ತುಮಕೂರು: ಜಿಲ್ಲೆಯಲ್ಲಿ CEPMIZ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ನಿಯಮಾನುಸಾರ ನಿಗಧಿತ ಅವಧಿಯೊಳಗೆ ಕೈಗೆತ್ತಿಕೊಳ್ಳಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಗಣಿ ಬಾಧಿತ ಪ್ರದೇಶಗಳ ಮೂಲಭೂತ ಸೌಲಭ್ಯ ಒದಗಿಸುವ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಹಲವು ತಿಂಗಳಿAದ ಕೆಲ ಕಾಮಗಾರಿಗಳು ಟೆಂಡರ್ ಹಂತದಲ್ಲೇ ಉಳಿದು ಹೋಗಿವೆ. ಕೆಲವು ಕಾಮಗಾರಿಗಳು ಟೆಂಡರ್ ಕರೆಯಲು ಬಾಕಿಯಿದ್ದು, ಕೆಲವು ಕಾಮಗಾರಿಗಳಿಗೆ ಇನ್ನೂ ಟೆಂಡರ್ ಕರೆದಿಲ್ಲ. ಕೆಲವು ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದರೂ ಕಾಮಗಾರಿಗಳು ಪೂರ್ಣಗೊಳ್ಳದೇ ಹಾಗೆ ಉಳಿದಿವೆ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೂತನ ವಿದ್ಯಾರ್ಥಿನಿಲಯಗಳು, ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಹಾಗೂ ಸಾರ್ವಜನಿಕರ ಜೀವನ ಮಟ್ಟವನ್ನು ಸುಧಾರಿಸಲು ರೂಪಿಸಿರುವ ಇತರೆ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕು. ಕಾಮಗಾ ರಿಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಿ ಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅರಣ್ಯ, ಕೃಷಿ, ಜಲಾನಯನ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಕುಡಿಯುವ ನೀರು, ಗ್ರಾಮೀಣ ರಸ್ತೆಗಳು ಹಾಗೂ ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಂಡಿರುವ ಯೋಜನೆಗಳ ಪ್ರಗತಿ ಕುರಿತು ವಿಶ್ಲೇಷಣೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯಸಂರಕ್ಷಣಾಧಿಕಾರಿ ಶಶಿಧರ್, ಗಣಿ ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲೋಕೇಶ್ ಕುಮಾರ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
(Visited 1 times, 1 visits today)