ ಸಭೆಯಲ್ಲಿ ಮಾಹಿತಿ ನೀಡುತ್ತಾ, ಮುಂದಿನ ೬ ತಿಂಗಳೊಳಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು. ಈವರೆಗೂ ಭೂಸ್ವಾಧೀನಪಡಿಸಿಕೊಂಡ ಮಾಲೀಕರಿಗೆ ಮೊದಲ ಹಂತದಲ್ಲಿ ೧೬೮ ಕೋಟಿ ರೂ. ಹಾಗೂ ೨ನೇ ಹಂತದಲ್ಲಿ ೧೫೪ ಕೋಟಿ ರೂ.ಗಳನ್ನು ಪಾವತಿಸಲಾಗಿದ್ದು, ೨೦೨೬ರ ಮಾರ್ಚ್ ಮಾಹೆಯೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ನಂತರ ಸಚಿವರು ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್, ರಾಷ್ಟಿçÃಯ ಹೆದ್ದಾರಿ ೨೩೪, ೫೪೪ಇ, ೧೫೦ಎ, ನಂದಿಹಳ್ಳಿ-ಮಲ್ಲಸAದ್ರ ಬೈಪಾಸ್ ರಸ್ತೆ ಹಾಗೂ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದರು.
ಸಭೆಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಯೋಜನೆಗಳ ವಿಶೇಷ ಭೂಸ್ವಾಧೀನಾಧಿಕಾರಿಗಳು, ಇಂಜಿನಿಯರ್‌ಗಳು, ಉಪವಿಭಾಗಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.