BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

By News Desk BenkiyabaleUpdated:August 02, 2025 3:18 pm

ತುಮಕೂರು: ಚುನಾವಣಾ ಆಯೋಗದ ವಿರುದ್ಧ ಆ. ೫ ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಯುವ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿಯವರು ಭಾಗವಹಿಸಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಅಕ್ರಮಗಳು ನಡೆದಿವೆ. ಹೀಗಾಗಿ ಚುನಾವಣಾ ಆಯೋಗದ ವಿರುದ್ಧ ರಾಹುಲ್‌ಗಾಂಧಿಯವರು ಪ್ರತಿಭಟನೆ ನಡೆಸಲು ಆ. ೫ ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಚುನಾವಣಾ ಆಯೋಗದ ವಿರುದ್ದ ಅನೇಕ ದೂರುಗಳು ಬಂದಿದ್ದವು ಎಂದು ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ನಮ್ಮ ದೇಶದಲ್ಲಿ ಚುನಾವಣಾ ಅಕ್ರಮಗಳ ದೂರುಗಳನ್ನು ಸರಿಯಾಗಿ ಗಮನಿಸುತ್ತಿಲ್ಲ. ಮತ ಪಟ್ಟಿಗೆ ಮತದಾರರು ಸೇರ್ಪಡೆ ಮಾಡುವ ಹಾಗೂ ಮತ ಪಟ್ಟಿಯಿಂದ ಹೆಸರುಗಳನ್ನು ತೆಗೆಯುವ ವಿಚಾರದಲ್ಲೂ ಅತಿ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮಗಳು ಆಗಿವೆ. ಹೀಗಾಗಿ ರಾಹುಲ್‌ಗಾಂಧಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕೂಡ ಈ ರೀತಿಯ ಅಕ್ರಮಗಳು ನಡೆದಿವೆ ಎಂದು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಚುನಾವಣೆಯನ್ನು ಯಾವುದೇ ಅಕ್ರಮ ಇಲ್ಲದೆ ನಡೆಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಮಹದೇವಪುರ ಕ್ಷೇತ್ರದಲ್ಲಿ ಸುಮಾರು ೫೦ ಸಾವಿರಕ್ಕೂ ಹೆಚ್ಚು ಮತದಾರರನ್ನು ಅಕ್ರಮವಾಗಿ ಮತ ಪಟ್ಟಿಗೆ ಸೇರಿಸಲಾಗಿದೆ. ಅದೇ ರೀತಿ ಮತ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಈ ರೀತಿಯ ಅಕ್ರಮಗಳು ನಡೆಯುತ್ತಿದೆ ಎಂಬುದು ನಮ್ಮ ಆರೋಪ ಎಂದರು.
ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಸಂಬAಧಿಸಿದAತೆ ಇನ್ನೊಂದು ವಾರದಲ್ಲಿ ನ್ಯಾ. ನಾಗಮೋಹನ್‌ದಾಸ್ ನೇತೃತ್ವದ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂಬ ಮಾಹಿತಿ ಇದೆ. ಹೀಗಾಗಿ ಒಳಮೀಸಲಾತಿ ಜಾರಿ ಕುರಿತು ದಲಿತ ಶಾಸಕರೊಂದಿಗೆ ಚರ್ಚೆ ಮಾಡಲು ಇಂದು ಸಂಜೆ ಸಭೆ ಕರೆದಿದ್ದೇನೆ ಎಂದು ಅವರು ತಿಳಿಸಿದರು.
ಒಳಮೀಸಲಾತಿ ಜಾರಿ ಮಾಡಬೇಕು ಎಂಬ ಉದ್ದೇಶಕ್ಕಾಗಿಯೇ ನ್ಯಾ. ನಾಗಮೋಹನ್‌ದಾಸ್ ಆಯೋಗವನ್ನು ರಚನೆ ಮಾಡಿರುವುದು. ಇದರಲ್ಲಿ ಯಾವುದೇ ಅನುಮಾನ ಬೇಡ. ಒಳಮೀಸಲಾತಿ ಜಾರಿ ಮಾಡಿಯೇ ಮಾಡುತ್ತೇವೆ ಎಂದರು.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣದ ಸಂಬAಧ ಎಸ್‌ಐಟಿ ತನಿಖೆ ನಡೆಯುತ್ತಿದೆ. ಹಾಗಾಗಿ ಈ ವಿಚಾರದ ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ತನಿಖಾ ವರದಿ ಬರುವವರೆಗೂ ಆ ಬಗ್ಗೆ ಮಾತನಾಡುವುದಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

 

(Visited 1 times, 1 visits today)
tumkur
Previous Articleಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
Next Article ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.