ತುಮಕೂರು: ಶ್ರೀ ಮ.ನಿ.ಪ್ರ. ಡಾ: ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಗಸ್ಟ್ ೧ರಂದು ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ ೧ರ ಬೆಳಿಗ್ಗೆ ೮.೩೦ ಗಂಟೆಗೆ ನಗರದ ಟೌನ್‌ಹಾಲ್ ವೃತ್ತದ ಬಳಿ “ಫ್ಲಾö್ಯಷ್ ಮೋಬ್” ಆಯೋಜನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಅವರಿಗೆ ಸೂಚನೆ ನೀಡಿದರು.
“ಫ್ಲಾö್ಯಷ್ ಮೋಬ್”ನಲ್ಲಿ ನಗರದ ಎಲ್ಲಾ ವೈದ್ಯಕೀಯ ಕಾಲೇಜು, ಇಂಜಿನಿಯರಿAಗ್ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಜ್ಞ ವೈದ್ಯರಿಂದ ಉಪನ್ಯಾಸ ಏರ್ಪಡಿಸಬೇಕು ಎಂದು ನಿರ್ದೇಶಿಸಿದರು.
ಅದೇ ರೀತಿ ಎಲ್ಲ ತಾಲೂಕುಗಳಲ್ಲಿಯೂ ದಿನಾಚರಣೆ ಪ್ರಯುಕ್ತ ಮದ್ಯ/ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಶಿಬಿರಗಳನ್ನು ಆಯೋಜಿಸಬೇಕೆಂದು ನಿರ್ದೇಶಿಸಿದರು.
ಸಮಾಜವನ್ನು ಮದ್ಯ/ಮಾದಕ ವಸ್ತುಗಳ ಸೇವನೆಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲಾ ಇಲಾಖಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಡಾ: ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತು ಆಗಸ್ಟ್ ೧ರಂದು ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿü ಬೋಧಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ತಹಶೀಲ್ದಾರರಾದ ವರದರಾಜು, ಪುರಂದರ, ಶಿಕ್ಷಣ ಸೇರಿದಂತೆ ವಿವಿಧ ತಾಲೂಕಿನ ಅಧಿಕಾರಿಗಳು ಹಾಜರಿದ್ದರು.
(Visited 1 times, 1 visits today)